ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಶಾಸಕ ಬಸವರಾಜ್ ಶಿವಗಂಗಾ ಪಿಎ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣು

ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಆಪ್ತ ಸಹಾಯಕ ಶಿವಕುಮಾರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಸಾಲದ ಬಾಧೆ ತಾಳಲಾರದೆ ಬೆಂಗಳೂರಿನ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ಬಸವರಾಜ್ ಶಿವಗಂಗಾ ಪಿಎ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣು

ಆತ್ಮಹತ್ಯೆ ಮಾಡಿಕೊಂಡ ಶಿವಕುಮಾರ್‌. -

Prabhakara R
Prabhakara R Mar 9, 2026 3:08 PM

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ (Basavaraj Shivaganga) ಅವರ ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ದಾವಣಗೆರೆ ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದೆ.

ಮೃತ ಶಿವಕುಮಾರ್ ಮೈ ತುಂಬಾ ಸಾಲ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಕೆಲಸದಿಂದ ತೆಗೆಯಲಾಗಿತ್ತು. ಘಟನೆ ನಡೆದ ದಿನ ಹೆಂಡತಿಗೆ ವಿಡಿಯೊ ಕಾಲ್ ಮಾಡಿ, ನನಗೆ ಜೀವನ ಸಾಕಾಗಿದೆ, ಸಾಯುತ್ತೀನಿ ಎಂದು ಹೇಳಿ ಫೆ.17ರಂದು ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸ್ವಾಭಾವಿಕ ಸಾವು) ಪ್ರಕರಣ ದಾಖಲಾಗಿದೆ.

ಮಗುವನ್ನು ಕತ್ತು ಹಿಸುಕಿ ಕೊಂದು, ದಂಪತಿ ಆತ್ಮಹತ್ಯೆ

ಮಂಡ್ಯ: ಕೌಟುಂಬಿಕ ಕಲಹ ಉಲ್ಬಣಿಸಿ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣಿಗೆ (Self Harming) ಶರಣಾಗಿದ್ದಾರೆ. ಕತ್ತು ಹಿಸುಕಿದ್ದರಿಂದ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪಾರಾಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯದ (Mandya) ಕೆ.ಆರ್.ಪೇಟೆ (KR Pete) ಪಟ್ಟಣದಲ್ಲಿ ನಡೆದಿದೆ.

ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ನೇಣಿಗೆ ಶರಣಾದ ದಂಪತಿ. ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ, ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಈ ದಂಪತಿ ಕಳೆದ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ಕೆ.ಆರ್.ಪೇಟೆಯ ಜಯನಗರ ಬಡಾವಣೆ ಮನೆಯೊಂದರಲ್ಲಿ ದಂಪತಿ ಬಾಡಿಗೆಗೆ ಇದ್ದರು. ಇಂದು (ಮಾ.9) ಬೆಳಿಗ್ಗೆ ಕೌಟುಂಬಿಕ ಕಲಹದಿಂದಾಗಿ ತಮ್ಮ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ.

Hubballi News: ಹಲ್ಲೆ ಮಾಡಿದ್ದಲ್ಲದೇ ಅಟ್ರಾಸಿಟಿ ಕೇಸ್‌; ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆ

ಈ ವೇಳೆ ಮಗು ಅಸ್ವಸ್ಥಗೊಂಡಿದೆ. ಬಳಿಕ ದಂಪತಿ ನೇಣಿಗೆ ಶರಣಾಗಿದ್ದಾರೆ. ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಬದುಕುಳಿದಿದೆ. ಈವರೆಗೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆ.ಆರ್.ಪೇಟೆ ಟೌನ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.