DK Shivakumar: ವ್ಯವಸಾಯವೂ ಒಂದು ವ್ಯಾಪಾರ ಎಂದು ಎಲ್ಲರೂ ಅರಿಯಬೇಕು: ಡಿ.ಕೆ.ಶಿವಕುಮಾರ್

DK Shivakumar: ಸಿರಿಧಾನ್ಯಗಳಿಗೆ ಇಂದು ಹೆಚ್ಚಿನ ಮೌಲ್ಯ ಬರುತ್ತಿದೆ. ಇದನ್ನು ಬೆಳೆದು ರೈತರು ತಮ್ಮ ಬದುಕನ್ನು ಕಟ್ಟಿಕೊಳ್ಳುವ ರೀತಿಯಲ್ಲಿ ನಾವೆಲ್ಲರೂ ಅವರಿಗೆ ಮಾರ್ಗದರ್ಶನ ನೀಡಬೇಕು. ವ್ಯವಸಾಯವೂ ಒಂದು ವ್ಯಾಪಾರ ಎಂದು ಎಲ್ಲರೂ ಅರಿಯಬೇಕು. ಈ ರೀತಿಯ ಮನೋಭಾವ ಬೆಳೆದಾಗ ಮಾತ್ರ ರೈತರು ಉಳಿಯಲು ಸಾಧ್ಯ. ಕೃಷಿಯನ್ನು ಆಕರ್ಷಣೀಯ ವೃತ್ತಿಯನ್ನಾಗಿಸಬೇಕು. ಸರ್ಕಾರ ಎಂದೆಂದಿಗೂ ರೈತರ ಜತೆ ಇದ್ದೇ ಇರುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

DK Shivakumar
Profile Siddalinga Swamy Jan 23, 2025 8:11 PM

ಬೆಂಗಳೂರು, ಜ.23, 2025: ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ಗುರುವಾರ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ -2025 ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮೈಸೂರು ಫೀಡ್ಸ್ ಪಶು ಆಹಾರ ಕಂಪೆನಿಯೊಂದಿತ್ತು. ನಾನು ಸ್ವಲ್ಪ ದಿನಗಳ ಕಾಲ ಅದರ ಭಾಗವಾಗಿದ್ದೆ. ಅದರ ಮೂಲಕ ಸಿರಿಧಾನ್ಯಗಳನ್ನು ಪಶು ಆಹಾರವಾಗಿ ಬಳಸಲಾಗುತ್ತಿತ್ತು. ನಮ್ಮ ಹೊಲದಲ್ಲಿಯೂ ಹುರುಳಿ ಸೇರಿದಂತೆ ಒಂದಷ್ಟು ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿತ್ತು. ಇದನ್ನು ಹೆಚ್ಚು ದನಗಳು, ಕುದುರೆಗಳಿಗೆ ನೀಡುತ್ತಿದ್ದರು. ಈಗ ಎಲ್ಲಾ ಸಿರಿಧಾನ್ಯಗಳಿಗೆ ಬ್ರಾಂಡ್ ಮೌಲ್ಯ ಬಂದಿದೆ. ದೊಡ್ಡ, ದೊಡ್ಡ ಮಾಲ್‌ಗಳಲ್ಲಿ ಇವು ಸ್ಥಾನ ಪಡೆದಿವೆ ಎಂದರು.

ಜೋಳವನು ತಿನ್ನುವವನು ತೋಳದಂತಾಗುವನು, ನವಣೆಯನ್ನು ತಿನ್ನುವವನು ಕವಣೆಯಂತಾಗುವನು, ರಾಗಿಯನ್ನು ತಿನ್ನುವವನು ನಿರೋಗಿಯಾಗುವನು ಎಂದು ಸರ್ವಜ್ಞ ಅವರು ತಮ್ಮ ವಚನದಲ್ಲಿ ಹೇಳಿದ್ದಾರೆ. ಸಿರಿಧಾನ್ಯಗಳ ಮಹತ್ವವನ್ನು ನಮ್ಮ ಹಿರಿಯರು ಅರಿತಿದ್ದರು. ನಾವು ಅದನ್ನು ಮರೆತಿದ್ದೇವೆ. ಆರೋಗ್ಯಯುತ ಆಹಾರ ಪದ್ದತಿಯನ್ನು ನಾವುಗಳು ಉಳಿಸಿ, ಬೆಳೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಶೋಭಾ ಅವರು ಕೃಷಿ ಸಚಿವರಾಗಿರುವುದು ನಮ್ಮ ಭಾಗ್ಯ

ಕೃಷ್ಣ ಬೈರೇಗೌಡರು ಕೃಷಿ ಸಚಿವರಾಗಿದ್ದಾಗ ಸಾವಯುವ ಕೃಷಿ ಮತ್ತು ಸಿರಿಧಾನ್ಯಕ್ಕೆ ಮಹತ್ವ ತಂದುಕೊಟ್ಟಿದ್ದರು. ಈಗ ಸಚಿವರಾದ ಚೆಲುವರಾಯಸ್ವಾಮಿ ಅವರು ಹೊಸ ರೂಪುರೇಷೆ ನೀಡುತ್ತಿದ್ದಾರೆ. ಕೃಷಿ ಇಲಾಖೆಗೆ ಹೊಸ ರೂಪವನ್ನು ನೀಡುತ್ತಿದ್ದಾರೆ ಎಂದು ಅವರು ಹೇಳಿದರು.

ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರದಲ್ಲಿ ಕೃಷಿ ಸಚಿವರಾಗುವ ಅವಕಾಶ ಸಿಕ್ಕಿದ್ದು ನಮ್ಮ ಭಾಗ್ಯ. ಅವರು ನಮ್ಮ ರಾಜ್ಯದ ಕೃಷಿ ಇಲಾಖೆಗೆ ಹೆಚ್ಚಿ ಒತ್ತು ನೀಡುತ್ತಾರೆ ಎಂದು ನಂಬಿದ್ದೇನೆ. ಕರ್ನಾಟಕ ಹಾಗೂ ಬೆಂಗಳೂರು ಕೇವಲ ಐಟಿ, ಬಿಟಿಗೆ ಮಾತ್ರ ಸೀಮಿತವಾಗಿಲ್ಲ ಕೃಷಿ ಉತ್ಪನ್ನಗಳು, ಹಾಲಿನ ಉತ್ಪಾದನೆ ಸೇರಿದಂತೆ ಎಲ್ಲಾ ರಂಗದಲ್ಲಿಯೂ ನಮ್ಮ ರಾಜ್ಯ ಮೊದಲ ಸಾಲಿನಲ್ಲಿ ನಿಲ್ಲುತ್ತದೆ ಎಂದು ತಿಳಿಸಿದರು.

ಸಿರಿಧಾನ್ಯಗಳಿಗೆ ಇಂದು ಹೆಚ್ಚಿನ ಮೌಲ್ಯ ಬರುತ್ತಿದೆ

ಸಿರಿಧಾನ್ಯಗಳಿಗೆ ಇಂದು ಹೆಚ್ಚಿನ ಮೌಲ್ಯ ಬರುತ್ತಿದೆ. ಇದನ್ನು ಬೆಳೆದು ರೈತರು ತಮ್ಮ ಬದುಕನ್ನು ಕಟ್ಟಿಕೊಳ್ಳುವ ರೀತಿಯಲ್ಲಿ ನಾವೆಲ್ಲರೂ ಅವರಿಗೆ ಮಾರ್ಗದರ್ಶನ ನೀಡಬೇಕು. ವ್ಯವಸಾಯವೂ ಒಂದು ವ್ಯಾಪಾರ ಎಂದು ಎಲ್ಲರೂ ಅರಿಯಬೇಕು. ಈ ರೀತಿಯ ಮನೋಭಾವ ಬೆಳೆದಾಗ ಮಾತ್ರ ರೈತರು ಉಳಿಯಲು ಸಾಧ್ಯ. ಕೃಷಿಯನ್ನು ಆಕರ್ಷಣೀಯ ವೃತ್ತಿಯನ್ನಾಗಿಸಬೇಕು. ಸರ್ಕಾರ ಎಂದೆಂದಿಗೂ ರೈತರ ಜತೆ ಇದ್ದೇ ಇರುತ್ತದೆ ಎಂದು ಅವರು ಭರವಸೆ ನೀಡಿದರು.

ರೈತರು ಸರ್ಕಾರದ ಸೌಲಭ್ಯಗಳ ಬೆಲೆ ತಿಳಿಯಬೇಕು

ಸರ್ಕಾರದ ಕಾರ್ಯಕ್ರಮಗಳ ಬೆಲೆಯನ್ನು ಎಲ್ಲರೂ ಅರಿಯಬೇಕು. ರೈತರ ಪಂಪ್‌ಸೆಟ್‌ಗೆ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತಿದೆ. ಜತೆಗೆ ಸಹಾಯಧನದೊಟ್ಟಿಗೆ ಅನೇಕ ಸೌಲಭ್ಯಗಳನ್ನು ರೈತರಿಗೆ ನೀಡಲಾಗುತ್ತಿದೆ. ಈ ಉಚಿತ ವಿದ್ಯುತ್ತಿನ ಬೆಲೆಯನ್ನು ರೈತರು ಅರಿಯಬೇಕು. ಈ ಹಿಂದೆ ನೀರಿನ ಕರವನ್ನು ರೈತರಿಗೆ ಪೈಸೆಗಳ ಲೆಕ್ಕದಲ್ಲಿ ಹಾಕಲಾಗುತ್ತಿತ್ತು. ಈಗ ಈ ಪದ್ದತಿಯನ್ನೂ ಕೈ ಬಿಡಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Bengaluru International Airport: ಬೆಂಗಳೂರು ವಿಮಾನ ನಿಲ್ದಾಣಕ್ಕೆ ‘ಎಸಿಐ’ನಿಂದ ಪ್ರತಿಷ್ಠಿತ ಮಾನ್ಯತೆ, ಇದನ್ನು ಪಡೆದ ದೇಶದ ಮೊದಲ ಏರ್‌ಪೋರ್ಟ್‌

ಮಹಾರಾಷ್ಟ್ರ ಮತ್ತು ಪಂಜಾಬ್ ರಾಜ್ಯಗಳು ನೀರಿನ ಬಳಕೆ ಶುಲ್ಕದ ಮರು ಅನುಷ್ಠಾನದ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆದಿವೆ. ಈ ಬಗ್ಗೆ ಕಾಯ್ದೆಯನ್ನು ತರಲು ಮುಂದಾಗಿವೆ. ಹೀಗೆ ಮಾಡಿದಾಗ ನೀರಿನ ಬೆಲೆ ಎಲ್ಲರಿಗೂ ಅರ್ಥವಾಗುತ್ತದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರದ ರೈತರು ಅತ್ಯಂತ ಕಡಿಮೆ ನೀರಿನಲ್ಲಿ ಉತ್ಕೃಷ್ಟವಾದ ಬೆಳೆ ಬೆಳೆಯುತ್ತಿದ್ದಾರೆ. ಈ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆಯನ್ನು ನಾನು ಕಂಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

urea
2:13 PM January 22, 2025

ಕೃಷಿ ಸಬ್ಸಿಡಿಗೆ ರೈತರು ಬಿಟ್ಟು ಉಳಿದವರೆಲ್ಲ ಫಲಾನುಭವಿಗಳು!

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು