ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ವಿರುದ್ಧದ ಮುಡಾ ಪ್ರಕರಣಕ್ಕೆ ಸಂಬಂಧಿಸಿ ಬಿ ರಿಪೋರ್ಟ್ ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ಕುರಿತ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು, ಆದೇಶವನ್ನು ಕಾಯ್ದಿರಿಸಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧ ಮೂಡಾ ಸೈಟ್ ಹಂಚಿಕೆ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಕ್ಲೀನ್ ಚಿಟ್ ನೀಡಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಇದನ್ನು ಆಕ್ಷೇಪಿಸಿ ಸ್ನೇಹಮಯಿ ಕೃಷ್ಣ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ನಡೆದಿದೆ. ಸಿದ್ದರಾಮಯ್ಯ, ಪತ್ನಿ ವಿರುದ್ಧ ಯಾವುದೇ ಸಾಕ್ಷ್ಯಗಳು ಕಂಡುಬಂದಿಲ್ಲ. 70 ಸಾಕ್ಷ್ಯಗಳಲ್ಲಿ ಯಾರೂ ಪ್ರಭಾವ ಬೀರಿರುವುದಾಗಿ ಹೇಳಿಲ್ಲ. ಎಲ್ಲಾ ಅಂಶಗಳನ್ನು ಪರಿಗಣಿಸಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಬಿ ರಿಪೋರ್ಟ್ ತಿರಸ್ಕರಿಸಬಹುದಾದ ಲೋಪಗಳಿಲ್ಲ ಎಂದು ಲೋಕಾಯುಕ್ತ ಎಸ್‌ಪಿಪಿ ವೆಂಕಟೇಶ್ ಅರಬಟ್ಟಿ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಬಿ ರಿಪೋರ್ಟ್ ಸಂಬಂಧ ಜನವರಿ 22ಕ್ಕೆ ಆದೇಶ ಕಾಯ್ದಿರಿಯಿಸಿದ್ದಾರೆ.
ಮಾಜಿ ಸಚಿವ ಬಿ.ನಾಗೇಂದ್ರ ಜಾಮೀನು ಭವಿಷ್ಯ ನಾಳೆ ನಿರ್ಧಾರ
ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ಜಾಮೀನು ಭವಿಷ್ಯ ನಾಳೆ ನಿರ್ಧಾರ ಆಗಲಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವರಿಗೆ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಬಿ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು . ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ, ನಾಳೆಗೆ ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಬೀದಿ ನಾಯಿ ಕಡಿತದಿಂದ ಸಾವಾದರೆ, ಗಾಯವಾದರೆ ಭಾರಿ ದಂಡ: ಸುಪ್ರೀಂ ಕೋರ್ಟ್ ಎಚ್ಚರಿಕೆ
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಕೂಡ ತನಿಖೆ ನಡೆಸುತ್ತಿದೆ. ಹಾಗಾಗಿ ಬಿ ನಾಗೇಂದ್ರ ಕೋರ್ಟ್ ಮೊರೆ ಹೋಗಿದ್ದಾರೆ. ಈಗಾಗಲೇ ಬಹಳ ದಿನಗಳ ಕಾಲ ಜೈಲಿನಲ್ಲಿ ಇದ್ದು ಬಂದಿದ್ದಾರೆ. ಮತ್ತೊಮ್ಮೆ ಬಂಧನದ ಭೀತಿ ಹಿನ್ನೆಲೆ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದು, ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ ಆದೇಶ ಕಾಯ್ದಿರಿಸಿದೆ.