ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Cauvery Water Dispute: ಕರ್ನಾಟಕಕ್ಕೆ ಮತ್ತೆ ಅನ್ಯಾಯ; ತಮಿಳುನಾಡಿಗೆ ಪ್ರತಿದಿನ 3000 ಕ್ಯುಸೆಕ್ ಕಾವೇರಿ ನೀರು ಹರಿಸಲು CWMA ಆದೇಶ

ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿಯ ನಡುವೆಯೂ ತಮಿಳುನಾಡಿಗೆ ನಿತ್ಯ 3,000 ಕ್ಯುಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿತ್ತು. ಕರ್ನಾಟಕದ ಅಧಿಕಾರಿಗಳು ರಾಜ್ಯದ ವಾಸ್ತವ ಬರಗಾಲದ ಪರಿಸ್ಥಿತಿಯನ್ನು ಪ್ರಾಧಿಕಾರದ ಮುಂದೆ ಮನವರಿಕೆ ಮಾಡಿಕೊಟ್ಟರೂ ಪ್ರಯೋಜನವಾಗಲ್ಲ. ಅಂತಿಮವಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸಿಡಬ್ಲ್ಯೂಆರ್‌ಸಿ ಶಿಫಾರಸನ್ನು ಎತ್ತಿಹಿಡಿದಿದೆ.

ತಮಿಳುನಾಡಿಗೆ ಪ್ರತಿದಿನ 3000 ಕ್ಯುಸೆಕ್ ಕಾವೇರಿ ನೀರು ಹರಿಸಲು ಆದೇಶ

-

Prabhakara R
Prabhakara R Oct 23, 2026 8:46 PM

ನವದೆಹಲಿ: ತಮಿಳುನಾಡಿಗೆ ಪ್ರತಿದಿನ 3,000 ಕ್ಯುಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (ಸಿಡಬ್ಲ್ಯೂಎಂಎ) ಶುಕ್ರವಾರ ಎತ್ತಿಹಿಡಿದಿದೆ. ಮುಂದಿನ 15 ದಿನಗಳ ಅವಧಿಯಲ್ಲಿ ಒಟ್ಟು 3 ಟಿಎಂಸಿ ಅಡಿ ಕಾವೇರಿ ನೀರು (Cauvery Water Dispute) ಬಿಡುಗಡೆ ಮಾಡುವಂತೆ ಕರ್ನಾಟಕ್ಕೆ ಸೂಚಿಸಲಾಗಿದೆ..

ಶುಕ್ರವಾರ ನಡೆದ ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ಜಲಾಶಯಗಳಲ್ಲಿನ ನೀರಿನ ಲಭ್ಯತೆ ಹಾಗೂ ಎರಡೂ ರಾಜ್ಯಗಳ ನೀರಿನ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯಲಾಯಿತು. ಈವರೆಗೆ ಕರ್ನಾಟಕ ತನ್ನ ಪಾಲಿನ ನೀರನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಿಲ್ಲ ಎಂದು ತಮಿಳುನಾಡು ಆಕ್ಷೇಪಿಸಿದ್ದು, ಹೆಚ್ಚಿನ ಪ್ರಮಾಣದ ನೀರು ಹರಿಸುವಂತೆ ಮನವಿ ಸಲ್ಲಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕ, ಈಗಾಗಲೇ ಕಾವೇರಿ ನದಿಯ ಮೂಲಕ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲಾಗಿದೆ ಎಂದು ತಿಳಿಸಿತು. ರಾಜ್ಯದಲ್ಲಿ ಮಳೆಯ ಕೊರತೆಯಿಂದ ಜಲಾಶಯಗಳ ನೀರಿನ ಮಟ್ಟ ಕುಸಿದಿದ್ದು, ಈ ಪರಿಸ್ಥಿತಿಯಲ್ಲಿ ಮತ್ತಷ್ಟು ನೀರು ಬಿಡುಗಡೆ ಮಾಡುವುದು ಕಷ್ಟಕರವಾಗಿದೆ ಎಂದು ತನ್ನ ವಾದವನ್ನು ಮಂಡಿಸಿತು.

ಎರಡೂ ರಾಜ್ಯಗಳ ವಾದಗಳನ್ನು ಆಲಿಸಿದ್ದ ಸಮಿತಿ, ತಮಿಳುನಾಡಿಗೆ ಪ್ರತಿದಿನ 3,000 ಕ್ಯುಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ, 15 ದಿನಗಳ ಅವಧಿಯಲ್ಲಿ ಒಟ್ಟು 3 ಟಿಎಂಸಿ ಅಡಿ ನೀರು ಹರಿಸುವಂತೆಯೂ ನಿರ್ದೇಶನ ನೀಡಿತ್ತು. ಇದೀಗ ಸಿಡಬ್ಲ್ಯೂಆರ್‌ಸಿ ಶಿಫಾರಸನ್ನು ಸಿಡಬ್ಲ್ಯೂಎಂಎ ಎತ್ತಿಹಿಡಿದಿದೆ.