ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನಿಗಮ ಮಂಡಳಿ, ಸಂಪುಟ ವಿಸ್ತ್ರರಣೆ ಬಗ್ಗೆ ಚರ್ಚೆ ಸಾಧ್ಯತೆ: ದೆಹಲಿಗೆ ಡಿಕೆ, ಪಟ್ಟಿ ಫೈನಲ್‌ ?

ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಹೋರಾಟಕ್ಕೆ ಸಂಬಂಧಿಸಿದಂತೆ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಈ ಸಭೆಯ ಬಳಿಕ ರಾಜ್ಯದ ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಹಾಗೂ ಎರಡು ಸಚಿವ ಸ್ಥಾನಗಳ ಭರ್ತಿಗೆ ಸಂಬಂಧಿಸಿದಂತೆ ಹೈಕಮಾಂಡ್ ನಾಯಕ ರೊಂದಿಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಇದಕ್ಕೆ ಪೂರಕವಾಗಿ ಸಿಎಂ ಡಿಕೆಶಿ ಸಹ, ದೆಹಲಿಯಲ್ಲಿ ಎಲ್ಲವೂ ನಿರ್ಧಾರ ವಾಗಲಿದ್ದು, ಪ್ರಕ್ರಿಯೆ ಶೀಘ್ರವೇ ಪೂರ್ಣ ಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಸಿಡಬ್ಲ್ಯೂಸಿ ಸಭೆ ಬಳಿಕ ಹೈಕಮಾಂಡ್ ಜತೆ ಸಮಾಲೋಚನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಹಾಗೂ ಖಾಲಿ ಇರುವ ಎರಡು ಸಚಿವ ಸ್ಥಾನಗಳ ಭರ್ತಿಗೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಹೋರಾಟಕ್ಕೆ ಸಂಬಂಧಿಸಿದಂತೆ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಈ ಸಭೆಯ ಬಳಿಕ ರಾಜ್ಯದ ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಹಾಗೂ ಎರಡು ಸಚಿವ ಸ್ಥಾನಗಳ ಭರ್ತಿಗೆ ಸಂಬಂಧಿಸಿದಂತೆ ಹೈಕಮಾಂಡ್ ನಾಯಕ ರೊಂದಿಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಇದಕ್ಕೆ ಪೂರಕವಾಗಿ ಸಿಎಂ ಡಿಕೆಶಿ ಸಹ, ದೆಹಲಿಯಲ್ಲಿ ಎಲ್ಲವೂ ನಿರ್ಧಾರ ವಾಗಲಿದ್ದು, ಪ್ರಕ್ರಿಯೆ ಶೀಘ್ರವೇ ಪೂರ್ಣ ಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: CM DK Shivakumar: ಕಾನೂನು ಚೌಕಟ್ಟಿನಲ್ಲಿ ಬರಗಾಲ ಪರಿಸ್ಥಿತಿ ಪರಾಮರ್ಶೆ, ಬರ ಪರಿಹಾರಕ್ಕೆ ಚಿಂತನೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕಾಂಗ್ರೆಸ್‌ನ ಹಲವು ಹಿರಿಯ ಶಾಸಕರು ಈಗಾಗಲೇ ಒಂದಿಲ್ಲೊಂದು ರೀತಿಯಲ್ಲಿ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಆದ್ದರಿಂದ ಅಸಮಾಧಾನಿತ ಹಿರಿಯ ಶಾಸಕರಿಗೆ ಆಯಕಟ್ಟಿನ ನಿಗಮ ಮಂಡಳಿಗಳನ್ನು ನೀಡುವ ಮೂಲಕ ಅಸಮಾಧಾನ ತಣಿಸಲು ಸಿಎಂ ಮುಂದಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಡ್ಲ್ಯೂಸಿ ಸಭೆಯಲ್ಲಿ ಭಾಗಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರೂ ತೆರಳುತ್ತಿದ್ದು, ಎಐಸಿಸಿಯ ಸಿಡ್ಲ್ಯೂಸಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಯಾವ ರೀತಿಯಲ್ಲಿ ಹೋರಾಟ ನಡೆಸಬೇಕು? ಎನ್ನುವ ಬಗ್ಗೆ ಈ ಚರ್ಚೆ ಯಾಗುವ ಸಾಧ್ಯತೆಯಿದೆ. ದೆಹಲಿಗೆ ತೆರಳುವ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮತಗ ಳ್ಳತನ ವಿಚಾರವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದ ಅಂಶಗಳು ನಿಜವಾಗಿವೆ.

ಹೈಕಮಾಂಡ್ ನಾಯಕರು ಮತಗಳ್ಳತನ ವಿಚಾರವಾಗಿ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಕರೆದಿದ್ದು, ಈ ವಿಚಾರವಾಗಿ ದೇಶವೇ ಜಾಗೃತ ಗೊಂಡಿದೆ. ಪಕ್ಷದ ಮುಂದಿನ ಹೋರಾಟದ ರೂಪುರೇಷೆ ಕುರಿತು ಚರ್ಚೆ ಮಾಡಿದ್ದೇವೆ. ಕಾರ್ಯಕಾರಿ ಸಮಿತಿ ಸಭೆ ಬಳಿಕ ಎಲ್ಲ ಪ್ರತಿಪಕ್ಷಗಳ ಸಭೆ ಕರೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸರ್ವಪಕ್ಷ ಸಭೆಗೆ ದಿನಾಂಕ ನಿಗದಿ?

ಈ ನಡುವೆ ಬರ ಪರಿಸ್ಥಿತಿ ಹಾಗೂ ಕಸ್ತೂರಿ ರಂಗನ್ ವರದಿಯ ಬಗ್ಗೆ ರಾಜ್ಯದ ನಿಲುವನ್ನು ತಿಳಿಸುವ ನಿಟ್ಟಿನಲ್ಲಿ ಸರ್ವಪಕ್ಷ ನಿಯೋಗದೊಂದಿಗೆ ಭೇಟಿಯಾಗಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಮಯ ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, 40 ಸಾವಿರ ಕೋಟಿ ರು.ಗಳಿಗೂ ಅಧಿಕವಾದ ಬೆಳೆ ನಷ್ಟವಾಗಿದೆ.

ಈ ಬಗ್ಗೆ ಈಗಾಗಲೇ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆದು ಎನ್‌ಡಿಆರ್ ಎಫ್ ನಿಯಮಾ ವಳಿಗಳ ಅನುಸಾರ 3700 ಕೋಟಿ ರು.ಗಳಿಗೂ ಹೆಚ್ಚಿನ ಮಧ್ಯಂತರ ಪರಿಹಾರ ನೀಡುವಂತೆ ಮನವಿ ಮಾಡಿ ದ್ದಾರೆ. ಆದರೆ ಅದಕ್ಕೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ ಈ ಬಗ್ಗೆ ಚರ್ಚಿಸಲು ಹಾಗೂ ಕಸ್ತೂರಿರಂಗನ್ ವರದಿ ಕುರಿತಂತೆ ರಾಜ್ಯ ಸರಕಾರ ಪ್ರಬಲ ವಿರೋಧ ವ್ಯಕ್ತಪಡಿಸಿದೆ. ಶಾಸನ ಸಭೆಯಲ್ಲಿ ಪಕ್ಷಾತೀತವಾಗಿ ವರದಿಯ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಲಾಗಿದೆ. ಈ ಎರಡು ವಿಷಯದ ಬಗ್ಗೆ ಮಾತನಾಡಲು ಸಮಯ ಕೇಳಲಿದ್ದಾರೆ. ದಿನಾಂಕ ನಿಗದಿಯಾದರೆ ಸರ್ವಪಕ್ಷ ನಿಯೋಗವನ್ನು ಕರೆದುಕೊಂಡು ಹೋಗುವ ಸಾಧ್ಯತೆಯಿದೆ

image

ಬರದ ವಿಷಯದಲ್ಲಿ ರಾಜ್ಯ ಸರಕಾರ ರೈತರಿಗೆ ಮೋಸ ಮಾಡಿದೆ. ಆದ್ದರಿಂದ ಬರದ ವಿಷಯಕ್ಕೆ ಸಂಬಂಧಿಸಿದಂತೆ ಸರ್ವಪಕ್ಷ ನಿಯೋಗದಲ್ಲಿ ನಾವು ಹೋಗುವುದಿಲ್ಲ. ಆದರೆ ಕಸ್ತೂರಿ ರಂಗನ್ ವರದಿ ವಿಷಯದಲ್ಲಿ ಸರ್ವಪಕ್ಷ ನಿಯೋಗದಲ್ಲಿ ತೆರಳಿ, ಕೇಂದ್ರ ಸಚಿವರನ್ನು ಭೇಟಿಯಾಗಲು ನಾವು ಸಿದ್ಧ.

-ಆರ್.ಅಶೋಕ, ವಿಧಾನಸಭೆ ಪ್ರತಿಪಕ್ಷ ನಾಯಕ
image

ನಿಗಮ ಮಂಡಳಿ ಅಧ್ಯಕ್ಷರ ನೇಮಕ, ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ನೀಡುವ ಬಗ್ಗೆ ದೆಹಲಿಯಲ್ಲಿ ತೀರ್ಮಾನವಾಗಿದೆ. ಹಿರಿಯ ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಅವಕಾಶ ಕಲ್ಪಿಸಿ ಬಳಿಕ ಪಕ್ಷದ ಕಾರ್ಯಕರ್ತರಿಗೂ ಅವಕಾಶ ನೀಡಬೇಕು ಎಂಬ ತೀರ್ಮಾನವಾಗಿದೆ. ಉಳಿದ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲಾಗುವುದು.

-ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ
image

ಬರದ ವಿಚಾರಕ್ಕಾಗಿ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗಿ ಏನು ಮಾಡುತ್ತೀರಿ? ವಿಮಾನ, ಫೈವ್ ಸ್ಟಾರ್ ಹೋಟೆಲ್ ವಾಸ್ತವ್ಯ ಎಲ್ಲವೂ ಅನಗತ್ಯ ಖರ್ಚು. ನೀವೇ ಯಾರಾದರೂ ಹೋಗಿ ಮಾತನಾಡಿಕೊಂಡು ಬರಲಾಗುವು ದಿಲ್ಲವೇ? ಖಜಾನೆ ಖಾಲಿ ಮಾಡಿ ಕೊಂಡು ಕುಳಿತಿರುವವರು ನೀವು.

- ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವ