ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

DA Hike: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌; ತುಟ್ಟಿಭತ್ಯೆ ಶೇ. 2.50 ರಷ್ಟು ಹೆಚ್ಚಳಕ್ಕೆ ಸರ್ಕಾರ ಅನುಮೋದನೆ

Karnataka government employees: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 2.50 ರಷ್ಟು ಹೆಚ್ಚಳ ಮಾಡುವ ಕಡತಕ್ಕೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಆರ್ಥಿಕ ಅನುಕೂಲವಾಗಲಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಗುಡ್‌ನ್ಯೂಸ್‌ ಸಿಕ್ಕಿದೆ. ತುಟ್ಟಿಭತ್ಯೆಯನ್ನು ಶೇ. 2.50 ರಷ್ಟು ಹೆಚ್ಚಳ ಮಾಡುವ ಕಡತಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಪರಿಷ್ಕೃತ ತುಟ್ಟಿಭತ್ಯೆಯು (DA Hike) 2026ರ ಜುಲೈ 1ರಿಂದಲೇ ಅನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ. ​ಡಿಎ ಹೆಚ್ಚಳ ಕುರಿತು ಗುರುವಾರ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.

DA Hike

ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮಾಹಿತಿ ನೀಡಿದ್ದಾರೆ. ಇನ್ನು ​ತುಟ್ಟಿಭತ್ಯೆ ಹೆಚ್ಚಳ ನಿರ್ಧಾರ ಕೈಗೊಂಡ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪರವಾಗಿ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಕೇಂದ್ರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿದ್ರೆ ಬಸ್ ಪ್ರಯಾಣ ದರ ಕಡಿಮೆ ಮಾಡಲು ಸಿದ್ಧ: ಸಿಎಂ

ಬೆಂಗಳೂರು, ನ. 04: "ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಿದರೆ ಅದಕ್ಕೆ ಅನುಗುಣವಾಗಿ ರಾಜ್ಯದಲ್ಲೂ ಬಸ್ ಪ್ರಯಾಣ ದರ (Bus Fare Hike) ಕಡಿಮೆ ಮಾಡಲು ಸಿದ್ಧ" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ (DK Shivakumar) ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಪ್ರತಿಪಕ್ಷಗಳು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಕುರಿತು ಕೇಳಿದಾಗ, "ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ಮೂರು ವಾರ ಅಥವಾ ಹತ್ತು ದಿನಗಳ ಮುಂಚಿತವಾಗಿಯೇ ಡೀಸೆಲ್ ಖರೀದಿಸಲು ಹಣವಿಲ್ಲದ ಪರಿಸ್ಥಿತಿ ಎದುರಾಗಿತ್ತು. ಸರಕಾರವೇ ಹಣ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿರುವುದರಿಂದ ಸಾರಿಗೆ ಸಂಸ್ಥೆಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬಿದ್ದಿದೆ. ಹೀಗಾಗಿ ಒಂದೊಂದು ಹಂತದಲ್ಲಿ ಎರಡು, ಮೂರು ರೂಪಾಯಿ ದರ ಹೆಚ್ಚಿಸಿರಬಹುದು" ಎಂದು ಹೇಳಿದರು.

"ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚಾದಾಗ ವಿಪಕ್ಷಗಳು ಏಕೆ ಮಾತನಾಡಲಿಲ್ಲ? ಅಡುಗೆ ಅನಿಲದ ಬೆಲೆ ಏರಿಕೆಯಾದಾಗ ಏಕೆ ಧ್ವನಿ ಎತ್ತಲಿಲ್ಲ? ರಸಗೊಬ್ಬರ, ಕೀಟನಾಶಕ, ಕಬ್ಬಿಣ, ಸಿಮೆಂಟ್ ಹಾಗೂ ಔಷಧಗಳ ಬೆಲೆ ಹೆಚ್ಚಳದ ಬಗ್ಗೆ ಏಕೆ ಪ್ರತಿಭಟಿಸಲಿಲ್ಲ? ರೈತರು ಬಳಸುವ ಕೃಷಿ ಪರಿಕರಗಳ ಬೆಲೆ ಎಷ್ಟು ಹೆಚ್ಚಾಗಿದೆ ಎಂಬುದರ ಬಗ್ಗೆ ವಿಪಕ್ಷಗಳಿಗೆ ಕಾಳಜಿ ಇಲ್ಲವೇ?" ಎಂದು ಪ್ರಶ್ನಿಸಿದರು.

"ರಾಜ್ಯದ ಬರಗಾಲ ಸಂದರ್ಭದಲ್ಲಿ ರೈತರು ಎಷ್ಟು ಕಷ್ಟಪಡುತ್ತಿದ್ದಾರೆ ಎಂಬ ಅರಿವು ನನಗಿದೆ. ಅವರ ಬದುಕಿನ ಸಂಕಷ್ಟವೂ ನಮಗೆ ಗೊತ್ತಿದೆ. ಅದೇ ರೀತಿ ಸಾರಿಗೆ ಸಂಸ್ಥೆಗಳೂ ಉಳಿಯಬೇಕು. ಅವುಗಳಿಗೂ ಆರ್ಥಿಕವಾಗಿ ಚೇತರಿಸಿಕೊಳ್ಳಲು ಅವಕಾಶ ನೀಡಬೇಕು" ಎಂದು ಹೇಳಿದರು.

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್‌; ಬಸ್‌ ಪ್ರಯಾಣ ದರ ಹೆಚ್ಚಳ ಇಂದು ಮಧ್ಯರಾತ್ರಿಯಿಂದಲೇ ಜಾರಿ

"ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿ, ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸುತ್ತಿರುವ ಸೆಸ್ ಹಾಗೂ ತೆರಿಗೆ ಹೊರೆ ಕಡಿಮೆ ಮಾಡಿಸಲಿ. ಕೇಂದ್ರ ಸರ್ಕಾರ ಇಂಧನ ಬೆಲೆ ಇಳಿಸಿದರೆ ರಾಜ್ಯ ಸರ್ಕಾರವೂ ಅದಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಲಿದೆ" ಎಂದು ವಿಪಕ್ಷಗಳಿಗೆ ಸವಾಲು ಹಾಕಿದರು.