ನವದೆಹಲಿ: ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎನ್ನುವ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದೆ. ನಾಳೆಯಿಂದಲೇ (ಆ.12) ಪ್ರತಿದಿನ 12 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು (Cauvery Water Dispute) ತಮಿಳುನಾಡಿಗೆ ಹರಿಸಬೇಕು, 15 ದಿನಗಳಲ್ಲಿ 15.50 ಟಿಎಂಸಿ ನೀರು ಹರಿಸಬೇಕು ಎಂದು ಪ್ರಾಧಿಕಾರ ಕರ್ನಾಟಕಕ್ಕೆ ನಿರ್ದೇಶಿಸಿದೆ.
ದೆಹಲಿಯಲ್ಲಿ ನಡೆದ ಪ್ರಾಧಿಕಾರದ ಉನ್ನತ ಮಟ್ಟದ ಸಭೆಯ ನಂತರ, ಈ ಬಗ್ಗೆ ರಾಜ್ಯದ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ತೀವ್ರ ಕ್ಷೀಣಿಸಿದ್ದು, ಪ್ರಮುಖ ಜಲಾಶಯಗಳಲ್ಲಿನ ನೀರು ರಾಜ್ಯದ ಜನರ ಕುಡಿಯುವ ನೀರಿನ ಅಗತ್ಯತೆಗೇ ಸಾಕಾಗುತ್ತಿಲ್ಲ ಎಂಬ ನೈಜ ಪರಿಸ್ಥಿತಿಯನ್ನು ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಸುದೀರ್ಘವಾಗಿ ವಿವರಿಸಿದ್ದರು. ಆದರೆ, ಕೃಷಿ ಚಟುವಟಿಕೆಗಳ ನೆಪವೊಡ್ಡಿ ನೀರಿಗಾಗಿ ಪಟ್ಟು ಹಿಡಿದಿದ್ದ ತಮಿಳುನಾಡಿನ ಪರವಾಗಿಯೇ ಪ್ರಾಧಿಕಾರ ತೀರ್ಮಾನ ಕೈಗೊಂಡಿದೆ.
36 ಟಿಎಂಸಿ ನೀರು ಹರಿಸಬೇಕು ಎಂದು ತಮಿಳುನಾಡು ಪಟ್ಟು ಹಿಡಿದಿತ್ತು. ಆದರೆ, ಸದ್ಯ 15 ದಿನಗಳಲ್ಲಿ 15.50 ಟಿಎಂಸಿ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ.
ಆ.13ಕ್ಕೆ ಕರ್ನಾಟಕ ಬಂದ್: ಹಿಂದೆ ಸರಿಯುವ ಮಾತೇ ಇಲ್ಲ ಎಂದ ವಾಟಾಳ್ ನಾಗರಾಜ್
ತಮಿಳುನಾಡಿಗೆ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಆಕ್ರೋಶ ಮತ್ತಷ್ಟು ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್‌ನಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದ್ದಾರೆ.
Ranjith H Ashwath Column: ಕಾವೇರಿ ಕಾವಾರಿಸಲು ಸಂಕಷ್ಟ ಸೂತ್ರವೊಂದೇ ಪರಿಹಾರ
ಈ ಕುರಿತು ಮಾತನಾಡಿರುವ ಅವರು, ಯಾರೇ ಬೆಂಬಲ ನೀಡಲಿ, ನೀಡದಿರಲಿ, ಪೂರ್ವನಿರ್ಧರಿತಂತೆ ಆಗಸ್ಟ್ 13ರಂದು ರಾಜ್ಯ ಬಂದ್ ನಡೆಸಿಯೇ ತೀರುತ್ತೇವೆ ಎಂದು ಘೋಷಿಸಿದ್ದಾರೆ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಆರೋಪಿಸಿರುವ ಕನ್ನಡಪರ ಸಂಘಟನೆಗಳು, ನೀರು ಹರಿಸುವ ಆದೇಶವನ್ನು ವಿರೋಧಿಸಿ ಬಂದ್‌ಗೆ ಕರೆ ನೀಡಿವೆ.