ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಬೆಂಗಳೂರಿನ ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡು ಪ್ರೇಮಿಗಳ ಆತ್ಮಹತ್ಯೆ!

Bengaluru News: ಮನೆಯವರಿಂದ ಪ್ರೀತಿಗೆ ವಿರೋಧ ವ್ಯಕ್ತವಾಗಿದ್ದರಿಂದ ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ. ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭವಾಗಿದೆ.

ಬೆಂಗಳೂರಿನ ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡು ಪ್ರೇಮಿಗಳ ಆತ್ಮಹತ್ಯೆ!

-

Prabhakara R Prabhakara R Oct 9, 2025 9:06 PM

ಬೆಂಗಳೂರು: ತಮ್ಮ ಪ್ರೀತಿಗೆ ಮನೆಯಲ್ಲಿ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳ ಜೋಡಿಯೊಂದು ಲಾಡ್ಜ್‌ನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ನಗರದ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಪ್ರೇಮಿಗಳು ಬೆಂಕಿ ಹಚ್ಚಿಕೊಂಡ ಪರಿಣಾಮ ಕಟ್ಟಡಕ್ಕೂ ಬೆಂಕಿ ವ್ಯಾಪಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮತ್ತು ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೃತರು ಎಂದು ತಿಳಿದುಬಂದಿದೆ.

ಯುವಕ-ಯುವತಿ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮನೆಯವರಿಂದ ಈ ಪ್ರೀತಿಗೆ ವಿರೋಧ ವ್ಯಕ್ತವಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಧ್ಯಾಹ್ನ ಇಬ್ಬರೂ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಿಚನ್ 6 ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದ ಮೂರನೇ ಮಹಡಿಯಲ್ಲಿ ಇರುವ ಲಾಡ್ಜ್‌ಗೆ ಹೋಗಿದ್ದರು. ಲಾಡ್ಜ್‌ನಲ್ಲಿ ಕೊಠಡಿ ಪಡೆದ ಕೆಲವೇ ಸಮಯದಲ್ಲಿ, ಪೆಟ್ರೋಲ್ ತಂದು ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಬೆಂಕಿ ಹೊತ್ತಿಕೊಂಡ ತಕ್ಷಣ ಯುವಕ ಮತ್ತು ಯುವತಿ ಚೀರಾಡಿದ್ದು, ಅವರ ಧ್ವನಿ ಕೇಳಿ ಲಾಡ್ಜ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಿಯಂತ್ರಣಕ್ಕೆ ಮುಂದಾದರು. ಏಣಿ ಮೂಲಕ ಮೂರನೇ ಮಹಡಿಗೆ ಏರಿ, ಒಳಗೆ ಸಿಕ್ಕಿಹಾಕಿಕೊಂಡವರನ್ನು ರಕ್ಷಿಸಲು ಪ್ರಯತ್ನಿಸಲಾಯಿತು. ಆದರೆ ಆಗಾಗಲೇ ಬೆಂಕಿ ವ್ಯಾಪಕವಾಗಿ ಹರಡಿದ್ದರಿಂದ ಇಬ್ಬರ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಕೆಲವೇ ಕ್ಷಣಗಳಲ್ಲಿ ಲಾಡ್ಜ್ ಒಳಗಡೆ ದಟ್ಟ ಹೊಗೆ ವ್ಯಾಪಿಸಿ, ರೆಸ್ಟೋರೆಂಟ್‌ನಲ್ಲಿದ್ದ ಸಿಬ್ಬಂದಿ ಹಾಗೂ ಗ್ರಾಹಕರನ್ನೂ ಕೂಡ ತಕ್ಷಣ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Kantara Chapter 1: ಅಪಚಾರ ಮಾಡುವವರಿಗೆ ಹುಚ್ಚು ಹಿಡಿಸುತ್ತೇನೆ: ಪಿಲಿಚಂಡಿ ದೈವದ ನುಡಿ

ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಇದು ಪ್ರೇಮಿಗಳ ಆತ್ಮಹತ್ಯೆಯ ಘಟನೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೃತ ದೇಹಗಳನ್ನು ಪೋಸ್ಟ್‌ಮಾರ್ಟಂಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.