CM Siddaramaiah: ದೇವದಾಸಿ ಪದ್ಧತಿ ಬೇರು ಸಮೇತ ಕಿತ್ತೊಗೆಯಲು ಸಿಎಂ ಸಿದ್ದರಾಮಯ್ಯ ಪಣ

CM Siddaramaiah: ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

CM Siddaramiah
Profile Siddalinga Swamy Jan 28, 2025 4:49 PM

ಬೆಂಗಳೂರು: ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್‌ಪಿ ಮತ್ತು ಡಿಸಿ (SP-DC) ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಎಚ್ಚರಿಸಿದರು.

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ ಎಂದರು.

ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ? ಈ ಬಗ್ಗೆ ವಿವರ ಕೊಡಿ ಎಂದು ಗರಂ ಆಗಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಸಿಎಂ ಅಸಮಾಧಾನ

ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ? ಎಂದು ಪ್ರಶ್ನಿಸಿದ ಸಿಎಂ ಅವರು, ಎಡಿಜಿಪಿ ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ, ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್‌ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದರು.

ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೇ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಸಭೆಯ ಗಮನಕ್ಕೆ ತಂದರು.

ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ತಗೊತೀವಿ ಎಂದು ಹೇಳಿದರು.

ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ

ಎಲ್ಲ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಶಿಷ್ಟ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ. ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ರಿವೀವ್‌ ಮೀಟಿಂಗ್ ಕರೆಯುವಂತೆ ಮುಖ್ಯಮಂತ್ರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

ಪ್ರತೀ 6 ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು.

ರಾಯಚೂರಿನ‌ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಕ್ರಿಯಾ ಸಮಿತಿ ಅಡಿಯಲ್ಲಿ ನಡೆಯುತ್ತಿರುವ ಮಹಿಳೆಯರ ಅಹೋರಾತ್ರಿ ಧರಣಿ ವಿಚಾರವನ್ನು ಮುಖ್ಯಮಂತ್ರಿ ಸಭೆಯಲ್ಲಿ ಪ್ರಸ್ತಾಪಿಸಿದರು.

ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು, ವೈಜ್ಞಾನಿಕವಾಗಿ ದೇವದಾಸಿ ಮಹಿಳೆಯರ ಸ್ಥಿತಿ ಗತಿ ಬಗ್ಗೆ ಸಮೀಕ್ಷೆ ನಡೆಸಬೇಕು ಎನ್ನುವುದು ಪ್ರತಿಭಟನಾ ನಿರತರ ಬೇಡಿಕೆಯಾಗಿದೆ ಎಂದು ಉಲ್ಲೇಖಿಸಿದ ಮುಖ್ಯಮಂತ್ರಿ ದೇವದಾಸಿಯರ ಪುನರ್ವಸತಿ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಕೇಳಿದರು. ಈ ಬಗ್ಗೆ ಕೆಲ ಹೊತ್ತು ಚರ್ಚೆ ನಡೆದ ಬಳಿಕ ದೇವದಾಸಿ ಮಹಿಳೆಯರ ಸಮಸ್ಯೆ ಮತ್ತು ಪುನರ್ವಸತಿ ಬಗ್ಗೆ ಸಮಗ್ರ ವರದಿ ಸಿದ್ದಪಡಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದರು.

ಹಕ್ಕು ಪತ್ರ ಸಮರ್ಪಕವಾಗಿ ನೀಡಿ

ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಸೂಚಿಸಿದರು. ಸಭೆಗೆ ಅಧಿಕಾರಿಗಳು ನೀಡಿರುವ ಅನುಪಾಲನಾ ವರದಿಯಲ್ಲಿ ಮುಂದಿನ ಬಾರಿ ಜಿಲ್ಲಾವಾರು ಅಂಕಿ ಅಂಶ ನಮೂದಿಸಲು ಸೂಚಿಸಲಾಯಿತು.

ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದರು.

ಪ್ರಕರಣಗಳ ತನಿಖೆಯ ಗುಣಮಟ್ಟದ ಬಗ್ಗೆ ಗಮನ ಹರಿಸಿ

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹಲವು ದಶಕಗಳಿಂದ 3℅ ಗಿಂತ ಹೆಚ್ಚಾಗಿಲ್ಲ. ಈ ಕಾರಣಕ್ಕೂ ನಾನು ಡಿಸಿಆರ್‌ಇ (DCRE) ಸೆಲ್‌ಗಳಿಗೆ ಪೊಲೀಸ್ ಠಾಣೆ ಶಕ್ತಿ ನೀಡಿದ್ದಾಗಿದೆ. ಇನ್ನೂ ಶಿಕ್ಷೆ ಪ್ರಮಾಣ ಹೆಚ್ಚಾಗದಿದ್ದರೆ ಹೇಗೆ? ಪ್ರಕರಣಗಳ ತನಿಖೆಯ ಗುಣಮಟ್ಟದ ಬಗ್ಗೆ ಗಮನ ಹರಿಸಲು ಸಿಎಂ ಸೂಚಿಸಿದರು.

ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ, ಕೌಂಟರ್ ಕೇಸ್‌ಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಾಗಿದೆಯೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಅಸಮಾಧಾನದಿಂದ ಸಭೆಯಲ್ಲಿ ಪ್ರಶ್ನಿಸಿದರು. 3 ವಿಶೇಷ ನ್ಯಾಯಾಲಯಗಳಿಗೆ ಮಾತ್ರ ಅನುಮತಿ ಸಿಕ್ಕಿದೆ. ಇನ್ನೂ 24 ವಿಶೇಷ ನ್ಯಾಯಾಲಯಗಳಿಗೆ ಅನುಮತಿ ದೊರೆತಿಲ್ಲ ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು. ಬಳಿಕ ಈ ಬಗ್ಗೆ ತಾವು ತೀವ್ರವಾಗಿ ಗಮನಿಸಿ, ಬಾಕಿ ನ್ಯಾಯಾಲಯಗಳಿಗೆ ಬೇಗ ಅನುಮತಿ ಸಿಗುವ ದಿಕ್ಕಿನಲ್ಲಿ ಗಮನ ಹರಿಸುವುದಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದರು.

ಪರಿಶಿಷ್ಠರ ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ತನಿಖೆ ತಡ ಆದಷ್ಟೂ ನ್ಯಾಯಾಲಯಗಳಲ್ಲಿ ವಿಚಾರಣೆ ತಡೆ ಆದಷ್ಟೂ ಸಾಕ್ಷಿ ನಾಶ ಆಗುತ್ತದೆ. ಈ ಪ್ರಕರಣಗಳಲ್ಲಿ Burden of proof ಆರೋಪಿಗಳ ಮೇಲಿರುತ್ತದೆ. ಆದ್ದರಿಂದ ಶಿಕ್ಷೆ ಪ್ರಮಾಣ ಹೆಚ್ಚಾಗಲೇ ಬೇಕು. ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ ಸಿಎಂ, ಆರೋಪ ಪಟ್ಟಿ ಶೀಘ್ರವಾಗಿ ಸಲ್ಲಿಸಿ ಸಾಕ್ಷ್ಯಗಳನ್ನು ಪರಿಣಾಮಕಾರಿಯಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಎಂದು ಸಿಎಂ ಸೂಚಿಸಿದರು.

ಈ ಸುದ್ದಿಯನ್ನು ಓದಿ | Reliance Jio: ವ್ಯಾಪಾರಿಗಳಿಗೆ ಗುಡ್‌ ನ್ಯೂಸ್‌! ಜಿಯೋಸೌಂಡ್‌ಪೇ ಘೋಷಣೆ ಮಾಡಿದ ರಿಲಯನ್ಸ್

ಪೋಕ್ಸೋ ಪ್ರಕರಣಗಳು ನ್ಯಾಯಾಲಯಗಳಲ್ಲಿ ದೀರ್ಘ ಕಾಲದಿಂದ ಬಾಕಿ ಇದ್ದರೆ ಪ್ರಾಸಿಕ್ಯೂಷನ್ ಜತೆ ಚರ್ಚಿಸಿ ಬೇಗ ಇತ್ಯರ್ಥ ಪಡಿಸಲು, ಶೀಘ್ರ ನ್ಯಾಯದಾನಕ್ಕೆ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?