ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಗ್ರೇಟರ್ ಬೆಂಗಳೂರು ವ್ಯಾಪ್ತಿಯ ರಸ್ತೆ ಬದಿ, ವಿಭಜಕಗಳ ಗಿಡಗಳ ಸೂಕ್ತ ನಿರ್ವಹಣೆಗೆ ಆದೇಶ

DK Shivakumar: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಎಲ್ಲ ರಸ್ತೆಬದಿ ಹಾಗೂ ರಸ್ತೆ ವಿಭಜಕಗಳಲ್ಲಿನ ಗಿಡಗಳನ್ನು ಸರಿಯಾಗಿ ಪೋಷಣೆ ಮಾಡಬೇಕು, ಒಣಗಿ ಬಿದ್ದಿರುವ ಕಸವನ್ನು ತೆರವುಗೊಳಿಸಬೇಕು. ಈ ಪ್ರಕ್ರಿಯೆಯನ್ನು ನಿರಂತರ ಪರಿಶೀಲಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಸ್ತೆ ಬದಿ ಹಾಗೂ ರಸ್ತೆ ವಿಭಜಕಗಳಲ್ಲಿ ನೆಡಲಾಗಿದ್ದ ಗಿಡಗಳನ್ನು ಸೂಕ್ತ ನಿರ್ವಹಣೆಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ರಸ್ತೆ ಬದಿ, ವಿಭಜಕಗಳ ಗಿಡಗಳ ಸೂಕ್ತ ನಿರ್ವಹಣೆಗೆ ಆದೇಶ

ಡಿಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -

Profile
Siddalinga Swamy Mar 2, 2026 10:44 PM

ಬೆಂಗಳೂರು, ಮಾ. 2: ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರ ಸೂಚನೆ ಹಿನ್ನೆಲೆಯಲ್ಲಿ ರಸ್ತೆ ಬದಿ ಹಾಗೂ ರಸ್ತೆ ವಿಭಜಕಗಳಲ್ಲಿ ನೆಡಲಾಗಿದ್ದ ಗಿಡಗಳನ್ನು ಸೂಕ್ತ ನಿರ್ವಹಣೆಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಸೌಂದರ್ಯ ಹೆಚ್ಚಿಸಲು ನೆಡಲಾಗಿರುವ ಅಲಂಕಾರಿಕ ಗಿಡಗಳು ಸರಿಯಾಗಿ ಪೋಷಣೆಯಾಗದೇ ಒಣಗಿದ್ದು, ಬಹಳ ಕೆಟ್ಟದಾಗಿ ಕಾಣುತ್ತಿವೆ. ಹೀಗಾಗಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಎಲ್ಲಾ ರಸ್ತೆಬದಿ ಹಾಗೂ ರಸ್ತೆ ವಿಭಜಕಗಳಲ್ಲಿನ ಗಿಡಗಳನ್ನು ಸರಿಯಾಗಿ ಪೋಷಣೆ ಮಾಡಬೇಕು, ಒಣಗಿ ಬಿದ್ದಿರುವ ಕಸವನ್ನು ತೆರವುಗೊಳಿಸಬೇಕು. ಈ ಪ್ರಕ್ರಿಯೆಯನ್ನು ನಿರಂತರ ಪರಿಶೀಲಿಸಬೇಕು ಎಂದು ಡಿ.ಕೆ. ಶಿವಕುಮಾರ್, ಇತ್ತೀಚೆಗೆ ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆಯು ಆದೇಶ ಹೊರಡಿಸಿದ್ದು, ರಸ್ತೆ ಬದಿ ಹಾಗೂ ರಸ್ತೆ ವಿಭಜಕಗಳಲ್ಲಿ ಬೆಳಸಲಾಗಿರುವ ಅಲಂಕಾರಿಕ ಗಿಡಗಳನ್ನು ಸರಿಯಾಗಿ ಪೋಷಣೆ ಮಾಡಿ, ಅವಕಾಶವಿರುವ ಕಡೆ ಹೊಸದಾಗಿ ಅಲಂಕಾರಿಕ ಗಿಡ, ಮರಗಳನ್ನು ಬೆಳೆಸಬೇಕು. ಈಗಾಗಲೇ ಒಣಗಿ ಬಿದ್ದಿರುವ ಕಸವನ್ನು ತೆಗೆದು ಸ್ವಚ್ಛಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.‌

ಶಾಸಕರು ದೆಹಲಿಗೆ ಹೋಗೋದು, ಫಾರಿನ್‌ಗೆ ಹೋಗೋದು ಗೊತ್ತಿಲ್ಲ ಎಂದ ಡಿ.ಕೆ. ಶಿವಕುಮಾರ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಎಲ್ಲ ಪಾಲಿಕೆಗಳಲ್ಲಿ ಸೂಕ್ತ ಕ್ರಮ ಕೈಗೊಂಡಿರುವ ಬಗ್ಗೆ ಮುಖ್ಯ ಆಯುಕ್ತರು, ಜಿಬಿಎ ಹಾಗೂ ಅವರ ಮುಖ್ಯ ಕಾರ್ಯದರ್ಶಿಗಳು ನಿಯಮಿತವಾಗಿ ಸಭೆ ನಡೆಸಿ ಪರಿಶೀಲನೆ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.