Actor Darshan: ಹಾಸಿಗೆ, ದಿಂಬು ನೀಡಿಲ್ಲ; ಕೋರ್ಟ್‌ಗೆ ದರ್ಶನ್ ಪರ ವಕೀಲರಿಂದ ಮತ್ತೆ ಅರ್ಜಿ
Actor Darshan: ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಕ್ಕೆ ಮಾಡಲು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಇತ್ತೀಚೆಗೆ ನಿರಾಕರಿಸಿತ್ತು. ಅಲ್ಲದೇ ನಟನಿಗೆ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿತ್ತು. ಆದರೆ, ಕೋರ್ಟ್ ಆದೇಶ ಮಾಡಿದರೂ ಯಾವುದೇ ಸೌಕರ್ಯ ನೀಡಿಲ್ಲ ಎಂದು ಇದೀಗ ದರ್ಶನ್ ಪರ ವಕೀಲರು ಕೋರ್ಟ್‌ಗೆ ಮತ್ತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

-

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಕ್ಕೆ ಮಾಡಲು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಇತ್ತೀಚೆಗೆ ನಿರಾಕರಿಸಿತ್ತು. ಅಲ್ಲದೇ ನಟನಿಗೆ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿತ್ತು. ಆದರೆ, ನ್ಯಾಯಾಧೀಶರು ಸೂಚಿಸಿದರೂ ಜೈಲಧಿಕಾರಿಗಳು ಈವರೆಗೆ ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ (Actor Darshan) ಪರ ವಕೀಲರು ಕೋರ್ಟ್‌ಗೆ ಮತ್ತೆ ಅರ್ಜಿ ಸಲ್ಲಿಸಿದ್ದಾರೆ.
ಇತ್ತೀಚಿಗೆ ದರ್ಶನ್ ಪರ ವಕೀಲ ಸುನೀಲ್ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ದಿಂಬು, ಹಾಸಿಗೆ ಕೊಡಿಸಬೇಕು ಎಂದು ಮನವಿ ಮಾಡಿ, ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯ ದಿಂಬು, ಹಾಸಿಗೆ ಹಾಗೂ ಕನಿಷ್ಠ ಸೌಲಭ್ಯಗಳನ್ನಾದರೂ ನೀಡಬೇಕು ಎಂದು ಆದೇಶಿಸಿತ್ತು. ಆದರೆ ಇದೀಗ ದರ್ಶನ್ ಪರ ವಕೀಲರು, ಕೋರ್ಟ್ ಆದೇಶ ಮಾಡಿದರೂ ಯಾವುದೇ ಸೌಕರ್ಯ ನೀಡಿಲ್ಲ. ಬೆಳಗ್ಗೆ, ಸಂಜೆ ವಾಕಿಂಗ್‌ಗೆ ಅವಕಾಶ ಮಾಡಿಕೊಟ್ಟಿರುವುದು ಬಿಟ್ಟರೆ, ಹೆಚ್ಚುವರಿ ಹಾಸಿಗೆ, ದಿಂಬು ಒದಗಿಸಿಲ್ಲ ಎಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ |Actor Darshan: ನಟ ದರ್ಶನ್‌ಗೆ ಗಲ್ಲು ಶಿಕ್ಷೆ ಆಗಲೇಬೇಕು; ಕೋರ್ಟ್‌ಗೆ ಅಪರಿಚಿತ ವ್ಯಕ್ತಿ ಅರ್ಜಿ!
ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ. ಕೋರ್ಟ್ ಆದೇಶ ಮಾಡಿದರೂ ಯಾವುದೇ ಸೌಕರ್ಯ ನೀಡಿಲ್ಲ. ಕೋರ್ಟ್ ಆದೇಶದ ಪ್ರತಿಯನ್ನು ಇ-ಮೇಲ್ ಮಾಡಲಾಗಿದೆ. ಆದರೂ ದರ್ಶನ್‌ಗೆ ಯಾವುದೇ ಸೌಕರ್ಯ ನೀಡಿಲ್ಲ. ಎರಡು-ಮೂರು ಬಾರಿ ಜೈಲಿಗೆ ಹೋಗಿ ವಿಚಾರಿಸಿದ್ದೀವಿ. ಆದರೂ ಕೂಡ ಯಾವುದೇ ಸೌಲಭ್ಯ ನೀಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.