ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

S L Bhyrappa: ಶುಕ್ರವಾರ ಸರ್ಕಾರಿ ಗೌರವಗಳೊಂದಿಗೆ ಎಸ್‌.ಎಲ್‌. ಭೈರಪ್ಪ ಅಂತ್ಯ ಸಂಸ್ಕಾರ: ಪ್ರತಾಪ್‌ ಸಿಂಹ

Pratap Simha: ಗುರುವಾರ ಬೆಳಗ್ಗೆ 8ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್‌.ಎಲ್‌.ಭೈರಪ್ಪ ಅವರ‌ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ ಮಧ್ಯಾಹ್ನ ಮೈಸೂರಿನ ಕಲಾ ಮಂದಿರದಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಶುಕ್ರವಾರ ಬೆಳಗ್ಗೆ ಅಂತ್ಯ ಸಂಸ್ಕಾರ ನಡೆಯಲಿದೆ.

ಶುಕ್ರವಾರ ಸರ್ಕಾರಿ ಗೌರವಗಳೊಂದಿಗೆ ಎಸ್‌.ಎಲ್‌. ಭೈರಪ್ಪ ಅಂತ್ಯ ಸಂಸ್ಕಾರ

-

Prabhakara R
Prabhakara R Sep 24, 2025 7:25 PM

ಬೆಂಗಳೂರು: ಕನ್ನಡ ಸಾರಸ್ವತ ಲೋಕದ ದಿಗ್ಗಜ, ಸರಸ್ವತಿ ಪುತ್ರ ಎಸ್‌.ಎಲ್‌.ಭೈರಪ್ಪ (Pratap Simha) ಅವರು ಇವತ್ತು ಬೆಳಗ್ಗೆ ನಮ್ಮನ್ನು ಅಗಲಿದ್ದಾರೆ. ಕರ್ನಾಟಕ ಸಾರಸ್ವತ ಲೋಕದಲ್ಲಿ ಭೈರಪ್ಪ ಅವರು ಅತ್ಯಂತ ಜನಪ್ರಿಯ ಸಾಹಿತಿ ಎಂದರೂ ತಪ್ಪಾಗಲಾರದು. ಅವರ ಅಂತ್ಯ ಸಂಸ್ಕಾರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ.

ಆರ್‌ಆರ್‌ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆ ಬಳಿ ಮಾತನಾಡಿದ ಅವರು, ಭೈರಪ್ಪ ಅವರ ಪಾರ್ಥಿವ ಶರೀರ ಸದ್ಯ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿದೆ. ನಾಳೆ ಬೆಳಗ್ಗೆ 8ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮಧ್ಯಾಹ್ನ 1 ಗಂಟೆಗೆ ಮೈಸೂರಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಮೈಸೂರಿನ ಕಲಾ ಮಂದಿರದಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ.

ನಂತರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದರು.



ಈ ಸುದ್ದಿಯನ್ನೂ ಓದಿ | SL Bhyrappa: ಭೈರಪ್ಪ ನಿಧನದಿಂದ ಸ್ನೇಹಿತನನ್ನು ಕಳೆದುಕೊಂಡಷ್ಟೇ ನೋವಾಗಿದೆ: ಕೆ.ಎಸ್‌.ಭಗವಾನ್

ಇನ್ನು ಕಳೆದ ಆರು ತಿಂಗಳಿಂದ ಭೈರಪ್ಪ ಅವರು ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಅವರ ಮನೆಯಲ್ಲಿದ್ದರು. ಭೈರಪ್ಪ ಅವರ ಕೊನೆಯ ಸಮಯದಲ್ಲಿ ವಿಶ್ವೇಶ್ವರ ಭಟ್ಟರು ಮತ್ತು ಅವರ ಕುಟುಂಬಸ್ಥರು ಆರೈಕೆ ಮಾಡಿದ್ದಾರೆ. ವಿಶ್ವೇಶ್ವರ ಭಟ್ಟರು ಸಿಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲಾಡಳಿತಕ್ಕೆ ಸಿಎಂ ನಿರ್ದೇಶನ ನೀಡಿದ್ದಾರೆ. ನಾಳೆ ಮೈಸೂರಿನಲ್ಲಿ ಅಂತಿಮ ದರ್ಶನ ಹಾಗೂ ಶುಕ್ರವಾರ ಅಂತ್ಯ ಸಂಸ್ಕಾರ ನಡೆಸಲು ಜಿಲ್ಲಾಡಳಿತ ವ್ಯವಸ್ಥೆ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ: ಸರ್ಕಾರ ಆದೇಶ

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಪದ್ಮಭೂಷಣ ಪುರಸ್ಕೃತರು, ಹಿರಿಯ ಸಾಹಿತಿ ಡಾ.ಎಸ್ಎಲ್ ಭೈರಪ್ಪ ಅವರು ಇಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ಪ್ರಕಟಿಸಿದೆ. ಡಾ.ಎಸ್ಎಲ್ ಭೈರಪ್ಪ ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ಸೇರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.