ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tipu Jayanti : ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಸದನದಲ್ಲಿ ಕಾಂಗ್ರೆಸ್‌ ಶಾಸಕ ಪ್ರಸ್ತಾಪ, ವಿಪಕ್ಷ ಕಿಡಿ

ಸದನದಲ್ಲಿ ಟಿಪ್ಪು ಜಯಂತಿ (Tipu Jayanti) ವಿಚಾರವನ್ನು ಪ್ರಸ್ತಾಪಿಸಿದ ಕಾಶಪ್ಪನವರ್‌ ನಮ್ಮ ರಾಷ್ಟ್ರದಲ್ಲಿ ಎಲ್ಲಾ ಜಾತಿ, ಜನಾಂಗ ಇದ್ದು, ಜಾತ್ಯತೀತ ರಾಷ್ಟ್ರದಲ್ಲಿ ವಿರೋಧ ಯಾಕೆ? ಅಲ್ಪ ಸಂಖ್ಯಾತರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ವಾ? ಈ ಹಿಂದೆ ಯಡಿಯೂರಪ್ಪ ಹಾಗೂ ಜಗದೀಶ್‌ ಶೆಟ್ಟರ್‌ ಟಿಪ್ಪು ವೇಷ ಹಾಕಿರಲಿಲ್ವಾ ಎಂದು ಪ್ರಶ್ನಿಸಿದ್ದಾರೆ. ಸರ್ಕಾರ ಇದಕ್ಕೆ ಯಾವ ರೀತಿ ಉತ್ತರಿಸಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದ್ದು, ರಾಜ್ಯದಲ್ಲಿ ಈ ಕುರಿತಾದ ಮತ್ತೊಂದು ಸುತ್ತಿನ ವಿವಾದದ ಚರ್ಚೆ ಆರಂಭವಾಗುವ ಮುನ್ಸೂಚನೆ ಇದೆ.

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ವಿಪಕ್ಷವನ್ನು ಕೆರಳಿಸಿದ ಕೈ ಪ್ರಸ್ತಾಪ

ರಾಜ್ಯದಲ್ಲಿ ಟಿಪ್ಪು ಜಯಂತಿ -

ಹರೀಶ್‌ ಕೇರ
ಹರೀಶ್‌ ಕೇರ Dec 9, 2025 3:33 PM

ಬೆಳಗಾವಿ, ಡಿ.09: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ (Belagavi assembly session) ಟಿಪ್ಪು ಜಯಂತಿ (Tipu Jayanti) ವಿಚಾರ ಇಂದು (ಡಿ. 09) ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಕುರಿತು ಕಾಂಗ್ರೆಸ್‌ ಶಾಸಕ ವಿಜಯಾನಂದ ಕಾಶಪ್ಪನವರ್‌ (Vijayananda kashappanavar) ಸರ್ಕಾರದ ಗಮನ ಸೆಳೆಯುವ ಸೂಚನೆಯಲ್ಲಿ ಉಲ್ಲೇಖಿಸಿದ್ದಾರೆ. ಆದರೆ, ವಿಪಕ್ಷಗಳು ಟಿಪ್ಪು ಜಯಂತಿ ಆಚರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿ, ಸದನದ ಬಾವಿಗಿಳಿದು ಸರ್ಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆಯಿದೆ. ಈ ಮೂಲಕ ಕೆಲವು ವರ್ಷಗಳಿಂದ ಶಮನಗೊಂಡಿದ್ದ ಟಿಪ್ಪು ಜಯಂತಿಯ ಕಿಡಿ ರಾಜ್ಯದಲ್ಲಿ ಪುನಃ ಹೊತ್ತಿಕೊಳ್ಳಬಹುದು.

ಸದನದಲ್ಲಿ ಟಿಪ್ಪು ಜಯಂತಿ ವಿಚಾರವನ್ನು ಪ್ರಸ್ತಾಪಿಸಿದ ಕಾಶಪ್ಪನವರ್‌ ನಮ್ಮ ರಾಷ್ಟ್ರದಲ್ಲಿ ಎಲ್ಲಾ ಜಾತಿ, ಜನಾಂಗ ಇದ್ದು, ಜಾತ್ಯತೀತ ರಾಷ್ಟ್ರದಲ್ಲಿ ವಿರೋಧ ಯಾಕೆ? ಅಲ್ಪ ಸಂಖ್ಯಾತರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ವಾ? ಈ ಹಿಂದೆ ಯಡಿಯೂರಪ್ಪ ಹಾಗೂ ಜಗದೀಶ್‌ ಶೆಟ್ಟರ್‌ ಟಿಪ್ಪು ವೇಷ ಹಾಕಿರಲಿಲ್ವಾ ಎಂದು ಪ್ರಶ್ನಿಸಿದ್ದಾರೆ. ಇತ್ತ ವಿಪಕ್ಷದಿಂದ ಅಧಿವೇಶನದಲ್ಲಿ ಕಾಲಹರಣ ಮಾಡಲು ಟಿಪ್ಪು ವಿಚಾರ ಉಪಯೋಗಿಸುತ್ತಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ 2013-18ರ ಸರ್ಕಾರದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅಂದಿನ ಸರ್ಕಾರ ಅಸ್ತು ಎಂದಿತ್ತು. ಆದರೆ, ಬಿಜೆಪಿ ಈ ವಿಚಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಇದೇ ಕಾರಣದಿಂದಾಗಿ ಕರಾವಳಿ ಭಾಗದಲ್ಲಿ ಸಂಘರ್ಷದ ಸನ್ನಿವೇಶ ನಿರ್ಮಾಣಗೊಂಡಿತ್ತು. ಈ ಎಲ್ಲಾ ವಿರೋಧದ ನಡುವೆಯೂ, ಅಂದಿನ ಸರ್ಕಾರ ಬಿಗಿ ಭದ್ರತೆಯಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಿತ್ತು. 2019ರಲ್ಲಿ ಆಪರೇಷನ್‌ ಕಮಲದ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಟಿಪ್ಪು ಜಯಂತಿಯನ್ನು ಸ್ಥಗಿತಗೊಳಿಸಿತ್ತು. ಮತ್ತೆ ಇದೀಗ ಕೈ ಶಾಸಕ ಕಾಶಪ್ಪನವರ್‌ ಈ ವಿಚಾರವನ್ನು ಪ್ರಸ್ತಾಪಿಸಿದ್ದು, ಸರ್ಕಾರ ಇದಕ್ಕೆ ಯಾವ ರೀತಿ ಉತ್ತರಿಸಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದ್ದು, ರಾಜ್ಯದಲ್ಲಿ ಈ ಕುರಿತಾದ ಮತ್ತೊಂದು ಸುತ್ತಿನ ವಿವಾದದ ಚರ್ಚೆ ಆರಂಭವಾಗುವ ಮುನ್ಸೂಚನೆ ಇದೆ.

ನಂದಿಬೆಟ್ಟದ ಟಿಪ್ಪು ಅರಮನೆ ಮೇಲೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್ ಹೆಸರು ಕೆತ್ತನೆ!

ಬಿಜೆಪಿ ಟಿಪ್ಪು ಜಯಂತಿಗೆ ಆರಂಭದಿಂದಲೂ ವಿರೋಧಿಸುತ್ತಾ ಬಂದಿದೆ. ಸಿದ್ದರಾಮಯ್ಯನವರು 2013 ರಿಂದ 2018ರ ವರೆಗಿನ ಸರ್ಕಾರದಲ್ಲಿ ಟಿಪ್ಪು ಜಯಂತಿಯ ಆಚರಣೆ ನಿರ್ಧಾರ ಕೈಗೊಂಡಾಗ ಬಿಜೆಪಿ ರಾಜ್ಯದ್ಯಾಂತ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿತ್ತು. ಮತ್ತೆ ಇದೀಗ ಟಿಪ್ಪು ಜಯಂತಿ ಆಚರಣೆ ವಿಚಾರ ರಾಜ್ಯದಲ್ಲಿ ಸಂಘರ್ಷದ ವಾತಾವರಣ ನಿರ್ಮಾಣ ಮಾಡಲಿದೆ ಎನ್ನಲಾಗುತ್ತಿದೆ.