ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮೇಖ್ರಿ ಸರ್ಕಲ್‌ನಿಂದ ಹೆಬ್ಬಾಳದವರೆಗೆ ಚತುಷ್ಪಥ ಎಲಿವೇಟೆಡ್ ಕಾರಿಡಾರ್ ನಿರ್ಮಾಣ; 18 ತಿಂಗಳು ಬಳ್ಳಾರಿ ರಸ್ತೆ ಬಂದ್‌

ನಗರದ ಬಳ್ಳಾರಿ ರಸ್ತೆಯ ಯುಎಎಸ್ ಸ್ಟಾಫ್ ಕ್ವಾರ್ಟರ್ಸ್‌ನಿಂದ ಮೇಖ್ರಿ ಸರ್ಕಲ್‌ವರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ನಾಲ್ಕು ಪಥದ ಬೃಹತ್ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ನವೆಂಬರ್ 6, 2026 ರಿಂದ ಮುಂದಿನ 18 ತಿಂಗಳ ಕಾಲ ಬಳ್ಳಾರಿ ರಸ್ತೆಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ಬೆಂಗಳೂರಿನಿಂದ 18 ತಿಂಗಳು ಬಳ್ಳಾರಿ ರಸ್ತೆ ಬಂದ್‌! ಕಾರಣವೇನು?

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Nov 6, 2026 12:50 PM

ಬೆಂಗಳೂರು: ನಗರದ ಬಳ್ಳಾರಿ ರಸ್ತೆಯ (Bellary Road) ಯುಎಎಸ್ ಸ್ಟಾಫ್ ಕ್ವಾರ್ಟರ್ಸ್‌ನಿಂದ ಮೇಖ್ರಿ ಸರ್ಕಲ್‌ವರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ನಾಲ್ಕು ಪಥದ ಬೃಹತ್ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ನವೆಂಬರ್ 6, 2026 ರಿಂದ ಮುಂದಿನ 18 ತಿಂಗಳ ಕಾಲ ಬಳ್ಳಾರಿ ರಸ್ತೆಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಕಾಮಗಾರಿಯು ಮುಂದಿನ 18 ತಿಂಗಳ ಕಾಲ ನಿರಂತರವಾಗಿ ನಡೆಯಲಿದೆ.

ಇಂದಿನಿಂದ ಪ್ರಾರಂಭವಾಗಲಿರುವ ಈ ನಿರ್ಮಾಣ ಕಾಮಗಾರಿಯು 18 ತಿಂಗಳುಗಳ ಕಾಲ ಮುಂದುವರಿಯಲಿದೆ. ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಸದಾಶಿವನಗರ ಮತ್ತು ಸಂಜಯನಗರ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಬರುವ ಈ ರಸ್ತೆಯಲ್ಲಿ ವಾಹನ ಸಂಚಾರದ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ. ಇಂದಿನಿಂದ ಮೆಖ್ರಿ ಸರ್ಕಲ್‌ನಿಂದ ಹೆಬ್ಬಾಳದವರೆಗಿನ ಪ್ರಮುಖ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಲಾಗುತ್ತಿದ್ದು, ಕೇವಲ ಸರ್ವಿಸ್ ರಸ್ತೆಯಲ್ಲಿ ಮಾತ್ರವೇ ಸೀಮಿತ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಬಳ್ಳಾರಿ ರಸ್ತೆಯಲ್ಲಿ ಎಲ್ಲಾ ರೀತಿಯ ಸರಕು ಸಾಗಣೆ ವಾಹನಗಳು (ಹಗುರ, ಮಧ್ಯಮ ಮತ್ತು ಭಾರೀ ಸರಕು ವಾಹನಗಳು) ಹಾಗೂ ಕೆಎಸ್‌ಆರ್‌ಟಿಸಿ (KSRTC) ಮತ್ತು ಖಾಸಗಿ ಬಸ್‌ಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದ್ದರಿಂದ, ಹೆಬ್ಬಾಳದ ಮೂಲಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (KIA) ಮತ್ತು ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳು (ತುರ್ತು ಸೇವಾ ವಾಹನಗಳು ಸೇರಿದಂತೆ), ಕೆಳಗೆ ಸೂಚಿಸಲಾದ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಲಹೆ ನೀಡಲಾಗಿದೆ.

ಕಬ್ಬಿಗೆ 5,500 ರೂ. ಬೆಂಬಲ ಬೆಲೆಗೆ ಆಗ್ರಹ; ಕಲಬುರಗಿಯಲ್ಲಿ ರಸ್ತೆ ತಡೆದು ರೈತರಿಂದ ಪ್ರತಿಭಟನೆ, ಎಂಎಸ್‌ಪಿ ಕಾನೂನು ಜಾರಿಗೆ ಒತ್ತಾಯ

ಓಲ್ಡ್ ಹೈಗ್ರೌಂಡ್ಸ್ - ಕ್ಯಾಂಟೋನ್ಮೆಂಟ್ ರೈಲ್ವೆ ನಿಲ್ದಾಣ - ಟ್ಯಾನರಿ ರಸ್ತೆ - ನಾಗವಾರ ಮೂಲಕ ಅಥವಾ ಯಶವಂತಪುರದಿಂದ ಬೆಲ್ ಸರ್ಕಲ್ - ಔಟರ್ ರಿಂಗ್ ರಸ್ತೆ ಮೂಲಕ ತೆರಳಬಹುದು.

ವಿಮಾನ ನಿಲ್ದಾಣದಿಂದ ನಗರಕ್ಕೆ: ಹೆಬ್ಬಾಳದಲ್ಲಿ ಎಡತಿರುವು ಪಡೆದು ನಾಗವಾರ - ಕ್ವೀನ್ಸ್ ರಸ್ತೆ ಮಾರ್ಗವಾಗಿ ಅಥವಾ ಹೆಬ್ಬಾಳ ರಿಂಗ್ ರಸ್ತೆ - ಗೊರಗುಂಟೆಪಾಳ್ಯ - ಡಾ. ರಾಜ್‌ಕುಮಾರ್ ರಸ್ತೆ ಮಾರ್ಗವಾಗಿ ಬರಬಹುದು

ಸ್ಥಳೀಯ ಸಂಚಾರ: ಆನಂದನಗರ ಮತ್ತು ಆರ್.ಟಿ. ನಗರದ ಕಡೆಗೆ ತೆರಳುವವರು ಬ್ಯಾಪ್ಟಿಸ್ಟ್ ಆಸ್ಪತ್ರೆ ಸರ್ವಿಸ್ ರಸ್ತೆ ಹಾಗೂ ಸಿಬಿಐ (CBI) ಜಂಕ್ಷನ್ ಮಾರ್ಗ ಬಳಸಲು ಸೂಚಿಸಲಾಗಿದೆ. ಏರ್‌ಪೋರ್ಟ್ ರಸ್ತೆಯಲ್ಲಿ ಭಾರಿ ಕಾಮಗಾರಿ ನಡೆಯುತ್ತಿರುವುದರಿಂದ, ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರು ನಿಗದಿತ ಸಮಯಕ್ಕಿಂತ ಕನಿಷ್ಠ 1 ರಿಂದ 2 ಗಂಟೆಗಳ ಮುಂಚಿತವಾಗಿ ಹೊರಡುವುದು ಸೂಕ್ತ ಎಂದು ಸಂಚಾರಿ ಪೊಲೀಸರು ಸೂಚಿಸಿದ್ದಾರೆ.