ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿ.ಕೆ.ಶಿವಕುಮಾರ್ ಭರವಸೆ

DK Shivakumar: ಆರೋಗ್ಯ ಕಾರ್ಯಕರ್ತೆಯರ ವೇತನ ಪಾವತಿ ಜವಾಬ್ದಾರಿ ಕುರಿತು ಚರ್ಚಿಸಲು ನಿಮ್ಮಲ್ಲಿ ಐದು ಜನರ ನಿಯೋಗದೊಂದಿಗೆ ಇನ್ನೊಮ್ಮೆ ನನ್ನನ್ನು ಭೇಟಿ ಮಾಡಿ. ನಿಮ್ಮ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಬಗೆಹರಿಸಲಾಗುವುದು’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್.

ಬೆಂಗಳೂರು: ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಗೊಂದಲವನ್ನು ಅಧಿಕಾರಿಗಳ ಜತೆ ಚರ್ಚಿಸಿ, ಬಗೆಹರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಸದಾಶಿವನಗರದ ನಿವಾಸದ ಬಳಿ ಶನಿವಾರ ಆಗಮಿಸಿದ್ದ ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ಅಹವಾಲು ಸ್ವೀಕರಿಸಿ ಮಾತನಾಡಿದರು. ‘ಆರೋಗ್ಯ ಕಾರ್ಯಕರ್ತೆಯರ ವೇತನ ಪಾವತಿ ಜವಾಬ್ದಾರಿ ಕುರಿತು ಚರ್ಚಿಸಲು ನಿಮ್ಮಲ್ಲಿ ಐದು ಜನರ ನಿಯೋಗದೊಂದಿಗೆ ಇನ್ನೊಮ್ಮೆ ನನ್ನನ್ನು ಭೇಟಿ ಮಾಡಿ. ನಿಮ್ಮ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಬಗೆಹರಿಸಲಾಗುವುದು’ ಎಂದು ಹೇಳಿದರು.

ಬಿಬಿಎಂಪಿ ಗುತ್ತಿಗೆದಾರರಿಂದ ನಿಮಗೆ ವೇತನ ಪಾವತಿ ಆಗುವುದಿಲ್ಲ. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯನ್ನು (ಬಿಎಸ್ಡಬ್ಲ್ಯೂಎಂಎನ್) ಬೆಂಗಳೂರು ನಗರದ ಕಸ ನಿರ್ವಹಣೆಗೆಂದು ಸ್ಥಾಪಿಸಲಾಗಿದೆ. ಇದನ್ನು ಗುತ್ತಿಗೆದಾರರು ನಿರ್ವಹಣೆ ಮಾಡುವುದಿಲ್ಲ. ಇದರ ಮುಖ್ಯಸ್ಥರಾಗಿ ಐಎಎಸ್ ಅಧಿಕಾರಿಯೇ ಇರುತ್ತಾರೆ ಎಂದು ಹೇಳಿದರು.‌

ಈ ಸುದ್ದಿಯನ್ನೂ ಓದಿ | DK Shivakumar: ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಬಿಜೆಪಿಯವರು ಭಾವಿಸಿದ್ದಾರೆ: ಡಿ.ಕೆ. ಶಿವಕುಮಾರ್

ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಸಲ್ಲಿಸಿದ್ದ ಮನವಿಯಲ್ಲಿ, ʼ2017 ರಲ್ಲಿ ಎನ್‌ಎಚ್‌ಯುಎಂ ವತಿಯಿಂದ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿಕೊಂಡ ಕಾರಣಕ್ಕೆ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರನ್ನು ಘನತ್ಯಾಜ್ಯ ನಿರ್ವಹಣಾ ವಿಭಾಗಕ್ಕೆ ವರ್ಗವಣೆ ಮಾಡಲಾಯಿತು. ಈಗ ಬಿ.ಎಸ್.ಡಬ್ಲ್ಯೂ.ಎಂ.ಎನ್ ಕಡೆಯಿಂದ ವೇತನ ಪಾವತಿ ಎಂದು ತಿಳಿಸಿರುತ್ತಾರೆ. ಕಳೆದ‌ 30 ವರ್ಷಗಳಿಂದ ಪಾಲಿಕೆಯಲ್ಲಿ‌ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರಿಗೆ ಬಿಬಿಎಂಪಿಯಿಂದಲೇ ವೇತನ‌ ಪಾವತಿ ವ್ಯವಸ್ಥೆ ಮಾಡಬೇಕು ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ.