ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Vande Mataram: ವಂದೇ ಮಾತರಂ 2 ಚರಣ ಹಾಡುವ ಕಾಂಗ್ರೆಸ್ ನಿರ್ಧಾರ ರಾಜ್ಯದಲ್ಲೂ ಜಾರಿ: ಖಾಸಗಿ ಸುದ್ದಿ ವಾಹಿನಿ ಚರ್ಚೆಯಲ್ಲಿ ಡಿಕೆಶಿ

ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ 1937ರ ನಿರ್ಣಯದ ಬಗ್ಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿ ದರು. ನಮ್ಮ ಪಕ್ಷದ ಸಿದ್ಧಾಂತದಲ್ಲಿ ನನಗೆ ನಂಬಿಕೆ ಇದೆ. ನಾವು ಯಾವುದೇ ನಿರ್ಧಾರ ಕೈಗೊಂಡಿದ್ದರೂ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ಭವಿಷ್ಯದಲ್ಲಿ ಹಾಗೂ ಯಾವುದೇ ಸರಕಾರಿ ಕಾರ್ಯಕ್ರಮಗಳಲ್ಲೂ ಈ ಹಿಂದೆ ನಿರ್ಧರಿಸಿರುವ ವಂದೇ ಮಾತರಂನ ಎರಡು ಚರಣಗಳಿಗೆ ಮಾತ್ರ ಬದ್ಧರಾಗಿರುತ್ತೇವೆ

ಬೆಂಗಳೂರು: ಸರಕಾರಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಯಾದ ವಂದೇ ಮಾತರಂ(Vande Mataram)ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂಬ ಕಾಂಗ್ರೆಸ್ ಪಕ್ಷದ ನಿಲುವಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ದ್ದಾರೆ. ಪಕ್ಷದ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಇಂಡಿಯಾ ಟುಡೇ ದುಂಡುಮೇಜಿನ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ 1937ರ ನಿರ್ಣಯದ ಬಗ್ಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು. ನಮ್ಮ ಪಕ್ಷದ ಸಿದ್ಧಾಂತದಲ್ಲಿ ನನಗೆ ನಂಬಿಕೆ ಇದೆ. ನಾವು ಯಾವುದೇ ನಿರ್ಧಾರ ಕೈಗೊಂಡಿದ್ದರೂ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ಭವಿಷ್ಯದಲ್ಲಿ ಹಾಗೂ ಯಾವುದೇ ಸರಕಾರಿ ಕಾರ್ಯಕ್ರಮಗಳಲ್ಲೂ ಈ ಹಿಂದೆ ನಿರ್ಧರಿಸಿರುವ ವಂದೇ ಮಾತರಂನ ಎರಡು ಚರಣಗಳಿಗೆ ಮಾತ್ರ ಬದ್ಧರಾಗಿರುತ್ತೇವೆ ಎಂದು ಹೇಳಿದರು.

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎಲ್ಲಾ ಚರಣಗಳನ್ನು ಹಾಡುವುದನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆ ಹಾಗೂ ಈ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ನಡುವೆ ನಡೆಯು ತ್ತಿರುವ ರಾಜಕೀಯ ವಾಕ್ಸಮರದ ಹಿನ್ನೆಲೆಯಲ್ಲಿ ಶಿವಕುಮಾರ್ ಅವರ ಹೇಳಿಕೆ ಮಹತ್ವ ಪಡೆದಿದೆ.

ಇದನ್ನೂ ಓದಿ: Vande Mataram Row: ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ದೂರು; ಎಫ್‌ಐಆರ್‌ ದಾಖಲಿಸದಿದ್ದರೆ ಹೈಕೋರ್ಟ್‌ ಮೊರೆ ಹೋಗುವುದಾಗಿ ಬಿಜೆಪಿ ಮುಖಂಡ ವಿಕಾಸ್ ಎಚ್ಚರಿಕೆ

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಕಳೆದ ವಾರ ಸಾರ್ವಜನಿಕ ಹಾಗೂ ರಾಷ್ಟ್ರೀಯ ಸಭೆಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂಬ 1937ರ ಐತಿಹಾಸಿಕ ನಿರ್ಣಯವನ್ನು ಪುನರುಚ್ಚರಿಸಿತ್ತು. ಇದೇ ವೇಳೆ, ಹೊಸ ವಂದೇ ಮಾತರಂ ಮಸೂದೆಯಲ್ಲಿ ಎಲ್ಲಾ ಚರಣ ಹಾಡುವುದನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಪುನರ್ ವಿಂಗಡಣೆ ವಿರೋಧ ವಂದೇ ಮಾತರಂ ವಿಚಾರದ ಜತೆಗೆ ಜನಸಂಖ್ಯೆ ಆಧಾರಿತ ಲೋಕ ಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ತಮ್ಮ ನಿಲುವನ್ನೂ ಶಿವಕುಮಾರ್ ಸ್ಪಷ್ಟಪಡಿಸಿದರು. ಜನಸಂಖ್ಯಾ ನಿಯಂತ್ರಣ ನೀತಿಯನ್ನು ಯಶಸ್ವಿಯಾಗಿ ಜಾರಿಗೊಳಿಸಿರುವ ದಕ್ಷಿಣ ರಾಜ್ಯಗಳಿಗೆ ಕ್ಷೇತ್ರ ಪುನರ್ವಿಂಗಡಣೆಯ ಮೂಲಕ ರಾಜಕೀಯವಾಗಿ ಅನ್ಯಾಯವಾಗಬಾರದು ಎಂಬುದು ಅವರ ವಾದವಾಗಿದೆ.

ಪ್ರಸ್ತುತ ಲೋಕಸಭೆಯಲ್ಲಿ 543 ಸ್ಥಾನಗಳಿವೆ. 2026ರ ನಂತರ ನಡೆಯುವ ಮೊದಲ ಜನಗಣತಿಯ ಅಂಕಿಅಂಶಗಳು ಪ್ರಕಟವಾಗುವವರೆಗೆ ಕ್ಷೇತ್ರಗಳ ಮರುಹೊಂದಾಣಿಕೆಗೆ ಸಂವಿಧಾನಾತ್ಮಕ ನಿರ್ಬಂಧವಿದೆ. ಹೀಗಾಗಿ ಮುಂದಿನ ಕ್ಷೇತ್ರ ಪುನರ್ವಿಂಗಡಣೆ ದೇಶದ ರಾಜಕೀಯ ಸಮೀಕರಣದಲ್ಲಿ ಮಹತ್ವದ ವಿಚಾರವಾಗಿದೆ. ಮುಂದಿನ 25 ವರ್ಷಗಳವರೆಗೆ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 543ರ ಉಳಿಸಬೇಕು ಹಾಗೂ ಇದೇ ಸಂಖ್ಯೆಯೊಳಗೆ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಡಿಕೆಶಿ ಪ್ರತಿಪಾದಿಸಿದರು.