ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bangalore News: ಅಂಗಾಂಗ ದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತೆ

ಅಂಗಾಂಗ ದಾನ ಮಾನವೀಯತೆಯ ಪರಮೋಚ್ಛ ಕಾರ್ಯಗಳಲ್ಲಿ ಒಂದು. ನಾವೆಲ್ಲರೂ ಈ ಶ್ರೇಷ್ಟ ಕಾರ್ಯವನ್ನು ಬೆಂಬಲಿಸಬೇಕು” ಎಂದ ಅವರು ಜೀವ ರಕ್ಷಕ ಅಂಗಾಂಗ ಕಸಿಗೆ ಅನುವು ಮಾಡಿಕೊಡುವ ಕರ್ನಾಟಕ ಅಂಗ ಮತ್ತು ಅಂಗಾಂಶಗಳ ಕಸಿ ಸಂಸ್ಥೆ (SOTTO Karnataka)ಯ ಪಾತ್ರ ಹಾಗೂ ವೈದ್ಯರು, ದಾನಿಗಳ ತ್ಯಾಗವನ್ನು ಶ್ಲಾಘಿಸಿದರು. ಕಿಡ್ನಿ ಸಂಬಂಧಿ ಕಾಯಿಲೆಗಳ ಕುರಿತು ಜಾಗೃತಿ ಮೂಡಿಸುವುದು

ಬೆಂಗಳೂರು: ಅಂಗಾಂಗ ದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿ ದಂತೆ, ಹೀಗಾಗಿ ಪ್ರತಿಯೊಬ್ಬರೂ ಅಂಗಾಂಗದಾನ ಮಾಡಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ಪಾಟೀಲ್‌ ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ಕಿಡ್ನಿ ದಿನಾಚರಣೆ ಪ್ರಯುಕ್ತ ದೀರ್ಘಾವಧಿ ಮೂತ್ರಪಿಂಡ ಕಾಯಿಲೆಯಿಂದಾಗುವ ಆರೋಗ್ಯ ಸಮಸ್ಯೆಯ ಕುರಿತು ಜಾಗೃತಿ ಮೂಡಿಸಲು ಎಸ್‌ಎಸ್‌ ಸ್ಪರ್ಶ್‌ ಆಸ್ಪತ್ರೆ ಆಯೋ ಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ: Bangalore News: ಹೊಸ ಆಕಾರ, ಮತ್ತಷ್ಟು ಖುಷಿ! ಅಲ್ಬೆನ್ಲಿಬೆ ಜಸ್ಟ್ ಜೆಲ್ಲಿಯಿಂದ ಜಂಗಲ್ ಲ್ಯಾಂಡ್ ಮತ್ತು ಫ್ರೂಟಿ ಸಲಾಡ್ ಬಿಡುಗಡೆ

ಅಂಗಾಂಗ ದಾನ ಮಾನವೀಯತೆಯ ಪರಮೋಚ್ಛ ಕಾರ್ಯಗಳಲ್ಲಿ ಒಂದು. ನಾವೆಲ್ಲರೂ ಈ ಶ್ರೇಷ್ಟ ಕಾರ್ಯವನ್ನು ಬೆಂಬಲಿಸಬೇಕು” ಎಂದ ಅವರು ಜೀವ ರಕ್ಷಕ ಅಂಗಾಂಗ ಕಸಿಗೆ ಅನುವು ಮಾಡಿಕೊಡುವ ಕರ್ನಾಟಕ ಅಂಗ ಮತ್ತು ಅಂಗಾಂಶಗಳ ಕಸಿ ಸಂಸ್ಥೆ (SOTTO Karnataka)ಯ ಪಾತ್ರ ಹಾಗೂ ವೈದ್ಯರು, ದಾನಿಗಳ ತ್ಯಾಗವನ್ನು ಶ್ಲಾಘಿಸಿದರು. ಕಿಡ್ನಿ ಸಂಬಂಧಿ ಕಾಯಿಲೆಗಳ ಕುರಿತು ಜಾಗೃತಿ ಮೂಡಿಸುವುದು, ಅಂಗಾಂಗ ದಾನ ಹಾಗೂ ವಿಶ್ವ ದರ್ಜೆಯ ಕಸಿ ಸೌಕರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಅಂಗಾಂಗದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತೆ. ವರದಿಗಳ ಪ್ರಕಾರ ಮಹಿಳೆಯರೇ ಹೆಚ್ಚು ಅಂಗಾಂಗದಾನ ಮಾಡಲು ಮುಂದಾಗುತ್ತಾರೆ. ಪುರುಷರೂ ಸಹ ಅಂಗಾಂಗದಾನ ಮಾಡಲು ಮುಂದಾಗಬೇಕು. ನಮ್ಮ ದೇಹದಲ್ಲಿ ಬದುಕಿರುವಾಗಲೇ ಅಂಗಾಂಗದಾನ ಮಾಡುವುದರಿಂದ ನಮ್ಮ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಬಗ್ಗೆ ಜಾಗೃತಿಯ ಅವಶ್ಯಕತೆ ಇದೆ ಎಂದು ಹೇಳಿದರು.

ಸ್ಪರ್ಶ್‌ ಆಸ್ಪತ್ರೆ ಸಮೂಹದ ಅಧ್ಯಕ್ಷರಾದ ಡಾ.ಶರಣ್‌ ಶಿವರಾಜ್‌ ಪಾಟೀಲ್‌ ಮಾತನಾಡಿ “ಕಿಡ್ನಿ ಸಮಸ್ಯೆಯು ಕೇವಲ ವೈದ್ಯಕೀಯವಾಗಿ ಮಾತ್ರವಲ್ಲ ಇದು ಕುಟುಂಬಗಳ ಮೇಲೆ ಅಪಾರವಾದ ಆರ್ಥಿಕ ಮತ್ತು ಭಾವನಾತ್ಮಕ ಹೊರೆ ಬೀಳುವಂತೆ ಮಾಡುತ್ತದೆ. ಆರಂಭಿಕ ಹಂತದಲ್ಲೇ ರೋಗ ನಿರ್ಣಯ, ಆರೋಗ್ಯಕರವಾದ ಜೀವನ ಶೈಲಿ ರೂಢಿಸಿಕೊಳ್ಳುವುದು ಹಾಗೂ ಮಧುಮೇಹದಂತಹ ಸಮಸ್ಯೆಗಳನ್ನು ಸೂಕ್ತವಾಗಿ ನಿಭಾಯಿಸುವುದು ದೀರ್ಘಾ ವಧಿ ಕಿಡ್ನಿ ಸಮಸ್ಯೆಯ ಅಪಾಯವನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡಬಲ್ಲ ದು. ಅತ್ಯಾಧುನಿಕ ಸೌಲಭ್ಯಗಳು, ಸುಧಾರಿತ ಪರಿಣತಿಯೊಂದಿಗೆ ಸ್ಪರ್ಶ್‌ನ ವೈದ್ಯಕೀಯ ತಂಡವು ಕಿಡ್ನಿ ಕಸಿ ಮೂಲಕ ಜೀವ ಉಳಿಸಬಲ್ಲ ಚಿಕಿತ್ಸೆ ಮತ್ತು ಆರೈಕೆಗೆ ಸರ್ವ ಸನ್ನದ್ಧ ವಾಗಿದ್ದು ಕಿಡ್ನಿ ಕಸಿ ಅಗತ್ಯವಿರುವ ರೋಗಿಗಳ ಪಾಲಿಗೆ ಹೊಸ ಭರವಸೆ ಮೂಡಿಸಿದೆ ಎಂದು ತಿಳಿಸಿದರು.

ನೆಫ್ರೋಲಜಿ ವಿಭಾಗದ ಹಿರಿಯ ತಜ್ಞ ಡಾ.ಹರ್ಷ ಕುಮಾರ್‌, ಎಸ್‌ಎಸ್‌ ಸ್ಪರ್ಶ್‌ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಹಿರಿಯ ಸಮಾಲೋಚಕ ಮತ್ತು ಅಂಗಾಂಗ ಕಸಿ ವೈದ್ಯ ಡಾ.ಸುನಿಲ್‌ ಆರ್‌ ಮತ್ತಿತರರು ಉಪಸ್ಥಿತರಿದ್ದರು.