ಬೆಂಗಳೂರು : ಇಂದು ಬೆಂಗಳೂರಿನ ನೂತನ ಹೆಬ್ಬಾಳ ಫ್ಲೈಓವರ್ (Hebbala Flyover) ಉದ್ಘಾಟಿಸಲಾಗಿದ್ದು, ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರು ರೋಡ್‌ಕಿಂಗ್ ಬೈಕ್ ಸವಾರಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿಕೆಶಿ, ಹೆಬ್ಬಾಳ ಮೇಲ್ಸೇತುವೆಯಲ್ಲಿ ಯೆಜ್ಡಿ ರೋಡ್‌ಕಿಂಗ್ ಬೈಕ್ ಸವಾರಿ ಮಾಡುವ ಮೂಲಕ ಕಾಲೇಜು ದಿನಗಳನ್ನು ಮೆಲುಕು ಹಾಕಿದೆ ಎಂದಿದ್ದಾರೆ.
ಬೆಂಗಳೂರಿನ ನಾಗರಿಕರೇ, ಜಾಗತಿಕವಾಗಿ ಗುರುತಿಸಿಕೊಂಡಿರುವ ನಮ್ಮ ಬೆಂಗಳೂರು ನಗರಕ್ಕೆ ಹೊಸರೂಪವನ್ನು ನೀಡಲು ನಾವು ಬದ್ಧರಿದ್ದೇವೆ. ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಲೋಕಾರ್ಪಣೆಗೊಳಿಸಲಾಯಿತು. ಇಂದಿನಿಂದ ಹೆಬ್ಬಾಳದ ಹೊಸ ಮೇಲ್ಸೇತುವೆ ರ್ಯಾಂಪ್ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. 80 ಕೋಟಿ ರೂ. ವೆಚ್ಚದಲ್ಲಿ 700 ಮೀಟರ್ ಉದ್ದದ ಹೆಬ್ಬಾಳ ಫ್ಲೈಓವರ್ ನಿರ್ಮಾಣದಿಂದ ಹೆಬ್ಬಾಳದ ಟ್ರಾಫಿಕ್ ದಟ್ಟಣೆ ಶೇಕಡಾ 30ರಷ್ಟು ನಿವಾರಣೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆಯನ್ನು ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಲೋಕಾರ್ಪಣೆಗೊಳಿಸಲಾಯಿತು. ಇಂದಿನಿಂದ ಹೆಬ್ಬಾಳದ ಹೊಸ ಮೇಲ್ಸೇತುವೆ ರ್ಯಾಂಪ್ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. 80 ಕೋಟಿ ರೂ. ವೆಚ್ಚದಲ್ಲಿ 700… https://t.co/kaBk1nm2wo pic.twitter.com/O72gIfWT8i
— DK Shivakumar (@DKShivakumar) August 18, 2025
ಮುಖ್ಯಮಂತ್ರಿಗಳಿಂದ ಉದ್ಘಾಟನೆ
ಸುಮಾರು 80 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಂಗಳೂರಿನ (Bengaluru) ಹೆಬ್ಬಾಳ ಹೊಸ ಮೇಲ್ಸೇತುವೆಯನ್ನು (Hebbala Flyover) ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಉದ್ಘಾಟಿಸಿದ್ದಾರೆ. ಉದ್ಘಾಟನೆಗೆ ಮೊದಲು 2 ದಿನಗಳ ಟ್ರಯಲ್ ರನ್ ನಡೆಸಲಾಗಿದೆ. ನಾಗವಾರದಿಂದ ಬರುವ ವಾಹನಗಳು ಸಿಗ್ನಲ್ ತಪ್ಪಿಸಿ ರ್ಯಾಂಪ್ ಮೂಲಕ ಸುಲಭವಾಗಿ ಹೋಗಲು ಈ ರ್ಯಾಂಪ್ ಸಹಾಯ ಮಾಡುತ್ತದೆ. ಆದರೆ, ಇದರಿಂದ ಮೆಖ್ರಿ ಸರ್ಕಲ್‌ನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಬಹುದು ಎಂದು ಟ್ರಯಲ್ ರನ್‌ನಲ್ಲಿ ತಿಳಿದುಬಂದಿದೆ.
700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ ಕಡೆಯಿಂದ ಮೇಖ್ರಿ ಸರ್ಕಲ್ ವರೆಗೆ ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿಯು 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ.
ಇದನ್ನೂ ಓದಿ: Hebbala Flyover: ಹೆಬ್ಬಾಳ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ