ಬೆಂಗಳೂರು: ಮಹಿಳೆಯೊಂದಿಗಿನ ರಾಸಲೀಲೆ ವಿಡಿಯೋ ವೈರಲ್ ಆರೋಪದ ಬೆನ್ನಲ್ಲೇ ಡಿಜಿಪಿ ಡಾ. ರಾಮಚಂದ್ರ ರಾವ್ ಅವರನ್ನು (DGP Ramachandra Roa) ಅಮಾನತು ಮಾಡಲಾಗಿದೆ. ಡಿಜಿಪಿ ರಾಮಚಂದ್ರ ರಾವ್ ಅವರನ್ನ ಸಸ್ಪೆಂಡ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಚೇರಿಯಲ್ಲಿ ಮಹಿಳೆಯರ ಜೊತೆ ಅಶ್ಲೀಲ ವರ್ತನೆಯಲ್ಲಿ ತೊಡಗಿದ್ದ ಆಡಿಯೋ ಹಾಗೂ ವಿಡಿಯೋ ಜನವರಿ 19 ರಂದು ವೈರಲ್ ಆಗಿತ್ತು. ಉನ್ನತ ಹುದ್ದೆಯಲ್ಲಿರೀ ಈ ಅಧಿಕಾರಿಯ ಕೇಸ್ ಸರ್ಕಾರಕ್ಕೆ ಮುಜುಗರವನ್ನು ಉಂಟು ಮಾಡಿದ ಹಿನ್ನೆಲೆ ಡಿಜಿಪಿ ರಾಮಚಂದ್ರ ರಾವ್ ಅವರನ್ನ ಸರ್ಕಾರ ಅಮಾನತುಗೊಳಿಸಿ ಆದೇಶ ನೀಡಿದೆ.
ಕೆ.ರಾಮಚಂದ್ರ ರಾವ್ ಸರ್ಕಾರಿ ನೌಕರರಿಗೆ ಶೋಭೆಯಲ್ಲದ ರೀತಿಯಲ್ಲಿ ವರ್ತಿಸಿದ ಆರೋಪವಿದ್ದು, ಅಶ್ಲೀಲವಾಗಿ ವರ್ತಿಸಿರುವುದು ಕಂಡುಬಂದಿದೆ. ಇದು ಸರ್ಕಾರಕ್ಕೆ ಮುಜುಗರವನ್ನು ಉಂಟುಮಾಡಿದೆ. ರಾಜ್ಯ ಸರ್ಕಾರ ಇದನ್ನ ಪರಿಶೀಲನೆ ನಡೆಸಲಿದೆ ಎಂದು ಆದೇಶದಲ್ಲಿ ಬರೆಯಲಾಗಿದೆ. ಅಧಿಕಾರಿಯ ವರ್ತನೆ ಅಖಿಲ ಭಾರತ ಸೇವೆಗಳ (ನಡತೆ) ನಿಯಮಗಳು, 1968 ರ ನಿಯಮ 3 ರ ಉಲ್ಲಂಘನೆಯಾಗಿದೆ. ಆದ್ದರಿಂದ ವಿಚಾರಣೆಯನ್ನು ಬಾಕಿ ಇರಿಸಿ. ಡಾ. ಕೆ. ರಾಮಚಂದ್ರ ರಾವ್ ಅವರನ್ನ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ. ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು. 1969 ರ ನಿಯಮ 3(1)(a) ಅಡಿಯಲ್ಲಿ ಅಮಾನತುಗೊಳಿಸಿ ಆದೇಶ ನೀಡಲಾಗಿದೆ.
ಅಮಾನತು ಆದೇಶದ ಪ್ರತಿ
ರಾಮಚಂದ್ರ ರಾವ್ ಹೇಳಿದ್ದೇನು?
ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಮಚಂದ್ರ ರಾವ್ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಲು ಪ್ರಯತ್ನಿಸಿದರು. ಆದರೆ, ಗೃಹ ಸಚಿವರು ಅನಾರೋಗ್ಯದ ಕಾರಣ ಹೇಳಿ ಭೇಟಿಗೆ ಅವಕಾಶ ನೀಡಿಲ್ಲ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ವಿಡಿಯೋ ಬಗ್ಗೆ ನನಗೆ ಗೊತ್ತಿಲ್ಲ. ವಿಡಿಯೊ ಕೃತಕವಾಗಿ ಸೃಷ್ಟಿಸಲಾಗಿದೆ. ಈ ಬಗ್ಗೆ ತನಿಖೆಯಾಗಬೇಕಿದೆ ಎಂದಿದ್ದಾರೆ.
ವಿಡಿಯೋದಲ್ಲಿ ಏನಿದೆ?
ಮಹಿಳೆಯರ ಜತೆ ಸರಸವಾಡಿರುವ ವಿಡಿಯೊ ಹಾಗೂ, ಮಹಿಳೆ ಜತೆ ಮಾತನಾಡಿದ್ದಾರೆ ಎನ್ನಲಾದ ಎರಡು ಆಡಿಯೊಗಳು ವೈರಲ್ ಆಗಿವೆ. ಪೊಲೀಸ್ ಸಮವಸ್ತ್ರದಲ್ಲಿಯೇ ಮಹಿಳೆಯನ್ನು ಮುದ್ದಾಡಿ, ಚುಂಬಿಸಿರುವ ನಲವತ್ತೇಳು ಸೆಕೆಂಡ್‌ಗಳ ವಿಡಿಯೊ ವೈರಲ್ ಆಗಿದೆ. ಮೂರು ಪ್ರತ್ಯೇಕ ವಿಡಿಯೊಗಳನ್ನು ಕೂಡಿಸಿ 47 ಸೆಕೆಂಡ್‌ಗಳ ವಿಡಿಯೊ ಮಾಡಲಾಗಿದೆ.