ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಕ್ರೀದ್‌ ಹಬ್ಬದ ವೇಳೆ ಗಲಾಟೆ ಪ್ರಕರಣ; ಬಿಜೆಪಿ ಶಾಸಕ ಶರಣು ಸಲಗರ್‌ಗೆ ಜಾಮೀನು ರಹಿತ ವಾರಂಟ್

MLA Sharanu Salagar: ಗೋಹತ್ಯೆ ವಿಚಾರ ನಡೆದ ಗಲಾಟೆ ಪ್ರಕರಣವನ್ನು ತನಿಖೆ ನಡೆಸಿರುವ ಪೊಲೀಸರು ಈಗಾಗಲೇ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ವಿಚಾರಣೆಗೆ ಶಾಸಕ ಸಲಗರ್ ಗೈರಾಗಿದ್ದ ಹಿನ್ನೆಲೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಬಿಜೆಪಿ ಶಾಸಕ ಶರಣು ಸಲಗರ್‌ಗೆ ಜಾಮೀನು ರಹಿತ ವಾರಂಟ್

ಶಾಸಕ ಶರಣು ಸಲಗರ್‌. -

Prabhakara R
Prabhakara R Jun 6, 2026 7:45 PM

ಬೀದರ್: ಬಕ್ರೀದ್‌ ಹಬ್ಬದ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ವಿಚಾರಣೆಗೆ ಗೈರಾದ ಹಿನ್ನೆಲೆ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್‌ಗೆ (Sharanu Salagar) ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.

ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್‌ಗೆ ಇದೀಗ ಕಾನೂನು ಸಂಕಷ್ಟ ಎದುರಾಗಿದೆ. ಗೋಹತ್ಯೆ ವಿಚಾರ ನಡೆದ ಗಲಾಟೆ ಪ್ರಕರಣವನ್ನು ತನಿಖೆ ನಡೆಸಿರುವ ಪೊಲೀಸರು ಈಗಾಗಲೇ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಸಂಬಂಧ ನಡೆಯಬೇಕಿದ್ದ ಸಾಕ್ಷ್ಯ ವಿಚಾರಣೆಗೆ ಶಾಸಕ ಸಲಗರ್ ಗೈರಾಗಿದ್ದರು. ಈ ಹಿನ್ನೆಲೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.

2023ರ ಜು.1ರಂದು ಬಕ್ರೀದ್ ಹಬ್ಬದ ವೇಳೆ ಅಕ್ರಮವಾಗಿ ಗೋಹತ್ಯೆ ಮಾಡಿದ್ದಾರೆಂದು ಆರೋಪಿಸಿ ಗಲಾಟೆ ಮಾಡಲಾಗಿತ್ತು. ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ಹೋಗಿ ಗೋಹತ್ಯೆ ತಡೆದಾಗ ಗಲಾಟೆ ಶುರುವಾಗಿತ್ತು. ಈ ಸಂಬಂಧ ಶಾಸಕನ ವಿರುದ್ಧ ಕೇಸ್‌ ದಾಖಲಾಗಿತ್ತು.

ಮುಸ್ಲಿಂ ಯುವಕನ ನಿರಂತರ ಕಿರುಕುಳ; ಬೇಸತ್ತು ಹಿಂದೂ ಬಾಲಕಿ ಆತ್ಮಹತ್ಯೆ

ಬೆಳಗಾವಿ: ಮುಸ್ಲಿಂ ಯುವಕನ ನಿರಂತರ ಕಿರುಕುಳಕ್ಕೆ ಅಪ್ರಾಪ್ತ ವಯಸ್ಸಿನ ಹಿಂದೂ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಿರಾಜ್ ಕಾಳೆ ಬಂಧಿತ ಆರೋಪಿ.

ಹಿಂದೂ ಯುವತಿಯ ಮನೆಗೆ ಪದೇ, ಪದೇ ಬರುತ್ತಿದ್ದ ಯುವಕ ನಿರಂತರ ಕಿರುಕುಳ ನೀಡುತ್ತಿದ್ದ. ಇದರಿಂದ ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರು ಐಗಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮನೆ ಕಟ್ಟಡ ಕೆಲಸ ಮಾಡುತ್ತಿದ್ದ ಪಿರಾಜ್ ಕಾಳೆ ಎಂಬ ಯುವಕ ಮೃತ ಯುವತಿಗೆ ಪರಿಚಯವಾಗಿದ್ದ. ಇಬ್ಬರ ನಡುವೆ ಪ್ರೀತಿ ಶುರುವಾಗಿತ್ತು. ಇದನ್ನು ಗಮನಿಸಿದ ಮನೆಯವರು ಯುವತಿಯ ಮೊಬೈಲ್ ಕಸಿದಿದ್ದರು. ಆದರೆ ಯುವಕ ಪದೇ, ಪದೇ ಯುವತಿಯ ಮನೆ ಹತ್ತಿರ ಬಂದು ಕಿರುಕುಳ ನೀಡುತ್ತಿದ್ದ ಎಂದು ಪೋಷಕರು ಆರೋಪಿಸಿದ್ದಾರೆ‌.

ಸದ್ಯ ಅಪ್ರಾಪ್ತ ಬಾಲಕಿಯ ಪೋಷಕರು ನೀಡಿರುವ ದೂರಿನ ಅನ್ವಯ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೀದರ್‌ನಲ್ಲೊಬ್ಬ ವಿಕೃತ ಕಾಮಿ; ಆಸ್ಪತ್ರೆಯ ಶವಾಗಾರದಲ್ಲಿ ಮೃತ ಮಹಿಳೆಯರ ಫೋಟೊ ಕ್ಲಿಕ್ಕಿಸುತ್ತಿದ್ದ ಮುನೀರ್ ಅಹ್ಮದ್ ಅರೆಸ್ಟ್‌

ಲವ್ ಜಿಹಾದ್ ಶಂಕೆ: ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಆದರೆ ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಪಿಯುಸಿ ಓದುತ್ತಿದ್ದ ಬಾಲಕಿಯನ್ನು ಕಳೆದುಕೊಂಡು ಕುಟುಂಬದವರು‌ ಕಣ್ಣೀರು ಹಾಕಿತ್ತಿದ್ದಾರೆ.