ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Darshan: ನವೆಂಬರ್‌ 10ಕ್ಕೆ ದರ್ಶನ್‌ ವಿಚಾರಣೆ ಮುಂದೂಡಿಕೆ

Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ಸೇರಿದಂತೆ ಆರೋಪಿಗಳ ವಿಚಾರಣೆಯನ್ನು 57ನೇ ಸೆಷನ್ ಕೋರ್ಟ್ ನವೆಂಬರ್‌ 10ಕ್ಕೆ ವಿಚಾರಣೆ ಮುಂದೂಡಿದೆ. ಜೈಲು ಸೇರಿರುವ ದರ್ಶನ್‌ ಸೇರಿದಂತೆ ಆರೋಪಿಗಳು ನವೆಂಬರ್‌ 3ರಂದು ಬೆಂಗಳೂರು 64ನೇ ಸಿಸಿಎಚ್ ಕೋರ್ಟ್‌ಗೆ ಹಾಜರಾದರು.

ನವೆಂಬರ್‌ 10ಕ್ಕೆ ದರ್ಶನ್‌ ವಿಚಾರಣೆ ಮುಂದೂಡಿಕೆ

ದರ್ಶನ್ (ಸಂಗ್ರಹ ಚಿತ್ರ) -

Ramesh B Ramesh B Nov 3, 2025 3:11 PM

ಬೆಂಗಳೂರು, ನ. 3: ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Murder Case) ಸಂಬಂಧ 57ನೇ ಸೆಷನ್ ಕೋರ್ಟ್ ದರ್ಶನ್‌ (Actor Darshan) ಸೇರಿದಂತೆ ಆರೋಪಿಗಳ ವಿಚಾರಣೆಯನ್ನು ನವೆಂಬರ್‌ 10ಕ್ಕೆ ಮುಂದೂಡಿದೆ. ಜೈಲು ಸೇರಿರುವ ದರ್ಶನ್‌ ಸೇರಿದಂತೆ ಆರೋಪಿಗಳು ನವೆಂಬರ್‌ 3ರಂದು ಬೆಂಗಳೂರು 64ನೇ ಸಿಸಿಎಚ್ ಕೋರ್ಟ್‌ಗೆ ಹಾಜರಾದರು. ಖುದ್ದು ಹಾಜರಾಗಲು ಕೋರ್ಟ್ ಸೂಚಿಸಿತ್ತು. ಇದರಂತೆ ಭಾರಿ ಬಿಗಿ ಭದ್ರತೆಯೊಂದಿಗೆ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರ ಗೌಡ ಸೇರಿದಂತೆ 6 ಆರೋಪಿಗಳು ಕೋರ್ಟ್‌ಗೆ ಹಾಜರಾದರು. ದೋಷಾರೋಪಣೆ ನಿಗದಿ ವೇಳೆ ದರ್ಶನ್‌ ಸೇರಿದಂತೆ ಎಲ್ಲ ಆರೋಪಿಗಳ ತಪ್ಪೊಪ್ಪಿಕೊಳ್ಳದ ಕಾರಣ ವಿಚಾರಣೆಯನ್ನು ಕೋರ್ಟ್‌ ನವೆಂಬರ್‌ 10ಕ್ಕೆ ಮುಂದೂಡಿದೆ. ದರ್ಶನ್‌ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ್ದಾರೆ.

ಬಹಳ ದಿನಗಳ ಬಳಿಕ ಆಗಮಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಅವರನ್ನು ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಕೋರ್ಟ್‌ ಬಳಿ ಗುಂಪುಗೂಡಿದರು. ಅವರನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಕೋರ್ಟ್‌ಗೆ ಕರೆತಂದರು. ಪವಿತ್ರಾ ಗೌಡ ಕಣ್ಣೀರಿಡುತ್ತಲೇ ಕೋರ್ಟ್‌ ಹಾಲ್‌ಗೆ ಕಾಲಿಟ್ಟಿದ್ದು ಕಂಡು ಬಂತು.

ಆರೋಪ ನಿರಾಕರಿಸಿದ ದರ್ಶನ್‌ & ಗ್ಯಾಂಗ್‌

ದರ್ಶನ, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು ಕೂಡ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಹಾಗಾಗಿ ಮುಂದಿನ ಹಂತದ ಸಾಕ್ಷಿಗಳ ವಿಚಾರಣೆಗೆ ನ್ಯಾಯಾಲಯ ನವೆಂಬರ್ 10ರಂದು ದಿನಾಂಕ ನಿಗದಿ ಪಡಿಸಿದೆ.

ಈ ಸುದ್ದಿಯನ್ನೂ ಓದಿ: Actor Darshan: ಸೀಕ್ರೆಟ್‌ ಆಗಿ ಮದುವೆ ಆಗಿದ್ರಾ ನಟ ದರ್ಶನ್‌; ಪವಿತ್ರಾ ಗೌಡ ಜತೆಗಿನ ಹಳೆಯ ಫೋಟೊಗಳು ವೈರಲ್‌!

ಇಂದು ಏನೇನಾಯ್ತು?

ಜಡ್ಜ್ ಸಮ್ಮುಖದಲ್ಲಿ ಆರೋಪಿಗಳನ್ನು ಪೊಲೀಸರು ನಿಲ್ಲಿಸಿದರು. ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಪ್ರಮುಖ ಆರೋಪಿಗಳಿಗೆ ಜಡ್ಜ್ ಒಂದಷ್ಟು ಪ್ರಶ್ನೆಗಳನ್ನು ಕೇಳಿದರು. ಕೊಲೆ, ಅಪಹರಣ, ಸಾಕ್ಷಿನಾಶ, ಅಕ್ರಮ ಕೂಟ, ಕ್ರಿಮಿನಲ್ ಒಳಸಂಚು ಸೇರಿದಂತೆ ಹಲವು ಆರೋಪಗಳನ್ನು ಎಲ್ಲ ಆರೋಪಿಗಳ ಎದುರು ಓದಿ ಹೇಳಲಾಯಿತು. ಆರೋಪ ಒಪ್ಪಿಕೊಂಡರೆ ಶಿಕ್ಷೆ ಪ್ರಕಟ ಆಗುತ್ತಿತ್ತು. ಆರೋಪಗಳನ್ನು ಒಪ್ಪಿಕೊಳ್ಳದ ಕಾರಣ ಸಾಕ್ಷ್ಯಗಳ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ.

ಆಗಸ್ಟ್‌ 14ರಂದು ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ದರ್ಶನ್‌

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸುಪ್ರೀಂ ಕೋರ್ಟ್‌ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ನಟ ದರ್ಶನ್‌ ಸೇರಿ ಇತರ ಆರೋಪಿಗಳು ಆಗಸ್ಟ್‌ 14ರಂದು ಮತ್ತೆ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆ ಬಳಿಕ ವಿಡಿಯೋ ಕಾನ್ಫರೆನ್ಸ್‌ ಮೂಲಕವೇ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದರು. ದೋಷಾರೋಪ ಹಿನ್ನೆಲೆಯಲ್ಲಿ 81 ದಿನಗಳ ಬಳಿಕ ಜೈಲಿನಿಂದ ದರ್ಶನ್‌ ಹೊರ ಬಂದು ನ್ಯಾಯಾಲಯಕ್ಕೆ ಆಗಮಿಸಿದರು.

ಈ ಸುದ್ದಿಯನ್ನೂ ಓದಿ: Supreme Court: ಜನಪ್ರಿಯತೆಯು ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಗುರಾಣಿಯಲ್ಲ: ದರ್ಶನ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

ಜಾಮೀನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್‌

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಮತ್ತು ಎ 2 ಆರೋಪಿ ದರ್ಶನ್‌ ಸೇರಿದಂತೆ 7 ಆರೋಪಿಗಳಿಗೆ 2024ರ ಡಿಸೆಂಬರ್‌ನಲ್ಲಿ ಹೈಕೋರ್ಟ್‌ ಜಾಮೀನು ನೀಡಿತ್ತು. ಇದರ ವಿರುದ್ಧ ಕರ್ನಾಟಕ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಆಗಸ್ಟ್‌ 14ರಂದು ಎಲ್ಲ ಆರೋಪಿಗಳ ಜಾಮೀನು ರದ್ದುಗೊಳಿಸಿದೆ. ಹೀಗಾಗಿ ದರ್ಶನ್‌ ಮತ್ತು ಪವಿತ್ರಾ ಗೌಡ ಅವರನ್ನು ಮತ್ತೆ ಅರೆಸ್ಟ್‌ ಮಾಡಲಾಗಿತ್ತು.