ಎಸ್ಐಟಿಯಿಂದ ಇನ್ನಷ್ಟು ಹಗರಣ ಬೆಳಕಿಗೆ ಬರುವ ಭೀತಿ: ಸ್ಟಿಂಗ್ ಎಸ್ʼಐಟಿ ತನಿಖೆಗೆ ಸರಕಾರಕ್ಕೆ ಧೈರ್ಯವಿಲ್ಲ?
ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ‘ಸ್ಟಿಂಗ್’ ಆಪರೇಷನ್ ಎಚ್ಚರಿಕೆಯ ಬಳಿಕ ಶುರು ವಾಗಿರುವ ಈ ಗೊಂದಲ ಇದೀಗ ತೀವ್ರವಾಗಿದೆ. ಎಚ್.ಡಿ.ಕುಮಾರಸ್ವಾಮಿ ಎಲ್ಲದ್ದಕ್ಕೂ ಶಿವಕು ಮಾರ್ ಅವರೇ ಕಾರಣ ಎಂದು ನೇರವಾಗಿ ಆರೋಪಿಸಿದ್ದಾರೆ. ಇದರ ಮುಂದು ವರಿದ ಭಾಗವಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಗಂಭೀರ’ ಚರ್ಚೆ ನಡೆದಿದ್ದು, ಪ್ರಕರಣವನ್ನು ಸಿಐಡಿಗೆ ವಹಿಸಬೇಕೇ ಅಥವಾ ಎಸ್ಐಟಿ ಮೂಲಕ ತನಿಖೆ ನಡೆಸಬೇಕೆ ಎನ್ನುವ ಬಗ್ಗೆ ಚರ್ಚೆ ನಡೆದಿದ್ದು, ದೊಡ್ಡ ತನಿಖೆ ನಡೆಸಲು ಬೆದರಿದ ಘಟನೆ ನಡೆದಿದೆ.
-
ಸಿದ್ದು ಪ್ರಕರಣದ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ
ಮುಂದಿನ ತನಿಖೆ ನಿರ್ಧರಿಸಲು ಮುಖ್ಯಮಂತ್ರಿಗೆ ಅಧಿಕಾರ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಒಂದೆಡೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪೊಲೀಸ್ ಆಯುಕ್ತರ ಕಚೇರಿ ಎದುರು ಗುರುವಾರ ಧರಣಿ ನಡೆಸಿ, ಜೆಡಿಎಸ್ ಕಾರ್ಯಕರ್ತರನ್ನು ಹಠಾತ್ ಬಂಧಿಸಿ ವಿಚಾರಣೆ ನಡೆಸುವುದನ್ನು ವಿರೋಧಿಸಿದ್ದಾರೆ.
ತಾಕತ್ತಿದ್ದರೆ ತನ್ನನ್ನು ಬಂಧಿಸಿ ಎಂದು ನೇರವಾಗಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಇನ್ನೊಂದೆಡೆ ಈ ಪ್ರಕರಣವನ್ನು ಯಾವ ರೀತಿ ತನಿಖೆ ನಡೆಸಬೇಕೆಂಬ ಬಗ್ಗೆ ಸಂಪುಟದಲ್ಲಿ ಚರ್ಚಿಸಿ, ‘ಮುಖ್ಯಮಂತ್ರಿ’ಗಳ ವಿವೇಚನೆಗೆ ಬಿಡಲಾಗಿದೆ.
ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ‘ಸ್ಟಿಂಗ್’ ಆಪರೇಷನ್ ಎಚ್ಚರಿಕೆಯ ಬಳಿಕ ಶುರು ವಾಗಿರುವ ಈ ಗೊಂದಲ ಇದೀಗ ತೀವ್ರವಾಗಿದೆ. ಎಚ್.ಡಿ.ಕುಮಾರಸ್ವಾಮಿ ಎಲ್ಲದ್ದಕ್ಕೂ ಶಿವಕು ಮಾರ್ ಅವರೇ ಕಾರಣ ಎಂದು ನೇರವಾಗಿ ಆರೋಪಿಸಿದ್ದಾರೆ. ಇದರ ಮುಂದುವರಿದ ಭಾಗವಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಗಂಭೀರ’ ಚರ್ಚೆ ನಡೆದಿದ್ದು, ಪ್ರಕರಣವನ್ನು ಸಿಐಡಿಗೆ ವಹಿಸಬೇಕೇ ಅಥವಾ ಎಸ್ಐಟಿ ಮೂಲಕ ತನಿಖೆ ನಡೆಸಬೇಕೆ ಎನ್ನುವ ಬಗ್ಗೆ ಚರ್ಚೆ ನಡೆದಿದ್ದು, ದೊಡ್ಡ ತನಿಖೆ ನಡೆಸಲು ಬೆದರಿದ ಘಟನೆ ನಡೆದಿದೆ.
ಇದನ್ನೂ ಓದಿ: Karnataka Sting Operation: ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ವಿಡಿಯೊ ಪ್ರಸಾರ ಮಾಡದಂತೆ ಕೋರ್ಟ್ನಿಂದ ಪ್ರತಿಬಂಧಕಾದೇಶ
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸಕ್ತ ತನಿಖೆ ಯನ್ನೇ ಮುಂದುವರಿಸಲು ನಿರ್ಧರಿಸಿದೆ. ಅಗತ್ಯವಾದಷ್ಟು ದಾಖಲೆಗಳನ್ನು ಪತ್ತೆ ಹಚ್ಚಿ ಸಂಗ್ರಹಿಸಿ ರುವ ಸರಕಾರ, ದಾಖಲೆಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ಹೀಗಿದ್ದರೂ, ಸಭೆಯಲ್ಲಿ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂಪುಟ ಸಹೋದ್ಯೋಗಿಗಳ ಅಭಿಪ್ರಾಯ ಪಡೆದಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಪ್ರಕರಣವು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ವ್ಯಾಪ್ತಿಯಲ್ಲಿ ತನಿಖೆಯ ಲ್ಲಿದೆ. ಹೀಗಾಗಿ, ತನಿಖೆ ಸಿಸಿಬಿಯ ಮುಂದುವರಿಸಬೇಕೇ ಅಥವಾ ಹೆಚ್ಚಿನ ತನಿಖೆಗಾಗಿ ಸಿಐಡಿ ಅಥವಾ ಎಸ್ಐಟಿಗೆ ವರ್ಗಾಯಿಸ ಬೇಕೇ ಎಂಬ ನಿರ್ಧಾರವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿದೆ ಎಂದು ತಿಳಿದುಬಂದಿದೆ.
ಹೀಗಿದ್ದರೂ ಎಸ್ಐಟಿ ತನಿಖೆಗೆ ಒಳಪಟ್ಟರೆ ಮತ್ತಷ್ಟು ಹಗರಣಗಳು ಹೊರಬೀಳಲಿವೆ ಎಂಬ ಮಾತುಗಳು ಆಡಳಿತ ಪಕ್ಷದ ಶಾಸಕರಲ್ಲೇ ಕೇಳಿಬಂದಿರುವ ವಿಚಾರವೂ ಕೂಡ ಸಭೆಯಲ್ಲಿ ಚರ್ಚೆಯಾಗಿದೆ ಎನ್ನಲಾಗಿದೆ. ಇದರಲ್ಲಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಕೊಂಡಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಒಂದು ಗಂಟೆಗೂ ಹೆಚ್ಚು ಕಾಲ ತಾರಕಕ್ಕೇರಿದ ಚರ್ಚೆ ನಡೆದಿದೆ. ಪ್ರಕರಣದ ಮುಂದಿನ ಕ್ರಮದ ನಿರ್ಧಾರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಿಡಲಾಗಿದ್ದು, ಸದ್ಯಕ್ಕೆ ಪ್ರತ್ಯೇಕ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸದಿರಲು ಸರ್ಕಾರ ನಿರ್ಧರಿಸಿದೆ.
ಸಭೆಯ ಬಳಿಕ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಈಗಾಗಲೇ ನಡೆಯುತ್ತಿರುವ ತನಿಖೆ ಮುಂದು ವರಿಯಲಿದ್ದು, ಸಂಗ್ರಹಿಸಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲಲ್ಲಿ ಕುಳಿತು ಕೇಂದ್ರ ಸಚಿವ ಕುಮಾರಸ್ವಾಮಿ ಧರಣಿ
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ಪ್ರಕರಣದ ಹಿಂದಿರುವ ಪ್ರಮುಖ ವ್ಯಕ್ತಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನಗರ ಪೊಲೀಸ್ ಆಯುಕ್ತರ ಕಚೇರಿ ಮುಂದೆ ಧರಣಿ ನಡೆಸಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದರು. ನಿಷ್ಪಕ್ಷಪಾತ ತನಿಖೆ ನಡೆಸುವ ಭರವಸೆ ನೀಡಿ ಧರಣಿಯನ್ನು ಕೈಬಿಡುವಂತೆ ಮನವಿ ಮಾಡಿದರು. ಆದರೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸುವುದು ಮತ್ತು ತನಿಖೆಯ ಪಾರದರ್ಶಕತೆ ಖಚಿತಪಡಿಸುವುದು ಅಗತ್ಯ ಎಂದು ಕುಮಾರಸ್ವಾಮಿ ಪಟ್ಟು ಹಿಡಿದರು.
![]()
ಸರಕಾರಕ್ಕೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ. ಆದರೆ ಪಕ್ಷದ ಕಾರ್ಯಕರ್ತರಿಗೆ ತೊಂದರೆ ನೀಡಬೇಡಿ. ಸಿಎಂ ಮತ್ತು ಒಬ್ಬ ಕೆಟ್ಟ ಹಾಗೂ ನಕಲಿ ಪತ್ರಕರ್ತ ಹೂಡಿದ ಸಂಚಿಗೆ ಸಿದ್ದ ರಾಮಯ್ಯ ಬಲಿಯಾಗಿದ್ದಾರೆ. ಸಿದ್ದು ಚಾರಿತ್ರ್ಯ ಹರಣಕ್ಕೆ ಮಾಡಲು ರಾಜಕೀಯ ಸಂಚು ರೂಪಿಸಿದ ಶಿವಕುಮಾರ್ ಸಿಂಡಿಕೇಟಿನ ಎಲ್ಲರನ್ನು ಬಂಧಿಸಬೇಕು.
-ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ