ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ನಮ್ಮ ಉದ್ದೇಶ- ಸಿಎಂ ಸಿದ್ದರಾಮಯ್ಯ

CM Siddaramaiah: ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ನಮ್ಮ ಉದ್ದೇಶ: ಸಿಎಂ

-

Profile Siddalinga Swamy Sep 5, 2025 4:37 PM

ಬೆಂಗಳೂರು: ಇವಿಎಂ (EVM) ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು, ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಧರ್ಮಸ್ಥಳ ಪ್ರಕರಣವನ್ನು ಎನ್.ಐ.ಎ. ಗೆ ವಹಿಸಬೇಕು ಎಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದು ಅವರೂ ಪೊಲೀಸಿನವರೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.‌

ಈ ಸುದ್ದಿಯನ್ನೂ ಓದಿ | AI city at Bidadi: ಬಿಡದಿಯಲ್ಲಿ ಭಾರತದ ಪ್ರಪ್ರಥಮ ಎಐ ಸಿಟಿ ನಿರ್ಮಾಣ; ಇಲ್ಲಿ ಏನೆಲ್ಲಾ ಇರಲಿದೆ?

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ, ಕುಟುಂಬಕ್ಕೆ ಕ್ಲೀನ್‌ ಚಿಟ್‌

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಗುರುವಾರ (ಸೆಪ್ಟೆಂಬರ್ 4) ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನ ಕೈಗೊಳ್ಳಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ (MUDA Scam Case) ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬಕ್ಕೆ ಕ್ಲೀನ್‌ ಚಿಟ್‌ ನೀಡಲಾಗಿದೆ. ನಿವೃತ್ತ ನ್ಯಾಯಾಧೀಶ ದೇಸಾಯಿ (P. N. Desai) ಸಮಿತಿಯ ವರದಿಯಲ್ಲಿ ಕ್ಲೀನ್ ಚಿಟ್ ನೀಡಲಾಗಿದ್ದು, ಈ ವರದಿಯನ್ನು ಕ್ಯಾಬಿನೆಟ್ ಅಂಗೀಕರಿಸಿದೆ. ಜತೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಬೆಂಬಲಿಗರಿಗೆ ಸಂಬಂಧಿಸಿದ ಒಟ್ಟು 11 ಪ್ರಕರಣಗಳನ್ನು ಕೈಬಿಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿ ನ್ಯಾ. ಪಿ.ಎನ್. ದೇಸಾಯಿ ಅವರ ಏಕವ್ಯಕ್ತಿ ಆಯೋಗವನ್ನು ನೇಮಕ ಮಾಡಲಾಗಿದ್ದು , ಆಯೋಗವು ಎರಡು ಸಂಪುಟಗಳಲ್ಲಿ ತನ್ನ ವರದಿಯನ್ನು ಸಲ್ಲಿಸಿದೆ. ಮುಖ್ಯಮಂತ್ರಿ ಹಾಗೂ ಅವರ ಕುಟುಂಬದ ಮೇಲೆ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ವರದಿ ಸ್ಪಷ್ಟಪಡಿಸಿದೆ. ಕೆಲವು ಅಧಿಕಾರಿಗಳ ಮೇಲೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಈ ವರದಿಯನ್ನು ಸರ್ಕಾರ ಒಪ್ಪಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.

ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 2019ರಿಂದ 2023 ರವರೆಗೆ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಾಗಿ ತನಿಖೆ ಮಾಡಿ ವರದಿಯನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು. ರೈತರು, ವಿದ್ಯಾರ್ಥಿಗಳು, ಕನ್ನಡ ಹೋರಾಟಗಾರರ ಮೇಲಿದ್ದ ಅರವತ್ತು ಪ್ರಕರಣಗಳನ್ನು ಸರ್ಕಾರ ಹಿಂಪಡೆದಿದೆ ಎಂದು ಹೇಳಿದರು.