ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dinesh Gundu Rao: ಮಾಜಿ ಸಿಎಂ ದಿ. ಆರ್.ಗುಂಡೂರಾವ್ ಉಚಿತ ಡಯಾಲಿಸಿಸ್ ಕೇಂದ್ರಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Dinesh Gundu Rao: ಬೆಂಗಳೂರಿನ ಕಾಟನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಉಚಿತ ಡಯಾಲಿಸಿಸ್ ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಚಾಲನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರು: ಬೆಂಗಳೂರಿನ ಕಾಟನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಉಚಿತ ಡಯಾಲಿಸಿಸ್ ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಶುಕ್ರವಾರ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ದಿವಂಗತ ಆರ್. ಗುಂಡೂರಾವ್ ಅವರ ಪುಣ್ಯಸ್ಮರಣೆ ದಿನವಾದ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ನೂತನ ಡಯಾಲಿಸಿಸ್ ಆರೋಗ್ಯ ಕೇಂದ್ರಕ್ಕೆ ಚಾಲನೆ ನೀಡುವ ಮೂಲಕ ರೋಗಿಗಳಿಗೆ ಉಚಿತವಾಗಿ ಡಯಾಲಿಸಿಸ್ ಆರೋಗ್ಯ ಸೇವೆ ಒದಗಿಸಲಾಯಿತು.

ಗಾಂಧೀನಗರ ಕ್ಷೇತ್ರದ ಕಾಟನ್‌ಪೇಟೆ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕರು ಹಾಗೂ ಆರೋಗ್ಯ ಸಚಿವರು ಆಗಿರುವ ದಿನೇಶ್ ಗುಂಡೂರಾವ್ ಉಚಿತವಾಗಿಯೇ ಡಯಾಲಿಸಿಸ್ ಸೇವೆ ನೀಡುವ ಕೇಂದ್ರ ನಿರ್ಮಿಸಿಕೊಡುವ ಭರವಸೆ ನೀಡಿದ್ದರು. ಅದರಂತೆ 2.5 ಕೋಟಿ ವೆಚ್ಚದಲ್ಲಿ 10 ಯಂತ್ರಗಳಿರುವ ಸುಸಜ್ಜಿತ ಡಯಾಲಿಸಿಸ್ ಕೇಂದ್ರವನ್ನು ಆರೋಗ್ಯ ಕೇಂದ್ರದ ಎರಡನೇ ಮಹಡಿಯಲ್ಲಿ ಸ್ಥಾಪಿಸಲಾಗಿದೆ. ‌

ಈ ಸುದ್ದಿಯನ್ನೂ ಓದಿ | Karnataka Assembly Session: ಕಾವೇರಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಮೆಟ್ರೋ ವಿಸ್ತರಣೆ, ಹೊಸ ರಸ್ತೆ ಜಾಲಗಳ ವಿವರ ಕೊಟ್ಟ ಡಿಕೆಶಿ

ಮಾಜಿ ಮುಖ್ಯಮಂತ್ರಿ ದಿವಂಗತ ಆರ್. ಗುಂಡೂರಾವ್ ಅವರ ಪುಣ್ಯ ಸ್ಮರಣೆಯ ದಿನವಾದ ಇಂದು ನೂತನ ಡಯಾಲಿಸಿಸ್ ಕೇಂದ್ರದಲ್ಲಿ ಉಚಿತ ಡಯಾಲಿಸಿಸ್ ಆರೋಗ್ಯ ಸೇವೆಯನ್ನು ಪ್ರಾರಂಭಿಸಲಾಗಿದೆ. ನೂತನ ಕೇಂದ್ರಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಂದು ರಾಜ್ಯಾದ್ಯಂತ ಸರ್ಕಾರದ ಡಯಾಲಿಸಿಸ್ ಕೇಂದ್ರಗಳಲ್ಲಿ ಉತ್ತಮ ಸೇವೆ ಲಭ್ಯವಾಗುತ್ತಿದೆ. PPP ಮಾಡೆಲ್‌ನಲ್ಲಿ ಇಂದು ರಾಜ್ಯಾದ್ಯಂತ ಎಲ್ಲ ಡಯಾಲಿಸಿಸ್ ಕೇಂದ್ರಗಳಲ್ಲಿ 800 ನೂತನ ಏಕಬಳಕೆಯ ಡಯಾಲೈಸರ್ ಯಂತ್ರಗಳನ್ನು ಅಳವಡಿಸಿ ಉತ್ತಮ ಸೇವೆ ಒದಗಿಸಲಾಗುತ್ತಿದೆ. ಏಕಬಳಕೆಯ ಡಯಾಲಿಸಿಸ್‌ನಿಂದಾಗಿ ಸೋಂಕು ರಹಿತ ಸೇವೆಗೆ ಆದ್ಯತೆ ನೀಡಿದ್ದೇವೆ. ಇದರಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿರುವರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಆರ್. ಗುಂಡೂರಾವ್ ಅವರ ಪುಣ್ಯಸ್ಮರಣೆಯ ದಿನವಾದ ಇಂದು 10 ಯಂತ್ರಗಳಿರುವ ಸುಸಜ್ಜಿತ ಉಚಿತ ಡಯಾಲಿಸಿಸ್ ಕೇಂದ್ರ ಗಾಂಧೀನಗರದ ಕ್ಷೇತ್ರದ ಕಾಟನ್‌ಪೇಟೆಯ ಆರೋಗ್ಯ ಕೇಂದ್ರದಲ್ಲಿ ಉದ್ಘಾಟನೆಗೊಂಡಿದೆ. ರೋಗಿಗಳು ಉಚಿತ ಡಯಾಲಿಸಿಸ್‌ನ ಸದುಪಯೋಗ ಪಡೆಯುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದರು.