ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕಸ್ತೂರಿ ಅಧಿಸೂಚನೆ ಅಂತಿಮಗೊಳಿಸಬೇಡಿ: ಕೇಂದ್ರ ಸಚಿವ ಭೂಪೇಂದ್ರಗೆ ಡಿಕೆ ಮನವಿ

ರಾಜ್ಯ ಸರಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ವರದಿ ಸಲ್ಲಿಕೆಯಾಗಿ, ಒಂದು ವರ್ಷದ ಅವಧಿಯಲ್ಲಿ ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಇದನ್ನು ಅಂತಿಮಗೊಳಿಸಬಾರದು ಮತ್ತು ರಾಜ್ಯ ಸರಕಾರದ ಬಳಿ ಚರ್ಚಿಸಿದ ಬಳಿಕವೇ ಮುಂದಿನ ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ದೆಹಲಿ/ಬೆಂಗಳೂರು: ಭಾರೀ ವಿವಾದಕ್ಕೆ ಕಾರಣವಾಗಿರುವ, ಮಲೆನಾಡು, ಕರಾವಳಿಗಳ ಜನರ ಆತಂಕಕ್ಕೆ ಎಡೆಮಾಡಿರುವ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸಬೇಡಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್(D K Shivakumar) ಮನವಿ ಮಾಡಿದ್ದಾರೆ.

ಕೇಂದ್ರ ಪರಿಸರ, ಅರಣ್ಯ ಸಚಿವ ಭೂಪೇಂದ್ರ ಯಾದವ್(Bhupendra Yadav) ಅವರನ್ನು ಗುರುವಾರ ಭೇಟಿ ಮಾಡಿದ ಶಿವಕುಮಾರ್, ಕಸ್ತೂರಿರಂಗನ್ ವರದಿ(Kasturi Rangan Report)ಯ ಆಧಾರದ ಮೇಲೆ ಪಶ್ಚಿಮ ಘಟ್ಟ(Western Ghats)ಗಳ ಪರಿಸರ ಸೂಕ್ಷ್ಮಪ್ರದೇಶ ಘೋಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ಅಂತಿಮ ಗೊಳಿಸದಂತೆ ಕೋರಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರಿಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: Kasturirangan Report: ಕಸ್ತೂರಿ ರಂಗನ್ ವರದಿ ವಿರುದ್ಧ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

ರಾಜ್ಯ ಸರಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ವರದಿ ಸಲ್ಲಿಕೆಯಾಗಿ, ಒಂದು ವರ್ಷದ ಅವಧಿಯಲ್ಲಿ ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಇದನ್ನು ಅಂತಿಮಗೊಳಿಸಬಾರದು ಮತ್ತು ರಾಜ್ಯ ಸರಕಾರದ ಬಳಿ ಚರ್ಚಿಸಿದ ಬಳಿಕವೇ ಮುಂದಿನ ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಇನ್ನುಳಿದಂತೆ ಕರ್ನಾಟಕದ ಪ್ರಮುಖ ಯೋಜನೆಗಳಾದ ಶರಾವತಿ ಪಂಪ್ಡ್ ಸ್ಟೋರೇಜ್ ಹಾಗೂ ಮೇಕೆದಾಟು(Mekedaatu) ಯೋಜನೆಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಅನುಮೋದನೆ ನೀಡಬೇಕು.

ಬೆಳಗಾವಿಯ ಎಕೊ ಕೇನ್ ಶುಗರ್ ಅಂಡ್ ಎನರ್ಜಿ ಲಿ. ಸಕ್ಕರೆ ಕಾರ್ಖಾನೆಯು 2016ಕ್ಕೂ ಮೊದಲು ಪ್ರಾರಂಭವಾಗಿರುವುದರಿಂದ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬರುವುದಿಲ್ಲ. ಈ ಸಕ್ಕರೆ ಕಾರ್ಖಾನೆಯಲ್ಲಿ ಸುಮಾರು 500 ಕೆಲಸಗಾರರು ಕಾರ್ಯನಿರ್ವಹಿಸುತ್ತಿದ್ದು, ಸುಮಾರು 5000 ಕುಟುಂಬಗಳು ಈ ಕಾರ್ಖಾನೆಯನ್ನು ಅವಲಂಬಿಸಿವೆ. ಆದ್ದರಿಂದ ಈ ಸಕ್ಕರೆ ಕಾರ್ಖಾನೆಯನ್ನು ಪರಿಸರ ಸೂಕ್ಷ್ಮ ವಲಯದಿಂದ ಕೈಬಿಡಬೇಕು ಎಂದು ಮನವಿ ಮಾಡಿದರು.

ಮೇಕೆದಾಟು ತಾಂತ್ರಿಕ ಸಮೀಕ್ಷೆಗೆ ಒಪ್ಪಿಗೆ ಕೊಡಿ: ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಭೂ-ತಾಂತ್ರಿಕ ಸಮೀಕ್ಷೆಗಾಗಿ ಕಾವೇರಿ ವನ್ಯಜೀವಿ ಅಭಯಾರಣ್ಯ ದಲ್ಲಿ ಒಟ್ಟು 0.0000352 ಹೆಕ್ಟೇರ್ ಪ್ರದೇಶದಲ್ಲಿ 20 ಬೋರ್ ಹೋಲ್ ಗಳನ್ನು ಕೊರೆಯಲು ಅನುಮತಿ ಕೋರುವ ಈ ಪ್ರಸ್ತಾಪವನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಪರಿಶೀಲನೆಗಾಗಿ 1 ಜುಲೈ 2026ರಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ ಸಲ್ಲಿಸಲಾಗಿತ್ತು.

ಇತ್ತೀಚೆಗೆ, ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಂದೆ ಬಾಕಿ ಇರುವ ವಿವಿಧ ಅರ್ಜಿಗಳ ಸ್ಥಿತಿಗತಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಅಗತ್ಯ ದಾಖಲೆ ಕೋರಿದ್ದು, ಅದನ್ನು ಶೀಘ್ರದ ಒದಗಿಸಲಾಗುವುದು. ಆದರೆ, ಈ ಪ್ರಸ್ತಾಪವು ಕೇವಲ ಸಮೀಕ್ಷೆ ಮತ್ತು ತನಿಖಾ ಚಟುವಟಿಕೆಗಳಿಗೆ ಮಾತ್ರ ಸಂಬಂಧಿಸಿದ್ದು, ಪ್ರಸ್ತುತ ಯಾವುದೇ ಸಂರಕ್ಷಿತ ಪ್ರದೇಶದ ಭೂಮಿಯನ್ನು ಯೋಜನೆಗೆ ಬಳಸಿಕೊಳ್ಳಲು ಕೋರುತ್ತಿಲ್ಲ ಎಂದು ವಿವರಿಸಿದ್ದಾರೆ.