ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದೇಗುಲ ಮಠದ ಪೀಠಾಧಿಪತಿ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ

ದೇಗುಲ ಮಠದ ಪೀಠಾಧಿಪತಿಗಳಾದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ (84) ಅವರು ಇಂದು ಲಿಂಗೈಕ್ಯರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳನ್ನು ಮೂರು ದಿನಗಳ ಹಿಂದೆ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ.

ಸಂಗ್ರಹ ಚಿತ್ರ

ಕನಕಪುರ: ದೇಗುಲ ಮಠದ ಪೀಠಾಧಿಪತಿಗಳಾದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ (84) (sri mummadi nirvana swamiji) ಅವರು ಇಂದು ಲಿಂಗೈಕ್ಯರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳನ್ನು ಮೂರು ದಿನಗಳ ಹಿಂದೆ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ. ಶ್ರೀಗಳ ನಿಧನಕ್ಕೆ ಅನೇಕ ಭಕ್ತರು ಕಂಬನಿ ಮಿಡಿದಿದ್ದಾರೆ. ಮಠದ ಪೀಠಾಧಿಪತಿಗಳಾಗಿದ್ದ ಶ್ರೀಗಳು ಧರ್ಮ, ಶಿಕ್ಷಣ ಮತ್ತು ದಾಸೋಹ ಪರಂಪರೆಯನ್ನು ಬೆಳೆಸಿದ್ದರು.

ಶ್ರೀಗಳ ಅಂತಿಮ ದರ್ಶನ ಪಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕನಕಪುರ ದೇಗುಲ ಮಠಕ್ಕೆ ಇಂದು ಬೆಳಗ್ಗೆ 10 ಗಂಟೆಗೆ ಭೇಟಿ ನೀಡಲಿದ್ದಾರೆ. ಮೃತರ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ, ಅಂತಿಮ ದರ್ಶನ ಪಡೆಯಲಿದ್ದಾರೆ. ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಶ್ರೀಗಳ ಅಗಲಿಕೆಗೆ ಸಂತಾಪ ಸೂಚಿಸಿದರು. ಕನಕಪುರದ ಪುರಾಣ ಪ್ರಸಿದ್ಧ ಮಠಗಳಲ್ಲಿ ಒಂದಾದ ಶ್ರೀ ದೇಗುಲ ಮಠದ ಹಿರಿಯ ಪೂಜ್ಯರಾದ ಶ್ರೀ ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗಳವರು ಶಿವೈಕ್ಯರಾದ ವಿಷಯ ತಿಳಿದು ಬಹಳ ದುಃಖವಾಯಿತು.



ದೈವ ಸೇವೆಯ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದು ಜನರನ್ನು ಸಾತ್ವಿಕ ಮತ್ತು ಭಕ್ತಿಮಾರ್ಗದಲ್ಲಿ ಮುನ್ನಡೆಸಿದ ಶ್ರೀಗಳ ಅಗಲಿಕೆ ನನಗೆ ಅತೀವ ದುಃಖ ತಂದಿದೆ. ಆ ಪರಮಶಿವನು ಪರಮಪೂಜ್ಯರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಭಕ್ತ ಸಮೂಹಕ್ಕೆ ದುಃಖ ಭರಿಸುವ ಶಕ್ತಿ, ಚೈತನ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ.

ಇಂದು ಬೆಳಿಗ್ಗೆ ದೇಗುಲ ಮಠದ ಆವರಣದಲ್ಲಿ ಶ್ರೀಗಳ ಕಳೇಬರವನ್ನು ಭಕ್ತಾದಿಗಳ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ವಿವಿಧ ಮಠದ ಶ್ರೀಗಳು, ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಸೇರಿದಂತೆ ಮತ್ತಿತರ ಗಣ್ಯರು ಶ್ರೀಗಳ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. ಶ್ರೀಗಳ ನಿಧನಕ್ಕೆ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Vishakha Bhat Heggar

View all posts by this author