ಬೆಂಗಳೂರು: ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ (BP Harish) ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆ (Egg thrown) ನಗರದಲ್ಲಿ ಬುಧವಾರ ನಡೆದಿದೆ. ಪ್ರಧಾನಿಗಳ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ರಾಹುಲ್ ಗಾಂಧಿ ನಡೆ ಖಂಡಿಸಿ ಕೆಪಿಸಿಸಿ ಕಚೇರಿ ಮುತ್ತಿಗೆಗೆ ರಾಜ್ಯ ಬಿಜೆಪಿ ನಾಯಕರು ಮುಂದಾಗಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಆಗಮಿಸುತ್ತಿದ್ದ ಶಾಸಕ ಬಿ.ಪಿ.ಹರೀಶ್ ಅವರಿಗೆ ಕೈ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಶಾಸಕ ಹರೀಶ್ ಅವರು ಕಾರಿನಿಂದ ಇಳಿದ ಕೂಡಲೇ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಈ ವೇಳೆ ಅವರ ತಲೆಗೆ ಮೊಟ್ಟೆ ಬಿದ್ದಿದೆ. ಕೂಡಲೇ ಅಲ್ಲಿದ್ದ ಪೊಲೀಸರು ಬಿಪಿ ಹರೀಶ್ ಅವರನ್ನು ರಕ್ಷಿಸಿದ್ದಾರೆ.
ಘಟನೆ ಬಗ್ಗೆ ಬಿ.ಪಿ. ಹರೀಶ್ ಪ್ರತಿಕ್ರಿಯಿಸಿ, ನಮ್ಮ ನಾಯಕ ಅಶೋಕ್ ಕರೆದಿದ್ದರು. ಹೀಗಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಬರುತ್ತಿದ್ದಾಗ ಕಾಂಗ್ರೆಸ್ ಕಾರ್ಯಕರ್ತರು ಓಡಿಸಿಕೊಂಡು ಬಂದು ಮೊಟ್ಟೆ ಎಸೆದು, ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ದ ಹೋರಾಟಗಳು ನಡೆಯುತ್ತಿದ್ದರೆ ಇತ್ತ ಕರ್ನಾಟದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಈ ವಿಚಾರವಾಗಿ ಜಟಾಪಟಿ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಇದಕ್ಕೆ ಕೌಂಟರ್ ಆಗಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಈ ವೇಳೆ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆದ ಪ್ರಸಂಗ ನಡೆದಿದೆ.
ದೆಹಲಿ ಪ್ರತಿಭಟನೆ ಕಾವಿನ ನಡುವೆ ನೀಟ್ ಸಂಪೂರ್ಣ ರದ್ದುಗೊಳಿಸಬೇಕು ಎಂದ ತಮಿಳುನಾಡು ಸಿಎಂ ವಿಜಯ್
ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಬಿಪಿ ಹರೀಶ್ ಭಾಗಿಯಾಗಲು ಹೋಗುತ್ತಿದ್ದಾಗ ಕಿಡಿಗೇಡಿಗಳು ಅವರ ಮೇಲೆ ಮೊಟ್ಟೆ ಎಸೆದಿದ್ದಾರೆ. ಸ್ಥಳದಲ್ಲಿ ಐದಾರು ಮೊಟ್ಟೆಗಳು ಪತ್ತೆಯಾಗಿವೆ. ಮೊಟ್ಟೆ ಎಸೆದ ಕಾಂಗ್ರೆಸ್ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಪೊಲೀಸ್ ಜೀಪ್‌ನಲ್ಲೇ ಬಿ.ಪಿ. ಹರೀಶ್ ಅವರನ್ನು ಅಲ್ಲಿಂದ ಕರೆದುಕೊಂಡು ಹೋಗಲಾಗಿದೆ.