ಬೆಂಗಳೂರು: ಇತ್ತೀಚಿಗೆ ರಾಜ್ಯ ರಾಜಧಾನಿ ಬೆಂಗಳೂರು (Bengaluru) ನಗರದಲ್ಲಿರುವ ರಸ್ತೆಗುಂಡಿ, ಕಸ ಇತ್ಯಾದಿ ಸಮಸ್ಯೆಗಳಬಗ್ಗೆ ಉದ್ಯಮಪತಿಗಳು, ಐಟಿ ದಿಗ್ಗಜರು ಅಸಮಾಧಾನ ಹೊರಹಾಕಿದ್ದರು. ಇದೀಗ ಮಾಜಿ ಕ್ರಿಕೆಟರ್ ಸುನಿಲ್ ಜೋಶಿ (Sunil Joshi) ಕೂಡ ಬೆಂಗಳೂರಿನ ಟ್ರಾಫಿಕ್ ಜಾಮ್ (Bengaluru Traffic) ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಟ್ಯಾಗ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.
ಕೆಐಎಎಲ್ ಏರ್‌ಪೋರ್ಟ್ ರಸ್ತೆಯಲ್ಲಿ ಬೆಳಗಿನ ಜಾವ ಭಾರೀ ವಾಹನಗಳ ಸಂಚಾರ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಇದರಿಂದ ಜನ ಸಾಮಾನ್ಯರಿಗೆ ಕಿರಿಕಿರಿಯಾಗುತ್ತಿದೆ. ಈ ಬಗ್ಗೆ ಮಾಜಿ ಕ್ರಿಕೆಟರ್ ಸುನೀಲ್ ಜೋಶಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಅನುಮತಿ ಕೊಟ್ಟವರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ: CM Siddaramaiah: ಬೆಂಗಳೂರಿಗರಿಗೆ ಗುಡ್‌ನ್ಯೂಸ್; ಟ್ರಾಫಿಕ್ ಕಿರಿಕಿರಿಗೆ ಶೀಘ್ರದಲ್ಲೇ ಸಿಗಲಿದೆ ಮುಕ್ತಿ
ಸುನೀಲ್ ಜೋಶಿ ಟ್ವೀಟ್ನಲ್ಲಿ ಏನಿದೆ?
ಸಿಎಂ ಸಿದ್ದರಾಮಯ್ಯ ಸರ್, ಡಿಸಿಎಂ ಡಿಕೆ ಶಿವಕುಮಾರ್ ಸರ್, ವಿಮಾನ ನಿಲ್ದಾಣ ಮಾರ್ಗದಲ್ಲಿ ದಿನದ ವೇಳೆಯಲ್ಲೂ ಸರಕು ಮತ್ತು ನಿರ್ಮಾಣ ವಾಹನಗಳನ್ನು ಹೇಗೆ ಅನುಮತಿಸಲಾಗುತ್ತಿದೆ? ಇವುಗಳಿಗೆ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಮಾತ್ರ ಚಾಲನೆಗೆ ಅನುಮತಿ ಇರಬೇಕು ಅಲ್ಲವೇ? ಈಗ ಈ ವಾಹನಗಳು ಫಾಸ್ಟ್ ಲೇನ್‌ಗಳನ್ನು ಬಂದ್ ಮಾಡುತ್ತಿವೆ. ಇದರಿಂದ ವಿಮಾನ ನಿಲ್ದಾಣಕ್ಕೆ ಹೋಗುವ ಅಥವಾ ಬರುವ ಪ್ರಯಾಣಿಕರಿಗೆ ಭಾರೀ ಟ್ರಾಫಿಕ್ ಜಾಮ್ ಆಗುತ್ತಿದೆ. ದಯವಿಟ್ಟು ಈ ಕುರಿತು ಕ್ರಮ ಕೈಗೊಳ್ಳಿ ಸರ್, ಸಾಮಾನ್ಯ ಜನರು ಪ್ರಯಾಣಿಸಲು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ ಎಂದು ಮಾಜಿ ಕ್ರಿಕೆಟರ್ ಸುಶೀಲ್ ಜೋಶಿ ಟ್ವೀಟ್ನಲ್ಲಿ ಬರೆದಿದ್ದಾರೆ.
ಮಾಜಿ ಕ್ರಿಕೆಟರ್ ಸುನೀಲ್ ಜೋಶಿ ಅವರು ತಮ್ಮ ಟ್ವೀಟ್ ಅನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೂ ಟ್ಯಾಗ್ ಮಾಡಿದ್ದಾರೆ. ಈ ಬಗ್ಗೆ ಸಿಎಂ ಹಾಗೂ ಡಿಸಿಎಂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.