ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Om Prakash Murder Case: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ; ಪತ್ನಿ ಪಲ್ಲವಿ ತಪ್ಪೊಪ್ಪಿಗೆ

Om Prakash Murder Case: ಹತ್ಯೆಯಾಗಿರುವ ಓಂ ಪ್ರಕಾಶ್ ಅವರು ಹಿರಿಯ ಪೊಲೀಸ್ ಅಧಿಕಾರಿಯಾಗಿದ್ದವರು. ಹಾಗಾಗಿ ಅವರ ಕೊಲೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಹೇಳಿದ್ದಾರೆ.

ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ಸಿಸಿಬಿ ತನಿಖೆಯಿಂದ ಹತ್ಯೆ ಕಾರಣ ಎಲ್ಲವೂ ಬಯಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆಯಾಗಿರುವ ಓಂ ಪ್ರಕಾಶ್ ಅವರು ಹಿರಿಯ ಪೊಲೀಸ್ ಅಧಿಕಾರಿಯಾಗಿದ್ದವರು. ಹಾಗಾಗಿ ಅವರ ಕೊಲೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೊಲೆಗೆ ಸಂಬಂಧಿಸಿದಂತೆ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ ಮತ್ತು ಅವರು ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ತನಿಖೆಯನ್ನು ಸಿಸಿಬಿಗೆ ಹಸ್ತಾಂತರಿಸಲಾಗಿದೆ. ಏಕೆಂದರೆ, ಅವರು ಹಿರಿಯ ಅಧಿಕಾರಿಯಾಗಿದ್ದರು. ಸದ್ಯ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಮೊಬೈಲ್ ಫೋನ್‌ನಿಂದ ಯಾವುದೇ ಮಾಹಿತಿ ಲಭ್ಯವಾಗಿದೆಯೇ ಎಂದು ಕೇಳಿದಾಗ, 'ನನಗೆ ಗೊತ್ತಿಲ್ಲ'. ತನಿಖೆಯ ಸಮಯದಲ್ಲಿ ಆ ಎಲ್ಲ ವಿಷಯಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ನಿವೃತ್ತ ಡಿಜಿಪಿ ಕೊಲೆ ಹಿಂದೆ ಹಲವು ಕಾರಣಗಳು ಕೇಳಿಬರುತ್ತಿವೆ. ಪತಿ ನಿರಂತರ ಕಿರುಕುಳ ನೀಡುತ್ತಿದ್ದರು ಎಂಬುದು ಒಂದು ಆರೋಪವಾದರೆ, ಮತ್ತೊಂದೆಡೆ ಪಲ್ಲವಿ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರಿಂದ ಪತಿಯನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಆಸ್ತಿ ಕಲಹದಿಂದ ಓಂ ಪ್ರಕಾಶ್ ಅವರು ಕೊಲೆಯಾದರಾ ಎಂಬ ಅನುಮಾನವೂ ವ್ಯಕ್ತವಾಗಿದೆ. ಹತ್ಯೆಗೆ ನಿಖರ ಕಾರಣ ಹಾಗೂ ಆಳ ತನಿಖೆ ನಡೆಸಲು ಪ್ರಕರಣವನ್ನು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಸಿಸಿಬಿಗೆ ವರ್ಗಾಯಿಸಿ ಆದೇಶಿಸಿದ್ದಾರೆ. ಸದ್ಯ ಸಿಸಿಬಿ ಮಹಿಳಾ ಸಂರಕ್ಷಣಾ ದಳ ಎಸಿಪಿಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ ಬೆನ್ನಲ್ಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದ ಎಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು, ವಿಚಾರಣೆ ವೇಳೆ ಪತ್ನಿ ಪಲ್ಲವಿ (64) ತಪ್ಪೊಪ್ಪಿಕೊಂಡಿದ್ದರಿಂದ ಅವರನ್ನು ಬಂಧಿಸಿದ್ದರು. ಸದ್ಯದ ಮಟ್ಟಿಗೆ ಹತ್ಯೆಯಲ್ಲಿ ಪುತ್ರಿ ಕೃತಿ ವಿರುದ್ಧ ಸಾಕ್ಷ್ಯಾಧಾರಗಳು ಲಭಿಸದ ಹಿನ್ನೆಲೆಯಲ್ಲಿ ಆಕೆಯನ್ನ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Om Prakash Murder Case: ನಿವೃತ್ತ ಡಿಜಿಪಿ ಓಂ ಪ್ರಕಾಶ್‌ ಕೊಲೆ ಮಾಡಿದ ಪತ್ನಿಗೆ 14 ದಿನ ನ್ಯಾಯಾಂಗ ಬಂಧನ, ಕೇಸ್‌ ಸಿಸಿಬಿಗೆ

ತಂದೆಯ ಕೊಲೆಗೆ ತಾಯಿ ಹಾಗೂ ತಂಗಿಯ ಕಾರಣವೆಂದು ಆರೋಪಿಸಿ ಪುತ್ರ ಕಾರ್ತಿಕೇಶ್ ನೀಡಿದ ದೂರು ಆಧರಿಸಿ ಪಲ್ಲವಿ ಹಾಗೂ ಕೃತಿ ಎಂಬುವರನ್ನ ನಿನ್ನೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ವಿಚಾರಣೆ ವೇಳೆ ಪತಿಯು ತಮ್ಮ ಮೇಲೆ ನಿರಂತರ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಪತಿಯನ್ನು ಚಾಕುವಿನಿಂದ ಸಾಯಿಸಿರುವುದಾಗಿ ಪಲ್ಲವಿ ಹೇಳಿಕೆ ನೀಡಿದ್ದರು. ಹೀಗಾಗಿ ಅವರನ್ನು ಬಂಧಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.