ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಡಿಜಿಪಿ ರಾಮಚಂದ್ರರಾವ್ ಅಮಾನತು ಆದೇಶ ರದ್ದು; ಹೊಸ ಹುದ್ದೆಗೆ ಮರು ನೇಮಕ ಮಾಡಿ ಸರ್ಕಾರ ಆದೇಶ

ಮಹಿಳೆಯರೊಂದಿಗಿನ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಹೊಸ ಹುದ್ದೆ ನೇಮಕ ಮಾಡಲಾಗಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಮಹಿಳೆಯರೊಂದಿಗಿನ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರರಾವ್ (DGP Ramachandra Rao) ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಹೊಸ ಹುದ್ದೆ ನೇಮಕ ಮಾಡಲಾಗಿದೆ. ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತಾದ ವಿಡಿಯೋಗಳು ವೈರಲ್ ಆಗಿದ್ದವು. ಬಳಿಕ ತನಿಖೆಯಲ್ಲಿ ಅವು ಅಸಲಿ ಎಂಬ ಸಂಗತಿ ಬಯಲಾಗಿತ್ತು. ಇದೀಗ ಅಮಾನತು ಆದೇಶವನ್ನು ಹಿಂಪಡೆದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಡೈರೆಕ್ಟರ್ ಜನರಲ್ ಆಫ್ ಪೊಲೀಸ್(ಪೊಲೀಸ್ ಮ್ಯಾನುಯೆಲ್) ಎನ್ನುವ ಹೊಸ ಹುದ್ದೆ ಸೃಷ್ಟಿಸಿ ಈ ಹುದ್ದೆಗೆ ರಾಮಚಂದ್ರರಾವ್ ಅವರನ್ನು ನೇಮಕ ಮಾಡಲಾಗಿದೆ. ಆಲ್ ಇಂಡಿಯಾ ಸರ್ವಿಸ್ ನಿಯಮಗಳಡಿ ರಾಮಚಂದ್ರರಾವ್ ಅವರ ಅಮಾನತು ಆದೇಶ ಹಿಂಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಜನವರಿಯಲ್ಲಿ ವಿಡಿಯೋಗಳು ಬಹಿರಂಗವಾಗಿ ಅವರನ್ನು ಜನವರಿ 19ರಂದು ಅಮಾನತುಗೊಳಿಸಿ ಸರ್ಕಾರ ಆದೇಶಿಸಿತ್ತು. ಐದು ತಿಂಗಳ ನಂತರ ಅಮಾನತು ಆದೇಶ ಹಿಂಪಡೆದ ಸರ್ಕಾರ ಪೊಲೀಸ್ ನಿಯಮಾವಳಿ ಡಿಜಿಪಿಯಾಗಿ ನೇಮಕ ಮಾಡಿದೆ.

ವರದಿ ಆಧರಿಸಿ ವಿಚಾರಣೆ ನಡೆಸುವ ಬಗ್ಗೆ ಸರ್ಕಾರ ಚಿಂತಿಸಿತ್ತು. ಆದರೆ ಈ ಕುರಿತಾಗಿ ತೀರ್ಮಾನ ಕೈಗೊಳ್ಳದೆ ರಾಮಚಂದ್ರರಾವ್ ಅವರ ಅಮಾನತು ಆದೇಶ ರದ್ದು ಮಾಡಿ ಹೊಸ ಹುದ್ದೆಗೆ ನೇಮಕ ಮಾಡಲಾಗಿದೆ. ಇದೇ ತಿಂಗಳಾಂತ್ಯಕ್ಕೆ ಸೇವೆಯಿಂದ ರಾವ್‌ ಅವರು ನಿವೃತ್ತರಾಗಲಿದ್ದಾರೆ.

ಸಮವಸ್ತ್ರದಲ್ಲೇ ರಾಮಚಂದ್ರ ರಾವ್‌ ಮಹಿಳೆಯರೊಂದಿಗೆ ನಡೆಸಿದ ಸರಸದ ವಿಡಿಯೊ ಅಸಲಿ; ತನಿಖಾ ತಂಡದಿಂದ ಬಯಲಾಯ್ತು ಸತ್ಯ

ರನ್ಯಾಗೆ ಜಾಮೀನು

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರನ್ಯಾ ರಾವ್​​​ಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ನೀಡಿದೆ. 2025 ಮಾರ್ಚ್ 3ರಂದು ನಟಿ ರನ್ಯಾ ರಾವ್ 14.8 ಕೆಜಿ ಚಿನ್ನದ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್​ಐ ಕೈಯಲ್ಲಿ ಲಾಕ್ ಆಗಿದ್ದರು. ಪ್ರಕರಣ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಅರ್ಜಿ ವಜಾ ಮಾಡಿತ್ತು. ಹೀಗಾಗಿ ರನ್ಯಾ ರಾವ್​ಗೆ ಒಂದು ವರ್ಷ ಜಾಮೀನು ಸಿಕ್ಕಿರಲಿಲ್ಲ.

Vishakha Bhat Heggar

View all posts by this author