ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ ಆರ್‌ವಿ ರಸ್ತೆ-ಸಿಲ್ಕ್ ಬೋರ್ಡ್ ನಡುವಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ನಲ್ಲಿ ವಾಹನ ಸಂಚಾರಕ್ಕೆ ಡಿಸಿಎಂ ಡಿಕೆಶಿ ಚಾಲನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಕೈಗೊಂಡಿರುವ ಬೆಂಗಳೂರಿನ ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಶುಕ್ರವಾರ ಚಾಲನೆ ನೀಡಿದ್ದಾರೆ. ಆ‌ರ್.ವಿ. ರಸ್ತೆ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ರೈಲು ಸಹ ರಸ್ತೆ ಮೇಲ್ಸೇತುವೆ ಸಂಚಾರಕ್ಕೆ ಹಸಿರು ನಿಶಾನೆ, ಬನಶಂಕರಿ ಜಂಕ್ಷನ್‌ನಲ್ಲಿ ವಾಕ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಸೇರಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಡಿಸಿಎಂ ಭಾಗಿಯಾಗಿದ್ದರು.

ಬೆಂಗಳೂರಿನ ಆ‌ರ್.ವಿ. ರಸ್ತೆ-ಸಿಲ್ಕ್ ಬೋರ್ಡ್ ನಡುವಿನ ಮೇಲ್ಸೇತುವೆ ಸಂಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಸಿರು ನಿಶಾನೆ.
1/4

ಬೆಂಗಳೂರಿನಲ್ಲಿಂದು ಆರ್‌.ವಿ. ರಸ್ತೆ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ನಲ್ಲಿ (Bengaluru's double-decker flyover) ವಾಹನ ಸಂಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶುಕ್ರವಾರ ಚಾಲನೆ ನೀಡಿದರು.

2/4

ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನ ಟ್ರಾಫಿಕ್‌ ಸಮಸ್ಯೆಗೆ ಕಡಿವಾಣ ಹಾಕಲು ಹಾಗೂ ಬೆಂಗಳೂರು ದಕ್ಷಿಣ ಭಾಗದ ಪ್ರಮುಖ ಪ್ರದೇಶಗಳಿಗೆ ಓಡಾಡಲು ಈ ಫ್ಲೈಓವರ್‌ ಅನುಕೂಲವಾಗಲಿದೆ. ಇದರಿಂದ ಐಟಿ ಹಬ್‌ಗೆ ಪ್ರತಿನಿತ್ಯ ಓಡಾಡುವ ಲಕ್ಷಾಂತರ ವಾಹನ ಸವಾರರ ಪ್ರಯಾಣ ಸುಗಮವಾಗಿದ್ದು, ಈ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

3/4

ನಂತರ ಬನಶಂಕರಿ ಜಂಕ್ಷನ್‌ನಲ್ಲಿ ಪಾದಚಾರಿಗಳ ಸೈವಾಕ್ ನಿರ್ಮಾಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪಾದಚಾರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ಅನುಕೂಲವಾಗಲಿ ಎಂದು ಈ ಸ್ಕೈವಾಕ್‌ ನಿರ್ಮಿಸಲಾಗುತ್ತಿದೆ.

4/4

ಬಳಿಕ ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣ ಹಾಗೂ ಬಹುಮಹಡಿ ಪಾರ್ಕಿಂಗ್‌ ಕಟ್ಟಡವನ್ನು ಡಿಸಿಎಂ ಲೋಕಾರ್ಪಣೆ ಮಾಡಿದರು.