Dinesh Gundu Rao: ಜ.24ರಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನ: ನಾಳೆ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸಿದ ಹೆಣ್ಣುಮಗುವಿಗೆ ಸ್ಪೆಷಲ್ ಗಿಫ್ಟ್!

Dinesh Gundu Rao: ರಾಜ್ಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಹೆಣ್ಣುಮಕ್ಕಳ ಲಿಂಗಾನುಪಾತವನ್ನು ಹೆಚ್ವಿಸುವುದರ ಜತೆಗೆ ಹೆಣ್ಣು ಭ್ರೂಣ ಹತ್ಯೆಯನ್ನು ಹೋಗಲಾಡಿಸಲು ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ. ಆಸ್ಪತ್ರೆಗಳಲ್ಲಿ ಪಿಂಕ್ ಲೈಟಿಂಗ್ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಮಕ್ಕಳಿಗೆ ಸ್ಪೆಷಲ್ ಗಿಫ್ಟ್ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Dinesh Gundu Rao
Profile Siddalinga Swamy Jan 23, 2025 10:06 PM

ಬೆಂಗಳೂರು, ಜ.23, 2025: ಜನವರಿ 24 ರಂದು ರಾಜ್ಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಹೆಣ್ಣುಮಕ್ಕಳ ಲಿಂಗಾನುಪಾತವನ್ನು ಹೆಚ್ವಿಸುವುದರ ಜತೆಗೆ ಹೆಣ್ಣುಭ್ರೂಣ ಹತ್ಯೆಯನ್ನು ಹೋಗಲಾಡಿಸಲು ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ.

ಈ ಬಾರಿಯ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ರಾಜ್ಯದಾದ್ಯಂತ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಸಂಭ್ರಮದಿಂದ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಆಸ್ಪತ್ರೆಗಳಲ್ಲಿ ಪಿಂಕ್ ಲೈಟಿಂಗ್ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಮಕ್ಕಳಿಗೆ ಸ್ಪೆಷಲ್ ಗಿಫ್ಟ್ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸೂಚನೆ ನೀಡಿದ್ದಾರೆ. 1000 ರೂ ಬೆಲೆಯ ಮಕ್ಕಳ ಕಿಟ್ಸ್‌ಗಳನ್ನು ಜನಿಸಿದ ಹೆಣ್ಣುಮಗುವಿಗೆ ಉಡುಗೊರೆಯಾಗಿ ನೀಡಲು ಆರೋಗ್ಯ ಇಲಾಖೆ ಎಲ್ಲ ಜಿಲ್ಲೆಯ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.‌

ಹೆಣ್ಣುಮಕ್ಕಳ ರಕ್ಷಣೆಗೆ ಸರ್ಕಾರ ಬದ್ಧ. ಹೆಣ್ಣುಮಕ್ಕಳ ಆರೋಗ್ಯ ಕಾಪಾಡುವ ವಿಚಾರದಲ್ಲಿ ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ. ಅನಿಮೀಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆ ಹೆಣ್ಣುಮಕ್ಕಳ ರಕ್ತ ಹೀನತೆ ಹೋಗಲಾಡಿಸುವಲ್ಲಿ ಮಹತ್ವದ ಯೋಜನೆಯಾಗಿದೆ. ಶುಚಿ ಯೋಜನೆ, ಜನನಿ ಸುರಕ್ಷಾ ಯೋಜನೆಗಳನ್ನು ಜಾರಿಗೊಳಿಸಿದೆ. ವಿಶೇಷವಾಗಿ ಹೆಣ್ಣು ಭ್ರೂಣ ಹತ್ಯೆಗಳನ್ನ ನಡೆಸುವವರ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸಮಾಜದಲ್ಲಿ ಹೆಣ್ಣು ಮಗು ಎದುರಿಸುತ್ತಿರುವ ಎಲ್ಲಾ ಅಸಮಾನತೆಗಳ ಬಗ್ಗೆ ದಿನಾಚರಣೆಯ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಹೆಣ್ಣು ಹುಟ್ಟುವ ಮೊದಲೇ ಎದುರಿಸುವ ಲಿಂಗ ತಾರತಮ್ಯವು ಒಂದು ಪ್ರಚಲಿತ ಸಮಸ್ಯೆಯಾಗಿದೆ. ಇಂದಿಗೂ ಸಹ ಹೆಚ್ಚಿನ ಜನರು ಹೆಣ್ಣು ಮಕ್ಕಳಿಗಿಂತ ಗಂಡು ಮಕ್ಕಳನ್ನು ಹೊಂದಬೇಕೆಂದು ಎಂದು ನಂಬುತ್ತಾರೆ. ಇದು ಸರಿಯಲ್ಲ. ಹೆಣ್ಣನ್ನು ಪೂಜ್ಯ ಭಾವನೆಯಿಂದ ನೋಡಬೇಕು. ಲಿಂಗ ಪತ್ತೆ ಮತ್ತು ಗರ್ಭಪಾತ ನಡೆಸುವ ಎಲ್ಲಾ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಮತ್ತು ಹೆಣ್ಣು ಮಗುವಿನ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ PCPNDT ಕಾಯ್ದೆಯನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹೆಣ್ಣುಭ್ರೂಣ ಹತ್ಯೆ ತಡೆಯಲು ಸರ್ಕಾರವು ಕೈಗೊಂಡಿರುವ ಕ್ರಮಗಳು

* ರಾಜ್ಯದಲ್ಲಿ ಇದುವರೆಗೂ ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯನ್ನು ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್ / ಮಾಲೀಕರು/ ವೈದ್ಯರ ವಿರುದ್ಧ ಒಟ್ಟು 136 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 74 ಪ್ರಕರಣಗಳು ದಂಡವಿಧಿಸಿ ಖುಲಾಸೆಗೊಂಡಿದ್ದು, 62 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ಬಾಕಿಯಿರುತ್ತದೆ.

* ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್ / ಆಸ್ಪತ್ರೆ/ ವೈದ್ಯರು / ದಲ್ಲಾಳಿಗಳು / ಗರ್ಭಿಣಿಯರ ಸಂಬಂಧಿಕರ ವಿರುದ್ಧ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ರಾಜ್ಯ ಸರ್ಕಾರದಿಂದ 1,00,000 ರೂ. ಬಹುಮಾನ ಘೋಷಿಸಲಾಗಿದೆ.

* ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯಡಿ ಬರುವ ಎಲ್ಲಾ ಶಾಸನಬದ್ಧ ಸಮಿತಿಗಳು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚನೆಗೊಂಡಿರುತ್ತದೆ.

* ರಾಜ್ಯದಿಂದ ʼಬಾಲಿಕಾ' ಆನ್‌ಲೈನ್ ಸಾಫ್ಟ್‌ವೇರ್ ಮುಖಾಂತರ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ.

* ಅಲ್ಪಾ ಸೌಂಡ್ ತಯಾರಕರು, ಮಾರಾಟಗಾರರು, ರಿಪೇರಿ ಮಾಡುವವರನ್ನು ರಾಜ್ಯ ಮಟ್ಟದಲ್ಲಿ ನೋಂದಾಯಿಸಿ, ತ್ರೈಮಾಸಿಕ ವರದಿಯನ್ನು ಪಡೆಯಲಾಗುತ್ತಿದೆ.

* ಪಿ.ಸಿ & ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆಯನ್ನು ರಚಿಸಲಾಗಿದೆ.

* ಗುಪ್ತಕಾರ್ಯಚಾರಣೆಯನ್ನು ಕೈಗೊಳ್ಳುವ ಮೂಲಕ ಹೆಣ್ಣಭ್ರೂಣಹತ್ಯೆ ನಡೆಸುವವರನ್ನು ಸೆರೆಹಿಡಿದು ಪೊಲೀಸರ ವಶಕ್ಕೆ ನೀಡಲಾಗಿದೆ.

* ಪ್ರತಿ ವರ್ಷ ಜನವರಿ 24 ರಂದು ಜಿಲ್ಲೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಸದರಿ ದಿನದಂದು ಜನನವಾಗಿರುವ ಹೆಣ್ಣು ಮಗುವಿನ ತಾಯಂದಿರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಗುತ್ತಿದೆ‌.

ಈ ಸುದ್ದಿಯನ್ನೂ ಓದಿ | CM Siddaramaiah: ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

urea
2:13 PM January 22, 2025

ಕೃಷಿ ಸಬ್ಸಿಡಿಗೆ ರೈತರು ಬಿಟ್ಟು ಉಳಿದವರೆಲ್ಲ ಫಲಾನುಭವಿಗಳು!

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು