ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಬೆತ್ತಲು ಮಾಡಿದ್ದಾರೆ, ಇಬ್ಬರು ಸಚಿವರ ವಜಾ ಮಾಡಿ: ಪ್ರತಿಪಕ್ಷ ನಾಯಕ ಆಗ್ರಹ
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳು ಕೂಡ ರೌಡಿಗಳಾಗಿದ್ದಾರೆ. ಅಂದರೆ ಈ ಸರಕಾರ ಕಮಿಶನ್ ಆಡಳಿತ ಮಾಡುತ್ತಿದೆ. 100 ರು. ಬಿಡುಗಡೆಯಾದರೆ 30 ರು.ಗಳಷ್ಟು ಕೆಲಸ ಮಾತ್ರ ಆಗುತ್ತದೆ. ಉಳಿದ ಶೇ.70ರಷ್ಟು ಕಮಿಷನ್‌ಗೆ ಹೋಗುತ್ತದೆ. ನಾವು ಆರೋಪ ಮಾಡಿದಾಗ ದಾಖಲೆ ಕೊಡಲು ಕೇಳಿದ್ದರು. ಈಗ ಕಾಂಗ್ರೆಸ್ ಪಕ್ಷದ ಶಾಸಕರೇ ಕಮಿಷನ್ ಬಗ್ಗೆ ಹೇಳಿದ್ದಾರೆ.
-
ಬೆಂಗಳೂರು: ಕೆಆರ್‌ಐಡಿಎಲ್ (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ) ನಲ್ಲಿ ಶೇ.7ರಷ್ಟು ಲಂಚ ಪಡೆಯುತ್ತಿರುವ ಇಬ್ಬರು ಸಚಿವರನ್ನು ಕೂಡಲೇ ವಜಾಗೊಳಿಸಿ, ಪ್ರಕರಣ ವನ್ನು ಸಿಬಿಐಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅಧಿಕೃತ ವಾಗಿ ಪತ್ರ ಬರೆದು ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಕೆಆರ್‌ಐಡಿಎಲ್ ನಲ್ಲಿ ಹೆಚ್ಚುವರಿಯಾಗಿ ಶೇ.7ರಷ್ಟು ಕಮಿಷನ್ ಪಡೆಯಲಾಗುತ್ತಿದೆ, ಈ ಬಗ್ಗೆ ಪ್ರಶ್ನಿಸಿದ ಗುತ್ತಿಗೆ ದಾರರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ: KPSC Recruitment Scam: ಕೆಪಿಎಸ್‌ಸಿ: 6 ಫಲಾನುಭವಿಗಳಿಂದ ತಪ್ಪೊಪ್ಪಿಗೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳು ಕೂಡ ರೌಡಿಗಳಾಗಿದ್ದಾರೆ. ಅಂದರೆ ಈ ಸರಕಾರ ಕಮಿಶನ್ ಆಡಳಿತ ಮಾಡುತ್ತಿದೆ. 100 ರು. ಬಿಡುಗಡೆಯಾದರೆ 30 ರು.ಗಳಷ್ಟು ಕೆಲಸ ಮಾತ್ರ ಆಗುತ್ತದೆ. ಉಳಿದ ಶೇ.70ರಷ್ಟು ಕಮಿಷನ್‌ಗೆ ಹೋಗುತ್ತದೆ. ನಾವು ಆರೋಪ ಮಾಡಿದಾಗ ದಾಖಲೆ ಕೊಡಲು ಕೇಳಿದ್ದರು. ಈಗ ಕಾಂಗ್ರೆಸ್ ಪಕ್ಷದ ಶಾಸಕರೇ ಕಮಿಷನ್ ಬಗ್ಗೆ ಹೇಳಿದ್ದಾರೆ. ಜಿಲ್ಲಾ ಉಸ್ತುವಾರಿ ಹಾಗೂ ಇಲಾಖಾ ಸಚಿವರು ಪ್ರತಿ ತಿಂಗಳು ಕಮಿಷನ್ ಪಡೆಯುತ್ತಿದ್ದಾರೆ ಎಂದು ಅಶೋಕ್ ರೈ ಹೇಳಿದ್ದಾರೆ ಎಂದರು. ಈ ಹಿಂದೆ ಬಿ.ಆರ್.ಪಾಟೀಲ್ ವಸತಿ ಇಲಾಖೆಯ ಕಮಿಷನ್ ಬಗ್ಗೆ ಮಾತಾಡಿದ್ದರು.
ಬಸವರಾಜ ರಾಯರಡ್ಡಿ ಕೆಕೆಆರ್‌ಡಿಬಿ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದಿದ್ದರು. ಆರ್ .ಬಿ.ತಿಮ್ಮಾಪುರ ಮಾಡಿದ್ದ ಅಕ್ರಮದ ಕುರಿತು ನಾನೇ ಆಡಿಯೋ ಮತ್ತು ದಾಖಲೆಗಳನ್ನು ನೀಡಿದ್ದೆ. ಸರ್ಕಾರಕ್ಕೆ ಮಾನವಿದ್ದರೆ ಆ ಇಬ್ಬರೂ ಸಚಿವರನ್ನು ವಜಾ ಮಾಡಬೇಕಿತ್ತು. ಕಾಂಗ್ರೆಸ್ ಶಾಸಕ ರೈ ಆರೋಪ ಮಾಡಿರುವ ಈ ಪ್ರಕರಣವನ್ನು ಲೋಕಾಯುಕ್ತ ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.
![]()
ಕರ್ನಾಟಕ ಇತರೆ ರಾಜ್ಯಗಳಿಗೆ ಮಾದರಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅವರ ಪ್ರಕಾರ ಈ ಏಳು ಪರ್ಸೆಂಟ್ ಕಮಿಷನ್ ಇಡೀ ದೇಶಕ್ಕೆ ಮಾದರಿ! ಇನ್ನು ಇಲಾಖಾ ತನಿಖೆ ಎಂದು ಆದೇಶ ಮಾಡಿ ಕೈ ತೊಳೆದುಕೊಳ್ಳುತ್ತಾರೆ. ಈ ಕಮಿಷನ್ ನಿಂದಾಗಿ ಒಟ್ಟು ಸುಮಾರು 800 ಕೋಟಿ ರು.ಗಳಷ್ಟು ಸಂಗ್ರಹವಾಗಿರಬಹುದು. ಕಾಂಗ್ರೆಸ್‌ಗೆ ಕರ್ನಾಟಕ ಎಟಿಎಂ ಎಂದು ಸಾಬೀತಾಗುತ್ತಿದೆ.
- ಆರ್.ಅಶೋಕ್, ಪ್ರತಿಪಕ್ಷ ನಾಯಕ