ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Cauvery Water Dispute: ರಾಜ್ಯಕ್ಕೆ ಮತ್ತೆ ಹಿನ್ನಡೆ; ಸಿಡಬ್ಲ್ಯೂಆರ್‌ಸಿ ಆದೇಶ ಎತ್ತಿ ಹಿಡಿದ CWMA, ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸೂಚನೆ!

CWMA order: ತಮಿಳುನಾಡಿಗೆ ಪ್ರತಿದಿನ 3,500 ಕ್ಯುಸೆಕ್ ನೀರು ಬಿಡಬೇಕು ಎಂದು ಕರ್ನಾಟಕಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಗುರುವಾರ ನಿರ್ದೇಶನ ನೀಡಿದೆ. ಆ ಆಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸ್ಸನ್ನು ಎತ್ತಿ ಹಿಡಿದಿದೆ.

ರಾಜ್ಯಕ್ಕೆ ಹಿನ್ನಡೆ; ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWMA ಆದೇಶ

-

Prabhakara R
Prabhakara R Jul 30, 2026 5:10 PM

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ನವದೆಹಲಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಸಿಡಬ್ಲ್ಯೂಆರ್‌ಸಿ ಆದೇಶವನ್ನು ಸಿಡಬ್ಲ್ಯೂಎಂಎ ಎತ್ತಿ ಹಿಡಿದಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ಹೊರಡಿಸಿದೆ.

ತಮಿಳುನಾಡಿಗೆ 15 ದಿನಗಳ ಕಾಲ ನಿರಂತರ ಪ್ರತಿನಿತ್ಯ 3500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರ (CWMA) ಆದೇಶ ಹೊರಡಿಸಿದೆ. ಸಭೆಯಲ್ಲಿ ಎಷ್ಟೇ ಪ್ರಬಲವಾಗಿ ವಾದ ಮಂಡನೆ ಮಾಡಿದರೂ ಕರ್ನಾಟಕಕ್ಕೆ ಯಾವುದೇ ಪ್ರಯೋಜನ ಆಗಿಲ್ಲ. ಈಗಾಗಲೇ ತಮಿಳುನಾಡಿಗೆ ನೀರು ಹರಿಸದಂತೆ ಮಂಡ್ಯ ಮೈಸೂರು ಭಾಗದಲ್ಲಿ ರೈತರು ಹೋರಾಟ ಮಾಡುತ್ತಿದ್ದು, ಇದೀಗ ಸಿಡಬ್ಲ್ಯೂಎಂಎ ಆದೇಶದ ವಿರುದ್ಧ ರೈತರ ಪ್ರತಿಭಟನೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಆ.2ಕ್ಕೆ ಸರ್ವಪಕ್ಷಗಳ ಸಭೆ ಕರೆದ ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿರುವ ಹಿನ್ನೆಲೆಯಲ್ಲಿ ರೈತ ಮತ್ತು ಕನ್ನಡಪರ ಸಂಘಟನೆಗಳಿಂದ ಆಕ್ರೋಶ ಭುಗಿಲೆದ್ದಿದೆ. ಹೀಗಾಗಿ ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಮುಂದಾಗಿರುವ ರಾಜ್ಯ ಸರ್ಕಾರ, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾನೂನು ಹಾಗೂ ರಾಜಕೀಯ ಹೋರಾಟದ ಮುಂದಿನ ಹೆಜ್ಜೆಗಳ ಕುರಿತು ಚರ್ಚಿಸಲು ಆಗಸ್ಟ್ 2ರಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸರ್ವಪಕ್ಷ ಸಭೆ (All-Party Meeting) ಕರೆದಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರ CWRC ಆದೇಶ ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ-CWMAಗೆ ಮೇಲ್ಮನವಿ ಸಲ್ಲಿಸಿದೆ. ಇಂದು ದೆಹಲಿಯಲ್ಲಿ CWMA ಸಭೆ ನಿಗದಿಯಾಗಿದೆ. ಸಭೆಯ ತೀರ್ಮಾನ ವ್ಯತಿರಿಕ್ತವಾಗಿ ಬಂದಲ್ಲಿ ಕಾವೇರಿ ಕೊಳ್ಳದ ಭಾಗದಲ್ಲಿ ರೈತರ ಪ್ರತಿಭಟನೆ ಮತ್ತೆ ಭುಗಿಲೇಳುವ ಸಾಧ್ಯತೆ ಇದೆ.

Cauvery water Dispute: ಕಾವೇರಿ ಕಿಚ್ಚು; CWRC ಆದೇಶದ ವಿರುದ್ಧ ಭುಗಿಲೆದ್ದ ರೈತರು, ಕನ್ನಡಪರ ಸಂಘಟನೆಗಳ ಆಕ್ರೋಶ

ಇನ್ನು ಸರ್ವಪಕ್ಷ ಸಭೆಯಲ್ಲಿ ಕಾವೇರಿ ನೀರು ಹಂಚಿಕೆ ಕುರಿತ ಇತ್ತೀಚಿನ ಬೆಳವಣಿಗೆಗಳು, ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ಪ್ರಾಧಿಕಾರಗಳ ಮುಂದೆ ಅನುಸರಿಸಬೇಕಾದ ಕಾನೂನು ಹಾದಿ, ರೈತರ ಹಿತಾಸಕ್ತಿ ಮತ್ತು ರಾಜ್ಯದ ನೀರಿನ ಪರಿಸ್ಥಿತಿ ಕುರಿತು ಸುದೀರ್ಘ ಚರ್ಚೆ ನಡೆಯುವ ಸಾಧ್ಯತೆಯಿದೆ.