Actor Darshan: ದರ್ಶನ್‌ಗೆ ಮತ್ತೊಂದು ರಿಲೀಫ್; ಮೈಸೂರಿಗೆ ತೆರಳಲು ಕೋರ್ಟ್‌ನಿಂದ ಅನುಮತಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಸದ್ಯ ಜಾಮೀನು ಸಿಕ್ಕಿದೆ. ಈ ಮಧ್ಯೆ ಅವರಿಗೆ ಮೈಸೂರಿಗೆ ತೆರಳಲು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಅನುಮತಿ ನೀಡಿದೆ. ಬೆನ್ನು ನೋವಿನ ಕಾರಣಕ್ಕೆ ವೈದ್ಯರನ್ನು ಭೇಟಿ ಮಾಡಲು ಅವರು ಮೈಸೂರಿಗೆ ತೆರಳಲಿದ್ದಾರೆ.

ನಟ ದರ್ಶನ್.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder Case) ಪ್ರಕರಣ ಸದ್ಯ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಿದ್ದು, ನಟ ದರ್ಶನ್ (Actor Darshan) ಪರವಾಗಿ ವಾದಿಸಲು ಖ್ಯಾತ ಕಾಂಗ್ರೆಸ್ ನಾಯಕ, ಸುಪ್ರೀಂ ಕೋರ್ಟ್‌ನ ನ್ಯಾಯವಾದಿ ಕಪಿಲ್ ಸಿಬಲ್ (Congress leader Kapil Sibal) ಒಪ್ಪಿಕೊಂಡಿದ್ದಾರೆ. ಈ ಮಧ್ಯೆ ದರ್ಶ್‌ನ್ ಅವರಿಗೆ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದ್ದು, ಮೈಸೂರಿಗೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. ಬೆಂಗಳೂರು ಬಿಟ್ಟು ಬೇರೆ ಕಡೆಗೆ ತೆರಳುವಂತಿಲ್ಲ ಎಂಬ ಷರತ್ತಿನ ಮೇಲೆ ದರ್ಶನ್ ಅವರಿಗೆ ಕೋರ್ಟ್ ಡಿಸೆಂಬರ್‌ನಲ್ಲಿ ಜಾಮೀನು ಮಂಜೂರು ಮಾಡಿತ್ತು. ಒಂದು ವೇಳೆ ಬೆಂಗಳೂರಿನಿಂದ ಹೊರಗೆ ಹೋಗಬೇಕಾದ ಸಂದರ್ಭ ಬಂದರೆ ನ್ಯಾಯಾಲಯದಿಂದ ಅನುಮತಿ ಪಡೆಯಬೇಕು ಎಂದು ತಿಳಿಸಿತ್ತು.
ಇದೀಗ ಫೆ. 20ರ ತನಕ ಮೈಸೂರಿಗೆ ತೆರಳಲು ದರ್ಶನ್‌ಗೆ ಕೋರ್ಟ್ ಅನುಮತಿ ನೀಡಿದೆ. ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್‌ನಿಂದ ದರ್ಶನ್ ಅನುಮತಿ ಪಡೆದುಕೊಂಡಿದ್ದಾರೆ. ಬೆನ್ನು ನೋವಿನ ಕಾರಣಕ್ಕೆ ವೈದ್ಯರನ್ನು ಭೇಟಿ ಮಾಡಲು ಅವರು ಮೈಸೂರಿಗೆ ತೆರಳಲಿದ್ದಾರೆ.
ಸುಪ್ರೀಂ ಕೋರ್ಟ್ ಮೊರೆ ಹೋದ ರಾಜ್ಯ ಸರ್ಕಾರ
ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಈಗಾಗಲೇ ದರ್ಶನ್, ಪವಿತ್ರಾ ಗೌಡ ಮತ್ತಿತರ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ. ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ಮಾ. 18ರಂದು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ವಿಚಾರಣೆ ನಿಗದಿಯಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪವಿತ್ರಾ ಗೌಡ ಎ 1 ಮತ್ತು ದರ್ಶನ್ ಎ 2 ಆರೋಪಿ. ಮೊದಲು ದರ್ಶನ್ ಬೆನ್ನು ನೋವಿನ ಕಾರಣ ಹೇಳಿ ಜಾಮೀನು ಪಡೆದಿದ್ದರು. ಇದನ್ನು ಸರ್ಕಾರಿ ಪರ ವಕೀಲರು ವಿರೋಧಿಸಿದ್ದರು. ನಂತರ ಹೈಕೋರ್ಟ್ ರೆಗ್ಯುಲರ್ ಜಾಮೀನು ನೀಡಿತ್ತು. ಬಳಿಕ ಸರ್ಕಾರ ಇದನ್ನು ವಿರೋಧಿಸಿ ಮೇಲ್ಮನವಿ ಸಲ್ಲಿಸಿತ್ತು. ದರ್ಶನ್ ಅವರು ಈವರೆಗೆ ಯಾವುದೇ ಆಪರೇಷನ್ ಮಾಡಿಸಿಕೊಂಡಿಲ್ಲ. ಈ ಬಗ್ಗೆಯೂ ಹಲವು ಅನುಮಾನಗಳು ಎದ್ದಿವೆ.
ಹುಟ್ಟುಹಬ್ಬ ಆಚರಿಸಿಕೊಳ್ಳದ ದರ್ಶನ್
ಫೆ. 16ರಂದು ದರ್ಶನ್ ಹುಟ್ಟುಹಬ್ಬವಿತ್ತು. ಆದರೆ ಅನಾರೋಗ್ಯದ ಕಾರಣ ಅವರು ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಈ ಬಗ್ಗೆ ಮೊದಲೇ ಅವರು ಅಭಿಮಾನಿಗಳಿಗೆ ತಿಳಿಸಿದ್ದರು. ಅವರು ಜನ್ಮದಿನವನ್ನು ಅದ್ಧೂರಿಯಾಗಿ ಕೊಂಡಾಡಬೇಕು ಎಂದು ಯೋಜನೆ ಹಾಕಿಕೊಂಡಿದ್ದ ಫ್ಯಾನ್ಸ್‌ಗೆ ಇದರಿಂದ ನಿರಾಸೆಯಾಗಿತ್ತು.
ಈ ಸುದ್ದಿಯನ್ನೂ ಓದಿ: Actor Darshan: ದರ್ಶನ್ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಲು ಮುಂದಾದ ಖ್ಯಾತ ಕಾಂಗ್ರೆಸ್ ನಾಯಕ!
ʼಡೆವಿಲ್ʼ ಟೀಸರ್ ಔಟ್
ಫೆ. 16ರಂದು ದರ್ಶ್‌ನ್ ಅವರ ಮುಂಬರುವ ಚಿತ್ರ ʼಡೆವಿಲ್ʼನ ಟೀಸರ್ ರಿಲೀಸ್ ಆಗಿದ್ದು, ಗಮನ ಸೆಳೆಯುತ್ತಿದೆ. ಮಿಲನ ಪ್ರಕಾಶ್ ನಿರ್ದೇಶನದ ʼಡೆವಿಲ್ʼನಲ್ಲಿ ದರ್ಶನ್ ವಿಭಿನ್ನ ಅವತಾರಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. 2017ರಲ್ಲಿ ತೆರೆಕಂಡ ʼತಾರಕ್ʼ ಚಿತ್ರದ ಬಳಿಕ ಪ್ರಕಾಶ್ ಮತ್ತು ದರ್ಶನ್ ಮತ್ತೆ ಒಂದಾಗುತ್ತಿರುವುದರಿಂದ ನಿರೀಕ್ಷೆ ಹೆಚ್ಚಾಗಿದೆ.