ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸರ್ಕಾರಿ ಶಾಲೆಗಳ 15 ಸಾವಿರ ಶಿಕ್ಷಕರ ನೇರ ನೇಮಕಾತಿ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

Teachers recruitment: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 15,000 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಈ ಅನುಮೋದನೆ ನೀಡಲಾಗಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 15,000 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಶಾಲಾ (Teachers recruitment) ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಈ ಅನುಮೋದನೆ ನೀಡಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ (ಆಡಳಿತ) ಬಿ.ಕೆ. ಮಮತಾ ರಾಣಿ ಅವರು ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ 6905 ಹಾಗೂ ಇತರೆ ಜಿಲ್ಲೆಗಳಿಗೆ 8095 ಹುದ್ದೆ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದೀರ್ಘಕಾಲದಿಂದ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಂದಾಗಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೊಂದರೆಯಾಗುತ್ತಿತ್ತು. ಈ ನೇರ ನೇಮಕಾತಿಯ ಮೂಲಕ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಹಕಾರಿಯಾಗಲಿದ್ದು, ಶಿಕ್ಷಕ ಆಕಾಂಕ್ಷಿಗಳಿಗೆ ಉತ್ತಮ ಉದ್ಯೋಗಾವಕಾಶ ದೊರೆಯಲಿದೆ.

ಜಿಲ್ಲಾವಾರು ವಿವರ

ಇತರೆ ಜಿಲ್ಲೆಗಳ ಹುದ್ದೆ
ಜಿಪಿಟಿ- 5272
ಪ್ರೌಢಶಾಲೆ- 2286
PST- 100
ಕಂಪ್ಯೂಟರ್ ಸೈನ್ಸ್-200
PE ಗ್ರೇಡ್ 1- 131
PE ಗ್ರೇಡ್- 2- 106

ಕಲ್ಯಾಣ ಕರ್ನಾಟಕ ವಿವರ
ಜಿಪಿಟಿ- 3228
ಪ್ರೌಢಶಾಲೆ- 2214
PST- 800
ಕಂಪ್ಯೂಟರ್ ಸೈನ್ಸ್-300
PE ಗ್ರೇಡ್ 1- 319
PE ಗ್ರೇಡ್- 2- 44

ಶೀಘ್ರದಲ್ಲೇ ಶಾಲಾ ಶಿಕ್ಷಣ ಇಲಾಖೆಯು ಈ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ವಿವರಗಳನ್ನು ಪ್ರಕಟಿಸಲಿದೆ. ಅಧಿಸೂಚನೆಯಲ್ಲಿರುವ ನಿಯಮಾವಳಿಯಂತೆ ಅಭ್ಯರ್ಥಿಗಳ ಆಯ್ಕೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಉಳಿದಂತೆ ಸ್ಪರ್ಧಾತ್ಮಕ ಪರೀಕ್ಷೆ, ಶಿಕ್ಷಕರ ಅರ್ಹತಾ ಪರೀಕ್ಷೆ ಮತ್ತು ಶೈಕ್ಷಣಿಕ ಅರ್ಹತೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ವೇಟೇಜ್‌ ಆಧಾರದ ಮೇಲೆ ಮೆರಿಟ್‌ ಪಟ್ಟಿ ಸಿದ್ಧಪಡಿಸಲಾಗುತ್ತದೆ.

ಬಿಸಿಲಿನ ಹೊಡೆತಕ್ಕೆ ಇಬ್ಬರು ಬಲಿ: ಜನಗಣತಿ ಕಾರ್ಯದ ವೇಳೆ ಶಿಕ್ಷಕರು ಸಾವು

ಅಭ್ಯರ್ಥಿಗಳಿಗೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರತಿ ಪತ್ರಿಕೆಯಲ್ಲೂ ಕನಿಷ್ಠ ಶೇ. 35 ಅಂಕ ಗಳಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಪರೀಕ್ಷೆಯು ಕನ್ನಡ ಮತ್ತು ಇಂಗ್ಲೀಷ್‌ ಮಾಧ್ಯಮದಲ್ಲಿ ನಡೆಯಲಿದೆ. ಇನ್ನು, ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕಿದೆ. ಪರಿಶಿಷ್ಟ ಜಾತಿ/ಪಂಗಡ, ಪ್ರವರ್ಗ-1 ಮತ್ತು ವಿಶೇಷ ಚೇತನರಿಗೆ 43 ವರ್ಷಗಳು, ಪ್ರವರ್ಗ-2ಎ, 2ಬಿ, 3ಎ, 3ಬಿಗೆ 41 ವರ್ಷ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 38 ವರ್ಷಗಳ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ವಸ್ತು ನಿಷ್ಠ ಮತ್ತು ವಿವರಣಾತ್ಮಕ ಮಾದರಿಯ ಪ್ರಶ್ನೆಗಳನ್ನು ಒಳಗೊಂಡಿರಲಿದೆ ಎಂದು ಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Vishakha Bhat Heggar

View all posts by this author