Cauvery Water Dispute: ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಿದ CWRC; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ!
ಕರ್ನಾಟಕವು ಮಳೆ ಕೊರತೆ ಮತ್ತು ಜಲಾಶಯಗಳಲ್ಲಿನ ನೀರಿನ ಸಂಗ್ರಹ ಕುಸಿತದ ಬಗ್ಗೆ ವಿವರಿಸಿದ್ದು, ಸದ್ಯ ತಮಿಳುನಾಡಿಗೆ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ನಷ್ಟು ನೀರು ಬಿಡುವ ಸ್ಥಿತಿಯಲ್ಲಿ ಕರ್ನಾಟಕ ಇಲ್ಲ ಎನ್ನುವುದನ್ನು ಸಿಡಬ್ಲ್ಯುಆರ್ಸಿಗೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಮನದಟ್ಟು ಮಾಡಿದ್ದಾರೆ. ಆದರೂ, ನೀರು ಹರಿಸುವಂತೆ ಸಿಡಬ್ಲ್ಯುಆರ್ ಸೂಚನೆ ನೀಡಿದೆ.
ಕೆಆರ್ಎಸ್ ಡ್ಯಾಂ. -
ಬೆಂಗಳೂರು: ಮುಂಗಾರು ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ) ಮತ್ತೆ ಶಾಕ್ ನೀಡಿದೆ. ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ಕಾವೇರಿ ನೀರು (Cauvery Water Dispute) ಹರಿಸಲು ಮಂಗಳವಾರ ಆದೇಶಿಸಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿಯು ಇಂದು ನಡೆದ ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳ ವಾದವನ್ನು ಆಲಿಸಿತು. ಈ ಸಂದರ್ಭದಲ್ಲಿ ಕರ್ನಾಟಕವು ಮಳೆ ಕೊರತೆ ಮತ್ತು ಜಲಾಶಯಗಳಲ್ಲಿನ ನೀರಿನ ಸಂಗ್ರಹ ಕುಸಿತದ ಬಗ್ಗೆ ವಿವರಿಸಿದ್ದು, ಸದ್ಯ ತಮಿಳುನಾಡಿಗೆ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ನಷ್ಟು ನೀರು ಬಿಡುವ ಸ್ಥಿತಿಯಲ್ಲಿ ಕರ್ನಾಟಕ ಇಲ್ಲ ಎನ್ನುವುದನ್ನು ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಮನದಟ್ಟು ಮಾಡಿದ್ದಾರೆ.
ಇಂದು ಮಧ್ಯಾಹ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯೂ ನಡೆಯಲಿದ್ದು, ಕರ್ನಾಟಕ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ ಆದೇಶವನ್ನು ಪ್ರಶ್ನಿಸಲಿದೆ. ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದು ಕಷ್ಟ ಎಂದು ತಿಳಿಸಲಿದೆ.
ಕರ್ನಾಟಕ ಬಂದ್ ಆದರೆ ಯಾವೆಲ್ಲ ಸೇವೆ ಲಭ್ಯವಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಆ.13ರಂದು ಕರ್ನಾಟಕ ಬಂದ್
ಕಾವೇರಿ ನೀರು ನಿಯಂತ್ರಣ ಸಮಿತಿ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಇತ್ತೀಚೆಗೆ ಕರ್ನಾಟಕಕ್ಕೆ ಆದೇಶಿಸಿತ್ತು. ಈ ಬೆಳವಣಿಗೆಗಳ ನಡುವೆ ತಮಿಳುನಾಡಿಗೆ ಬರಗಾಲದ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ಕಾವೇರಿ ನೀರು ಬಿಡುವುದರ ವಿರುದ್ಧ ಕನ್ನಡಪರ ಸಂಘಟನೆಗಳು ಆ.13ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ.