ರಾಮನಗರ: ಬಿಗ್‌ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋಗೆ (Bigg Boss kannada12) ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ರಣಹದ್ದು (Vulture) ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದಲ್ಲಿ ಬಿಗ್ ಬಾಸ್ ಹಾಗೂ ನಟ ಕಿಚ್ಚ ಸುದೀಪ್ (Kiccha Sudeep) ವಿರುದ್ಧ ದೂರು ದಾಖಲಾಗಿದೆ. ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ರಣಹದ್ದು ಬಗ್ಗೆ ಕಿಚ್ಚ ಸುದೀಪ್ ತಪ್ಪಾದ ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ವತಿಯಿಂದ ರಾಮನಗರದ ಡಿಸಿಎಫ್‌ಗೆ ದೂರು ನೀಡಲಾಗಿದೆ.
ಬಿಗ್‌ಬಾಸ್‌ನಲ್ಲಿ ಸ್ಪರ್ಧಿಯೊಬ್ಬರ ಕುತ್ತಿಗೆಗೆ ರಣಹದ್ದು ಫೋಟೊವೊಂದನ್ನು ಹಾಕಿಸಿ ʻಹೊಂಚುಹಾಕಿ ಸಂಚು ಮಾಡಿ ಕರೆಕ್ಟ್ ಟೈಂ ಲಬಕ್ ಅಂತ ಹಿಡಿಯುವವರು ಯಾರು?ʼ ಎಂದು ಸುದೀಪ್ ಕೇಳಿದ್ದರು. ಆದರೆ ರಣಹದ್ದು ಯಾವುದೇ ಜೀವಿಗೆ ಹಾನಿ ಮಾಡುವ ಪಕ್ಷಿ ಅಲ್ಲ. ಅವು ಎಂದೂ ಬೇಟೆಯಾಡಲ್ಲ. ಅದು ಸತ್ತ ಪ್ರಾಣಿಗಳನ್ನು ಮಾತ್ರ ತಿಂದು ಪರಿಸರದ ಸಮತೋಲನ ಕಾಪಾಡುವ ಪಕ್ಷಿ. ಇದು ಯಾವುದೇ ಪ್ರಾಣಿಗಳಿಗೆ ಹಾನಿ ಮಾಡುವುದಿಲ್ಲ. ಇಂತಹ ಪಕ್ಷಿ ಬಗ್ಗೆ ಜನಪ್ರಿಯ ನಟ ಸುದೀಪ್ ಅವರು ತಪ್ಪು ಮಾಹಿತಿ ನೀಡೋದು ಸರಿಯಲ್ಲ ಎಂದು ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ಸದಸ್ಯರು ಹೇಳಿದ್ದಾರೆ.
ಅಳಿವಿನಂಚಿನಲ್ಲಿರುವ ರಣಹದ್ದು ಬಗ್ಗೆ ತಪ್ಪಾದ ಮಾಹಿತಿ ಹರಡಿರುವ ಬಿಗ್ ಬಾಸ್ ಸಂಸ್ಥೆ ಹಾಗೂ ನಟ ಸುದೀಪ್ ಅವರಿಗೆ ರಣಹದ್ದು ಬಗ್ಗೆ ಸೂಕ್ತ ರೀತಿಯಲ್ಲಿ ತಿಳಿವಳಿಕೆ ನೀಡುವಂತೆ ರಾಮನಗರ ಡಿಸಿಎಫ್ ಹಾಗೂ ಆರ್‌ಎಫ್‌ಓ ಮನ್ಸೂರ್ ಅವರಿಗೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ದೂರು ನೀಡಿದೆ.
ʻಟಾಕ್ಸಿಕ್ʼ ಟೀಸರ್ ಬಗ್ಗೆ ʻಆಮ್ ಆದ್ಮಿʼ ಕೆಂಡಾಮಂಡಲ; ʻಇದೇನಾ ಫ್ಯಾಮಿಲಿ ಸಿನಿಮಾ?' ಎಂದು ಮಹಿಳಾ ಆಯೋಗಕ್ಕೆ ದೂರು!
ಇತ್ತೀಚೆಗೆ ರಕ್ಷಿತಾ ಶೆಟ್ಟಿ ಅವರನ್ನು ನೋಡಿ ಪಿತ್ತ ನೆತ್ತಿಗೇರಿತು ಎಂದು ಹೇಳಿದ್ದಕ್ಕೆ ಕಿಚ್ಚ ಸುದೀಪ್ ವಿರುದ್ಧ ದೂರು ಕೊಡಲಾಗಿತ್ತು. ಅಲ್ಲದೆ ರಿಷಾ ಗೌಡ ಅವರ ಬಟ್ಟೆಗಳನ್ನು ವಾಷ್ ರೂಮ್‌ನಲ್ಲಿ ಇಟ್ಟ ಹಿನ್ನೆಲೆ ಗಿಲ್ಲಿ ನಟನ ವಿರುದ್ಧ ಕೂಡ ದೂರು ದಾಖಲಾಗಿತ್ತು.
ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಗ್ರ್ಯಾಂಡ್ ಫಿನಾಲೆಗೆ ಇನ್ನು ಒಂದು ವಾರ ಮಾತ್ರ ಬಾಕಿ ಇದೆ. ಪ್ರಸ್ತುತ ಮನೆಯಲ್ಲಿ ಅಶ್ವಿನಿ, ಧನುಷ್, ಗಿಲ್ಲಿ, ಕಾವ್ಯಾ, ಧ್ರುವಂತ್, ರಕ್ಷಿತಾ, ರಘು ಅವರುಗಳು ಮಾತ್ರವೇ ಉಳಿದಿದ್ದು, ಈ ಎಲ್ಲರೂ ಫಿನಾಲೆ ಸ್ಪರ್ಧಿಗಳಾಗಿದ್ದಾರೆ. ರಾಶಿಕಾ ಕೊನೆಯ ಹಂತದಲ್ಲಿ ಎಲಿಮಿನೇಟ್ ಆಗಿದ್ದಾರೆ.