CM Siddaramaiah: 75 ವರ್ಷಗಳ ನಂತರವೂ ಪ್ರಜಾಪ್ರಭುತ್ವದ ರಕ್ಷಣೆ ಹೋರಾಡಬೇಕಾದ ದುಃಸ್ಥಿತಿ ಇದೆ- ಸಿಎಂ ಸಿದ್ದರಾಮಯ್ಯ ಟ್ವೀಟ್‌

ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಟ ನಡೆಸಬೇಕಾದ ವಿಷಾದನೀಯ ಸ್ಥಿತಿಯಲ್ಲಿ ಗಣರಾಜ್ಯೋತ್ಸವವನ್ನು ನಾವು ಆಚರಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

CM Siddaramaiah
Profile Rakshita Karkera Jan 26, 2025 10:14 AM

ಬೆಂಗಳೂರು: ಇಂದು 76ನೇ ಪ್ರಜಾಪ್ರಭುತ್ವ ದಿನಾಚರಣೆ(Republic Day) ಹಿನ್ನೆಲೆ ಸಿಎಂ ಸಿದ್ಧರಾಮಯ್ಯ(CM Siddaramaiah) ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ಎಕ್ಸ್‌ನಲ್ಲಿ ಸುದೀರ್ಘ ಟ್ವೀಟ್‌ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ. ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಟ ನಡೆಸಬೇಕಾದ ವಿಷಾದನೀಯ ಸ್ಥಿತಿಯಲ್ಲಿ ಗಣರಾಜ್ಯೋತ್ಸವವನ್ನು ನಾವು ಆಚರಿಸುತ್ತಿದ್ದೇವೆ ಎಂದು ಸಿಎಂ ತಿಳಿಸಿದರು.

ಇದು ಗತವೈಭವದಲ್ಲಿ ಮೈಮರೆಯದೆ ವರ್ತಮಾನದ ವಾಸ್ತವಗಳಿಗೆ ಮುಖಾಮುಖಿಯಾಗುವ ಕಾಲ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಸಂವಿಧಾನದ ಮೂರು ಮುಖ್ಯ ಆಧಾರ ಸ್ಥಂಭಗಳು ಭದ್ರವಾಗಿದ್ದು ಆರೋಗ್ಯಕರವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸಂವಿಧಾನದ ಪಾಲನೆಯಾಗುತ್ತಿದೆ ಮತ್ತು ಪ್ರಜಾಪ್ರಭುತ್ವ ಸುರಕ್ಷಿತವಾಗಿದೆ ಎಂದು ಅರ್ಥ. ಕಟುವಾದ ಸತ್ಯ ಏನೆಂದರೆ ಸರ್ವಾಧಿಕಾರದ ದಂಡದಡಿ ನಮ್ಮ ಕಾರ್ಯಾಂಗ ಕರ್ತವ್ಯಭ್ರಷ್ಟಗೊಳ್ಳುತ್ತಿದೆ, ಶಾಸಕಾಂಗವನ್ನು ಖರೀದಿಸಲಾಗುತ್ತಿದೆ ಮತ್ತು ನ್ಯಾಯಾಂಗಕ್ಕೆ ಬೆದರಿಕೆ ಒಡ್ಡಿ ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಷಡ್ಯಂತ್ರ ನಡೆಯುತ್ತಿದೆ.



ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಆಧಾರ ಸ್ಥಂಭಗಳು ದುರ್ಬಲಗೊಂಡು ಶಕ್ತಿಹೀನವಾದಾಗ ಸಂವಿಧಾನವೇ ಅಪ್ರಸ್ತುತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲಾಗುವ ಸಾಧ್ಯತೆಗಳಿವೆ. ಇಂತಹದ್ದೊಂದು ಅಪಾಯದ ಸ್ಥಿತಿಯಲ್ಲಿ ಭಾರತ ಇಂದು ನಿಂತಿದೆ. ಪ್ರಜಾಪ್ರಭುತ್ವವನ್ನು ಉಳಿಸುವ ದೊಡ್ಡ ಜವಾಬ್ದಾರಿ ಪ್ರತಿಯೊಬ್ಬ ಪ್ರಜೆಯ ಹೆಗಲ ಮೇಲಿದೆ.

ಜಾತಿ, ಮತ, ಪಂಥ, ಪ್ರದೇಶದ ಭೇದಗಳನ್ನು ಮರೆತು ಇಡೀ ದೇಶ ಒಂದಾಗಿ ಹೊರಗಿನ ಶತ್ರುಗಳನ್ನು ಹೊಡೆದೋಡಿಸಲು ಹೇಗೆ ಸ್ವಾತಂತ್ರ್ಯಹೋರಾಟ ನಡೆಸಲಾಯಿತೋ, ಅಂತಹದ್ದೇ ಒಂದು ಹೋರಾಟವನ್ನು ದೇಶದೊಳಗಿನ ಸಂವಿಧಾನ ವಿರೋಧಿ ಶತ್ರುಗಳ ವಿರುದ್ಧ ನಡೆಸಬೇಕಾಗಿದೆ. ಇದಕ್ಕಾಗಿ ಎರಡನೇ ಸ್ವಾತಂತ್ರ್ಯ ಹೋರಾಟ ನಡೆಯದೆ ಹೋದರೆ ಮುಂದಿನ ಪೀಳಿಗೆಗೆ ಬದುಕುಳಿಯಲು ಪ್ರಜಾಪ್ರಭುತ್ವ ಇರುವುದಿಲ್ಲ.

ಈ ಸುದ್ದಿಯನ್ನೂ ಓದಿ: 76th Republic Day : 76ನೇ ಗಣರಾಜ್ಯೋತ್ಸವ; ಕರ್ತವ್ಯ ಪಥದಲ್ಲಿ ಸೇನಾ ಪರೇಡ್‌ಗೆ ಕ್ಷಣಗಣನೆ

ಇದೊಂದು ಜೀವನ್ಮರಣದ ಪ್ರಶ್ನೆಯಾಗಿದ್ದು, ಗಣರಾಜ್ಯೋತ್ಸವದ ದಿನವಾದ ಇಂದು ನಾವೆಲ್ಲರೂ ಒಗ್ಗೂಡಿ ದೃಢಚಿತ್ತದಿಂದ ಸಂವಿಧಾನವನ್ನು ಉಳಿಸುವ ಸಂಕಲ್ಪ ಮಾಡಬೇಕಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಮೂಲಕ ನಮ್ಮ ಭಾರತವನ್ನು ರಕ್ಷಿಸುವ ಹೋರಾಟಕ್ಕೆ ನಮಗಿರುವ ಅಸ್ತ್ರಗಳೆಂದರೆ ಗಾಂಧೀಜಿ ಮತ್ತು ಅಂಬೇಡ್ಕರ್ ಅವರ ಚಿಂತನೆಗಳು.

ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದ ನಮ್ಮ ಕಾಂಗ್ರೆಸ್ ಪಕ್ಷ ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ ಎಂಬ ಅಭಿಯಾನವನ್ನು ಪ್ರಾರಂಭಿಸಿದೆ. ನಾಡ ಬಾಂಧವರೆಲ್ಲರೂ ಪಕ್ಷ, ಪಂಥ, ಜಾತಿ-ಧರ್ಮಗಳ ಎಲ್ಲೆಯನ್ನು ಮೀರಿ ಈ ಅಭಿಯಾನದಲ್ಲಿ ಕೈ ಜೋಡಿಸಬೇಕೆಂದು ಮನವಿ ಮಾಡುತ್ತೇನೆ. ಮತ್ತೊಮ್ಮೆ ನಾಡಬಾಂಧವರಿಗೆಲ್ಲ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್.. ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಎಂದು ಶುಭಾಶಯಗಳು ಕೋರಿದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?