Greater Bengaluru: ಆ. 3ರಿಂದ ಗ್ರೇಟರ್ ಬೆಂಗಳೂರು ವಾರ್ಡ್‌ಗಳ ಮರುವಿಂಗಡಣಾ ಕಾರ್ಯಾರಂಭ; ಚುನಾವಣೆ ಯಾವಾಗ?
DK Shivakumar: ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿಯಲ್ಲಿ ಬರುವ ವಾರ್ಡ್‌ಗಳ ಮರುರಚನೆ, ಗಡಿ ಗುರುತಿಸುವಿಕೆ, ತಕರಾರು ಅರ್ಜಿಗಳ ಸ್ವೀಕಾರಗಳ ಅಂತಿಮ ನಿರ್ಣಯಕ್ಕೆ ವೇಗ ನೀಡಲಾಗಿದೆ. ಈ ಪ್ರಕ್ರಿಯೆ ಅಂತಿಮಗೊಳಿಸಲು ಸೆಪ್ಟೆಂಬರ್ 1ರವರೆಗೆ ಗಡುವು ಕೊಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.


ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರದ್ದು ಮಾಡಿ ಗ್ರೇಟರ್ ಬೆಂಗಳೂರು ಕಾಯ್ದೆ 2024ರಡಿ (Greater Bengaluru) 5 ನಗರ ಪಾಲಿಕೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿ, ಇತ್ತೀಚೆಗೆ ಅಧಿಸೂಚನೆ ಹೊರಡಿಸಿತ್ತು. ಇದೀಗ ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಹತ್ವದ ಮಾಹಿತಿ ನೀಡಿದ್ದು, ಆಗಸ್ಟ್ 3ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವಾರ್ಡ್‌ಗಳ ಮರುವಿಂಗಡಣಾ ಆಯೋಗದ ಕಾರ್ಯಾರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿಯಲ್ಲಿ ಬರುವ ವಾರ್ಡ್‌ಗಳ ಮರುರಚನೆ, ಗಡಿ ಗುರುತಿಸುವಿಕೆ, ತಕರಾರು ಅರ್ಜಿಗಳ ಸ್ವೀಕಾರಗಳ ಅಂತಿಮ ನಿರ್ಣಯಕ್ಕೆ ವೇಗ ನೀಡಲಾಗಿದೆ. ಈ ಪ್ರಕ್ರಿಯೆ ಅಂತಿಮಗೊಳಿಸಲು ಸೆಪ್ಟೆಂಬರ್ 1ರವರೆಗೆ ಗಡುವು ಕೊಟ್ಟಿದ್ದು, ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ನ್ಯಾಯಾಲಯಕ್ಕೆ ವರದಿ ಸಲ್ಲಿಕೆಯಾಗಲಿದೆ. ಆ ಬಳಿಕವಷ್ಟೇ ಚುನಾವಣಾ ದಿನಾಂಕ ನಿಗದಿಯಾಗಲಿದೆ ಎಂದು ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ - ಇಲ್ಲಿ ಸರ್ವಾಂಗೀಣ ಅಭಿವೃದ್ಧಿ ಸಾಕಾರ
— DK Shivakumar (@DKShivakumar) July 30, 2025
• ಆಗಸ್ಟ್ 3ರಿಂದ ಜಿಬಿಎ ವಾರ್ಡ್‌ಗಳ ಮರುವಿಂಗಡಣಾ ಆಯೋಗದ ಕಾರ್ಯಾರಂಭ
• ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿಯಲ್ಲಿ ಬರುವ ವಾರ್ಡ್‌ಗಳ ಮರುರಚನೆ, ಗಡಿ ಗುರುತಿಸುವಿಕೆ, ತಕರಾರು ಅರ್ಜಿಗಳ ಸ್ವೀಕಾರಗಳ ಅಂತಿಮ ನಿರ್ಣಯಕ್ಕೆ ವೇಗ
• ಈ ಪ್ರಕ್ರಿಯೆ… pic.twitter.com/43v64L481Y
ಅ. 22 ರಿಂದ ಬೃಹತ್ ಇ ಖಾತಾ ಜಾಗೃತಿ ಅಭಿಯಾನ
'ಬೆಂಗಳೂರಲ್ಲಿ 24 ಲಕ್ಷ 'ಎ' ಮತ್ತು 'ಬಿ' ಖಾತೆಗಳಿವೆ. ಈಗಾಗಲೇ 6.5 ಲಕ್ಷ ಇ- ಖಾತೆಗಳನ್ನು ಜನರು ತೆಗೆದುಕೊಂಡಿದ್ದಾರೆ. ಜನರಿಗೆ ಆನ್ ಲೈನ್ ನಲ್ಲಿ ಆಸ್ತಿ ವಿವರಗಳು ನಿಖರವಾಗಿ ದೊರೆಯಬೇಕು. ಮುಂದಿನ ದಿನಗಳಲ್ಲಿ ತೊಂದರೆಯಾಗಬಾರದು ಎಂಬುದು ನಮ್ಮ ಆಲೋಚನೆ. ಈ ಕಾರಣಕ್ಕೆ ಅಕ್ಟೋಬರ್ 22 ರಿಂದ ನವೆಂಬರ್ 1 ರವರೆಗೆ ಬೃಹತ್ ಜಾಗೃತಿ ಅಭಿಯಾನದ ಆಲೋಚನೆ ಮಾಡಲಾಗಿದೆ. ಈ ಅಭಿಯಾನ ಯಶಸ್ವಿಗೊಳಿಸಲು ಶಿಕ್ಷಕರು, ಬೆಸ್ಕಾಂ ಬಿಲ್ ಕಲೆಕ್ಟರ್ ಗಳು, ಪಾಲಿಕೆಯ ನೌಕರರ ಭಾಗವಹಿಸುವಿಕೆ ಬಗ್ಗೆ ಚರ್ಚಿಸಲು ಸೂಚನೆ ನೀಡಿದ್ದೇನೆ. ಈ ಬಗ್ಗೆ ಮನೆ ಮನೆಗೆ ತೆರಳಿ ತಿಳುವಳಿಕೆ ನೀಡಲಾಗುವುದು. ಬೆಂಗಳೂರು ನಗರದ ಸಾರ್ವಜನಿಕರು, ರಾಜಕೀಯ ಪಕ್ಷಗಳ ಕಾರ್ಯಕರ್ತರು ಈ ಅಭಿಯಾನದ ಪ್ರಚಾರದಲ್ಲಿ ಭಾಗವಹಿಸಬಹುದು. ಆದರೆ ಇವರಿಗೆ ಜವಾಬ್ದಾರಿ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ವಿಧಾನಸೌಧದಲ್ಲಿ ಮಂಗಳವಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕುರಿತು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ಆಗಸ್ಟ್ 15 ರಿಂದ 'ಬಿ' ಖಾತೆಯಿಂದ 'ಎ' ಖಾತೆ ಪಡೆಯಲು ಅನುಸರಿಸಬೇಕಾದ ಮಾನದಂಡಗಳನ್ನು ಬಿಡುಗಡೆ ಮಾಡಲಾಗುವುದು. ನಗರದಲ್ಲಿ ಲಕ್ಷಾಂತರ ಬಿ ಖಾತಾಗಳಿದ್ದು, ಅವುಗಳ ಪೈಕಿ ಯಾರು ಎ ಖಾತಾ ಪಡೆಯಲು ಅರ್ಹರಿದ್ದಾರೆ ಎಂಬುದನ್ನು ಮಾನದಂಡಗಳಲ್ಲಿ ಸೂಚಿಸಲಾಗುತ್ತದೆ. ನಂತರ ಯಾರಿಗೆ ಅರ್ಜಿ ಹಾಕಲು ಅರ್ಹತೆಯಿದೆ, ಯಾವ ರೀತಿ ಅರ್ಜಿ ಹಾಕಬೇಕು ಎನ್ನುವ ವಿವರಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | DK Suresh: ಪ್ರಾಯೋಗಿಕ ಪರೀಕ್ಷೆ ನಂತರ ಪರಿಸರ ಸ್ನೇಹಿ ಹಾಲಿನ ಪ್ಯಾಕೆಟ್ ಮಾರುಕಟ್ಟೆಗೆ- ಡಿ.ಕೆ. ಸುರೇಶ್
ಆಗಸ್ಟ್ 15 ರೊಳಗೆ ಹೆಬ್ಬಾಳ ಜಂಕ್ಷನ್ ಉದ್ಘಾಟನೆ
ಹೆಬ್ಬಾಳ ಮೇಲ್ಸೆತುವೆ ಜಂಕ್ಷನ್, ಶಿವಾನಂದ ಸರ್ಕಲ್ ಜಂಕ್ಷನ್ ಅಭಿವೃದ್ಧಿ ಹಾಗೂ ಗಾಂಧಿ ಬಜಾರ್ ಬಳಿಯ ಬಹುಮಹಡಿ ಪಾರ್ಕಿಂಗ್ ಕಟ್ಟಡವನ್ನು ಆಗಸ್ಟ್ 15ರ ಒಳಗಾಗಿ ಉದ್ಘಾಟನೆ ಮಾಡಬೇಕು ಎಂಬುದು ನಮ್ಮ ಆಲೋಚನೆ. ಕೆ.ಆರ್.ಪುರಂ ಕಡೆಯಿಂದ ಬರುವ ಹೆಬ್ಬಾಳ ಮೇಲ್ಸೆತುವೆ ಕಾಮಗಾರಿಯನ್ನು ಶೀಘ್ರದಲ್ಲೇ ಮುಗಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕು ಎಂಬುದು ನಮ್ಮ ಆಲೋಚನೆಯಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.