ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Crime news: ಪ್ರಜ್ವಲ್‌ ಮಾದರಿಯಲ್ಲೇ ಮತ್ತೊಬ್ಬ ವಿಕೃತ! ಮಹಿಳೆಯರ ಜೊತೆಗಿನ ಸಾವಿರಾರು ಖಾಸಗಿ ವಿಡಿಯೋ ಮಾಡಿಕೊಂಡ ದೈಹಿಕ ಶಿಕ್ಷಕ, ದೂರು

obscene videos: ಸಂತ್ರಸ್ತೆಯ ದೂರಿನ ಪ್ರಕಾರ, ದೈಹಿಕ ಶಿಕ್ಷಕ ತನ್ನ ಖಾಸಗಿ ಕ್ಷಣಗಳ ವಿಡಿಯೋಗಳನ್ನು ರೆಕಾರ್ಡ್ ಮಾಡಿದ್ದಾನೆ. ಈ ಆರೋಪಗಳಿಗೆ ಪುಷ್ಟಿ ನೀಡುವಂತೆ ಕೆಲವು ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳು ಸಂತ್ರಸ್ತೆಯ ಬಳಿಯಿವೆ. ಈ ವಿಡಿಯೋಗಳಲ್ಲಿ ಇತರ ಯುವತಿಯರು ಮತ್ತು ಮಹಿಳೆಯರ ಜೊತೆಗಿನ ದೃಶ್ಯಗಳೂ ಇವೆ ಎಂದು ಹೇಳಲಾಗಿದೆ.

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ಮಾದರಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕ್ರಿಕೆಟ್ ಕೋಚ್ ಮತ್ತು ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ (crime news) ಮಾಡಿದ್ದಾರೆ. ಬೆಂಗಳೂರಿನಲ್ಲಿ (Bengaluru) ಖಾಸಗಿ ಶಾಲೆಯೊಂದರ ದೈಹಿಕ ಶಿಕ್ಷಕನಾಗಿರುವ ಮ್ಯಾಥ್ಯೂ ಎನ್ನುವಾತನ ವಿರುದ್ಧ ಮಹಿಳೆ ಆರೋಪಿಸಿದ್ದು, ಕೆಲವು ಮಹಿಳೆಯರು ಮತ್ತು ಯುವತಿಯರ ಜೊತೆಗಿರುವ ಖಾಸಗಿ ಕ್ಷಣವನ್ನು ಮ್ಯಾಥ್ಯೂ ಸೆರೆ ಹಿಡಿದುಕೊಂಡಿದ್ದಾನೆ. ಆತನ ಬಳಿ ಸುಮಾರು 2500 ವಿಡಿಯೋಗಳಿವೆ ಎಂದು ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಮ್ಯಾಥ್ಯೂ ವಿರುದ್ಧ ಮಹಿಳಾ ಆಯೋಗದ ಮೆಟ್ಟಿಲೇರಿದ್ದಾಳೆ ಎಂದು ತಿಳಿದುಬಂದಿದೆ.

ತನ್ನನ್ನು ದೈಹಿಕವಾಗಿ ದುರ್ಬಳಕೆ ಮಾಡಿಕೊಂಡು, ಖಾಸಗಿ ಕ್ಷಣಗಳನ್ನು ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎಂದು ಆಕೆ ಆರೋಪಿಸಿದ್ದಾಳೆ. ಇದಲ್ಲದೇ, ಇತರ ಹಲವಾರು ಮಹಿಳೆಯರು ಮತ್ತು ಯುವತಿಯರ ಜೊತೆಗಿನ ಖಾಸಗಿ ಕ್ಷಣಗಳನ್ನು ಸಹ ಮ್ಯಾಥ್ಯೂ ಸೆರೆಹಿಡಿದುಕೊಂಡಿದ್ದು, ಒಟ್ಟು 2500 ವಿಡಿಯೋಗಳು ಆತನ ಬಳಿಯಿವೆ ಎಂದಿದ್ದಾಳೆ. ಸಂತ್ರಸ್ತೆಯ ದೂರಿನ ಪ್ರಕಾರ, ಮ್ಯಾಥ್ಯೂ ತನ್ನ ಖಾಸಗಿ ಕ್ಷಣಗಳ ವಿಡಿಯೋಗಳನ್ನು ರೆಕಾರ್ಡ್ ಮಾಡಿದ್ದಾನೆ. ಈ ಆರೋಪಗಳಿಗೆ ಪುಷ್ಟಿ ನೀಡುವಂತೆ ಕೆಲವು ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳು ಸಂತ್ರಸ್ತೆಯ ಬಳಿಯಿವೆ. ಈ ವಿಡಿಯೋಗಳಲ್ಲಿ ಇತರ ಯುವತಿಯರು ಮತ್ತು ಮಹಿಳೆಯರ ಜೊತೆಗಿನ ದೃಶ್ಯಗಳೂ ಇವೆ ಎಂದು ಹೇಳಲಾಗಿದೆ.

ಸಂತ್ರಸ್ತೆಗೆ ಈಗಾಗಲೇ ಮದುವೆಯಾಗಿದ್ದು, ಒಂದು ಹೆಣ್ಣು ಮಗುವಿದೆ. ತನ್ನ ಪತಿಯಿಂದ ಕಾನೂನಾತ್ಮಕವಾಗಿ ವಿಚ್ಛೇದನ ಪಡೆದಿರುವ ಈ ಮಹಿಳೆಗೆ, ತನ್ನ ಮಗಳು ಓದುತ್ತಿದ್ದ ಖಾಸಗಿ ಶಾಲೆಯಲ್ಲಿ ಮ್ಯಾಥ್ಯೂ ಪರಿಚಯವಾಗಿದೆ. ಮ್ಯಾಥ್ಯೂ ಆ ಶಾಲೆಯಲ್ಲಿ ಕ್ರಿಕೆಟ್ ಕೋಚ್ ಮತ್ತು ದೈಹಿಕ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಇಬ್ಬರ ನಡುವೆ ಪರಿಚಯ ಬೆಳೆದು, ಕೆಲವು ಕಾಲ ಜೊತೆಯಾಗಿ ವಾಸಿಸಿದ್ದಾರೆ. ಸಂತ್ರಸ್ತೆಯ ಹೇಳಿಕೆಯಂತೆ ಇಬ್ಬರು ಚರ್ಚ್‌ನ ಮುಂದೆ ಮದುವೆಯಾಗಿದ್ದಾರೆ. ಆದರೆ, ಈ ಸಂದರ್ಭದಲ್ಲಿ ದೈಹಿಕ ಸಂಪರ್ಕದ ಕ್ಷಣಗಳನ್ನು ಮ್ಯಾಥ್ಯೂ ರಹಸ್ಯವಾಗಿ ರೆಕಾರ್ಡ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಮದುವೆಯಾದ ನಂತರ ಮ್ಯಾಥ್ಯೂನ ನಿಜವಾದ ಸ್ವರೂಪ ತಿಳಿದುಬಂದಿದೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ʼನಾವು ಕೆಲ ವರ್ಷಗಳ ಕಾಲ ಜೊತೆಯಾಗಿದ್ದೆವು. ಆದರೆ, ಒಂದು ರಾತ್ರಿ ನಾನು ಮಲಗಿದ್ದಾಗ ನನ್ನ ಮೊಬೈಲ್ ಸಮೇತ ಆತ ಓಡಿಹೋಗಿದ್ದಾನೆ. ಆ ಮೊಬೈಲ್‌ನಲ್ಲಿ ಈತನ ಕೃತ್ಯಕ್ಕೆ ಸಂಬಂಧಿಸಿದ ಹೆಚ್ಚಿನ ಸಾಕ್ಷಿಗಳಿದ್ದವುʼ ಎಂದು ಸಂತ್ರಸ್ತೆ ಹೇಳಿದ್ದಾಳೆ. ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ದೂರು ತೆಗೆದುಕೊಳ್ಳುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದು, ಕೊನೆಗೆ ಮಹಿಳಾ ಆಯೋಗದ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಯೂಟ್ಯೂಬರ್‌ ಮುಕಳೆಪ್ಪ ಮೇಲೆ ಲವ್‌ ಜಿಹಾದ್‌ ದೂರು, ಪತ್ನಿ ಪೊಲೀಸ್‌ ವಶಕ್ಕೆ

ಹರೀಶ್‌ ಕೇರ

View all posts by this author