ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬರ ಪರಿಹಾರಕ್ಕೆ ಕೇಂದ್ರಕ್ಕೆ ಬೇಡಿಕೆ; ಪ್ರಧಾನಿ ಮೋದಿ ಭೇಟಿಯಾಗ್ತಾರಾ ಸಿಎಂ ಡಿಕೆ ಶಿವಕುಮಾರ್‌?

ರಾಜ್ಯದಲ್ಲಿ ಮಳೆ ಅಭಾವ ಎದುರಾಗಿದ್ದು, ಈ ಕುರಿತು ಬರ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಮಯ ಕೋರಿದ್ದಾರೆ. ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಜಲಶಕ್ತಿ ಸಚಿವರನ್ನು ಭೇಟಿಯಾಗಿ ಹಲವು ಮನವಿಗಳನ್ನು ಸಲ್ಲಿಸಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಭಾವ ಎದುರಾಗಿದ್ದು, ಈ ಕುರಿತು ಬರ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನು ಭೇಟಿಯಾಗಲು ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (CM DK Shivakumar) ಸಮಯ ಕೋರಿದ್ದಾರೆ. ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಜಲಶಕ್ತಿ ಸಚಿವರನ್ನು ಭೇಟಿಯಾಗಿ ಹಲವು ಮನವಿಗಳನ್ನು ಸಲ್ಲಿಸಿದ್ದಾರೆ. ಬೆಂಗಳೂರಿನ ಇಬ್ಬಲೂರು ಫೈರಿಂಗ್ ರೇಂಜ್ ಬಳಿ ಇರುವ 730 ಎಕರೆ ಪ್ರದೇಶದಲ್ಲಿ ಲಾಲ್‌ಬಾಗ್ ಮತ್ತು ಕಬ್ಬನ್ ಪಾರ್ಕ್ ಮಾದರಿಯಲ್ಲಿ ಉದ್ಯಾನವನ ನಿರ್ಮಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕೇಂದ್ರ ಜಲಶಕ್ತಿ ಸಚಿವ ಆರ್. ಪಾಟೀಲ್ ಅವರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್, ಮೇಕೆದಾಟು ಯೋಜನೆಯ ಡಿಪಿಆರ್‌ಗೆ ಅನುಮೋದನೆ ಹಾಗೂ ಅಗತ್ಯ ಅನುಮತಿಗಳನ್ನು ತ್ವರಿತವಾಗಿ ನೀಡುವಂತೆ ಮನವಿ ಮಾಡಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲು ಕೇಂದ್ರದ ಸಹಕಾರ ಕೋರಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ಪ್ರಧಾನ ಮಂತ್ರಿ ಕೃಷಿ ಸಿಂಚಯೀ ಯೋಜನೆಯಡಿ ಸೇರಿಸಿ ಅನುದಾನ ಒದಗಿಸುವಂತೆಯೂ ಮನವಿ ಮಾಡಿದ್ದಾರೆ. ಕರ್ನಾಟಕವು ಕಾವೇರಿ ನದಿ ನೀರು ಸೇರಿದಂತೆ ತನ್ನ ನ್ಯಾಯಬದ್ಧ ನೀರಿನ ಪಾಲನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವಂತೆ ಕೋರಿದ್ದಾರೆ.

200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ; ಕೇಂದ್ರದ ನಿಯಮಾನುಸಾರ ಬರ ತಾಲೂಕುಗಳ ಘೋಷಣೆ ಎಂದ ಸಿಎಂ

ರಾಜ್ಯದ ಸುಮಾರು 200 ತಾಲೂಕುಗಳು ಬರ ಪರಿಸ್ಥಿತಿಯನ್ನು ಎದುರಿಸುತ್ತಿವೆ ಎಂದು ತಿಳಿಸಿರುವ ಮುಖ್ಯಮಂತ್ರಿ, ಮೊದಲ ಹಂತದಲ್ಲಿ ₹3,700 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಲು ಮುಂದಾಗಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಸಮಯ ಕೇಳಲಾಗಿದೆ. ಇದೇ ವೇಳೆ ಕಸ್ತೂರಿರಂಗನ್ ವರದಿ ಜಾರಿಯಿಂದ ಕರ್ನಾಟಕದ ಪಶ್ಚಿಮಘಟ್ಟ ಪ್ರದೇಶದ ಜನರಿಗೆ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆಯೂ ಪ್ರಧಾನಿ ಜೊತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

Vishakha Bhat Heggar

View all posts by this author