ಹೈಕಮಾಂಡ್ ಕರೆಗೆ ಕಾಯುತ್ತಿರುವ ಡಿಕೆ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹಾಗೂ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇನ್ನೆರೆಡು ದಿನ ದಲ್ಲಿ ದೆಹಲಿಗೆ ತೆರಳಲಿದ್ದಾರೆ ಎನ್ನುವ ಮಾತು ಗಳು ಕೇಳಿ ಬರುತ್ತಿದೆ. ಆದರೆ ಈವರೆಗೆ ದೆಹಲಿ ಭೇಟಿಯ ಸಮಯ ನಿಗದಿಯಾಗಿಲ್ಲ. ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ತಡರಾತ್ರಿ ಅಥವಾ ಮಂಗಳವಾರ ಬೆಳಗ್ಗೆ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿ ಯಾಗಿ, ಕರ್ನಾಟಕದ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.
-
ವಿದೇಶದಿಂದ ರಾಹುಲ್ ವಾಪಸ್, ಇಂದು ರಾಗಾ-ಖರ್ಗೆ ಸಭೆ?
ಡಿಕೆಶಿ, ಸಿದ್ದು , ಬಿ.ಕೆ.ಹರಿಪ್ರಸಾದ್‌ಗೆ ಸದ್ಯವೇ ಬುಲಾವ್ ನಿರೀಕ್ಷೆ
ಬೆಂಗಳೂರು: ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆದರೂ ಸಂಪುಟ ವಿಸ್ತರಣೆ ಯಾಗದಿರುವುದು ರಾಜ್ಯ ಕಾಂಗ್ರೆಸ್‌ನಲ್ಲಿ ಒತ್ತಡವನ್ನು ಹೆಚ್ಚಿಸಿದೆ. ಇಷ್ಟು ದಿನ ರಾಹುಲ್ ಗಾಂಧಿ ವಿದೇಶದಿಂದ ವಾಪಸಾಗುವ ನಿರೀಕ್ಷೆಯಲ್ಲಿ ಕಾಲದೂಡಿದ ನಾಯಕರು ಇದೀಗ, ‘ಹೈಕಮಾಂಡ್’ ಕರೆಯುವ ದಾರಿಯನ್ನು ಕಾಯುತ್ತಿದ್ದಾರೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹಾಗೂ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇನ್ನೆರೆಡು ದಿನ ದಲ್ಲಿ ದೆಹಲಿಗೆ ತೆರಳಲಿದ್ದಾರೆ ಎನ್ನುವ ಮಾತು ಗಳು ಕೇಳಿ ಬರುತ್ತಿದೆ. ಆದರೆ ಈವರೆಗೆ ದೆಹಲಿ ಭೇಟಿಯ ಸಮಯ ನಿಗದಿಯಾಗಿಲ್ಲ. ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ತಡರಾತ್ರಿ ಅಥವಾ ಮಂಗಳವಾರ ಬೆಳಗ್ಗೆ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ, ಕರ್ನಾಟಕದ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈ ಚರ್ಚೆಯ ಬಳಿಕ ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲ ಗಳು ತಿಳಿಸಿವೆ. ಖರ್ಗೆ ಅವರನ್ನು ಭೇಟಿಯಾಗಿರುವ ರಾಜ್ಯ ನಾಯಕರು ಹಾಗೂ ಸಚಿವಾಕಾಂಕ್ಷಿಗಳು ಸಂಪುಟ ವಿಸ್ತರಣೆ ಬಗ್ಗೆ ಒತ್ತಡ ಹೇರಿದ್ದಾರೆ.
ಇದನ್ನೂ ಓದಿ: CM DK Shivakumar: ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿ.ಕೆ. ಶಿವಕುಮಾರ್
ಆದ್ದರಿಂದ ಮುಂಬರಲಿರುವ ಚಳಿಗಾಲದ ಅಧಿವೇಶನದ ವೇಳೆಗೆ ಪೂರ್ಣ ಪ್ರಮಾಣದ ಸಂಪುಟವಿರ ಬೇಕು ಎಂದು ರಾಹುಲ್ ಗಾಂಧಿ ಅವರಿಗೆ ಖರ್ಗೆ ಮನವ ರಿಕೆ ಮಾಡಿಕೊಟ್ಟು, ಗ್ರೀನ್ ಸಿಗ್ನಲ್ ಪಡೆಯುವ ಸಾಧ್ಯತೆಯಿದೆ. ಸಂಪುಟ ವಿಸ್ತರಣೆಗೆ ರಾಗಾ ಅನು ಮತಿ ನೀಡಿದ್ದರೂ, ಯಾರನ್ನು ಸಂಪುಟಕ್ಕೆ ಸೇರಿಸಿ ಕೊಳ್ಳಬೇಕು? ಹಾಲಿ ಸಚಿವರಲ್ಲಿ ಅನೇಕರು ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದು, ಈ ವಿಷಯವನ್ನು ಯಾವ ರೀತಿ ಹ್ಯಾಂಡಲ್ ಮಾಡಬೇಕು ಎನ್ನುವ ಗೊಂದಲ ಗಳಿರುವುದರಿಂದ ರಾಹುಲ್ ಭೇಟಿಗೆ ಡಿಕೆಶಿ ಕಾದು ಕೂತಿದ್ದಾರೆ.
ಹರಿಗೆ ಸಚಿವ ಸ್ಥಾನ?
ಕೆಪಿಸಿಸಿ ಅಧ್ಯಕ್ಷರಾಗಿರುವ ಬಿ.ಕೆ.ಹರಿಪ್ರಸಾದ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಪಕ್ಷದ ಹೈಕಮಾಂಡ್ ಮುಂದೆ ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಬ್ಯಾಟಿಂಗ್ ಮಾಡಲಿದ್ದಾರೆ ಎನ್ನಲಾಗಿದೆ. ಒಬ್ಬರಿಗೆ ಒಂದೇ ಸ್ಥಾನ ಎನ್ನುವ ನಿಯಮವಿದ್ದರೂ, ಈ ಹಿಂದೆ ಡಿ.ಕೆ.ಶಿವ ಕುಮಾರ್ ಕೆಪಿಸಿಸಿ ಅಧ್ಯಕ್ಷತೆ ಜತೆ ಡಿಸಿಎಂ ಹುದ್ದೆ ನಿಭಾಯಿಸಿದ್ದರು. ಆದ್ದರಿಂದ ಬಿ.ಕೆ.ಹರಿಪ್ರಸಾದ್ ಅವರಿಗೂ ಸಚಿವ ಸ್ಥಾನ ನೀಡಬೇಕು. ಇದರಿಂದ ಹಿಂದುಳಿದ ಸಮು ದಾಯಗಳ ಮತಗಳನ್ನು ಸೆಳೆಯಲು ಸಾಧ್ಯ ವಾಗಲಿದೆ ಎನ್ನುವ ವಾದವನ್ನು ಹೈಕಮಾಂಡ್ ಮುಂದೆ ಸಿದ್ದು ಮಂಡಿಸಲಿದ್ದಾರೆಂದು ಮೂಲಗಳು ತಿಳಿಸಿವೆ.
![]()
ಸಂಪುಟ ವಿಸ್ತರಣೆ ಯಾವಾಗ ಎನ್ನುವುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ಆಗ 6 ರಿಂದ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ. ನಾನು ಒಂದು ದಿನ ಕೆಲಸದ ಮೇಲೆ ದೆಹಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ. ನಂತರ ನಾನು ದೆಹಲಿಗೆ ಹೋಗುವೆ.
-ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ