ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Jayadeva Hospital: ಜಯದೇವ ಆಸ್ಪತ್ರೆ ನೂತನ ನಿರ್ದೇಶಕರಾಗಿ ಡಾ.ದಿನೇಶ್ ನೇಮಕ

Dr. B. Dinesh: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರ ನಿರ್ದೇಶಕ ಡಾ.ಕೆ.ಎಸ್‌. ರವೀಂದ್ರನಾಥ್‌ ಅವರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನೂತನ ನಿರ್ದೇಶಕರನ್ನು ಸರ್ಕಾರ ನೇಮಿಸಿದೆ. ನೂತನ ನಿರ್ದೇಶಕ ಡಾ.ಬಿ.ದಿನೇಶ್ ಅವರು ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಇಂಟರ್‌ವೆನ್ಷನಲ್‌ ಕಾರ್ಡಿಯಾಲಜಿಸ್ಟ್ ಮತ್ತು ಕಾರ್ಡಿಯಾಲಜಿ ವಿಭಾಗದ ಪ್ರೊಫೆಸರ್‌ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬೆಂಗಳೂರು: ನಗರದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (Jayadeva Hospital) ನೂತನ ನಿರ್ದೇಶಕರಾಗಿ ಡಾ.ದಿನೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ದಿನೇಶ್ ಅವರನ್ನು, ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನೂತನ ನಿರ್ದೇಶಕರನ್ನಾಗಿ ನೇಮಿಸಿದೆ.

ಸಂಸ್ಥೆಯ ಪ್ರಭಾರ ನಿರ್ದೇಶಕ ಡಾ.ಕೆ.ಎಸ್‌. ರವೀಂದ್ರನಾಥ್‌ ಅವರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನೂತನ ನಿರ್ದೇಶಕರನ್ನು ಸರ್ಕಾರ ನೇಮಿಸಿದೆ. ಡಾ.ಬಿ.ದಿನೇಶ್ ಅವರು ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಇಂಟರ್‌ವೆನ್ಷನಲ್‌ ಕಾರ್ಡಿಯಾಲಜಿಸ್ಟ್ ಮತ್ತು ಕಾರ್ಡಿಯಾಲಜಿ ವಿಭಾಗದ ಪ್ರೊಫೆಸರ್‌ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೈಸೂರಿನ ತಿ.ನರಸೀಪುರ ತಾಲೂಕಿನ ದೊಡ್ಡೆಬಾಗಿಲು ಗ್ರಾಮದ ಕೃಷಿಕ ಕುಟುಂಬದಲ್ಲಿ ಡಾ.ದಿನೇಶ್ ಜನಿಸಿದ್ದರು. ಮೈಸೂರಲ್ಲಿ ಎಂಬಿಬಿಎಸ್ ಮುಗಿಸಿ ಆರೋಗ್ಯ ಇಲಾಖೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಕೆ.ಆರ್. ಆಸ್ಪತ್ರೆಯಲ್ಲಿ ಎಂಡಿ ವ್ಯಾಸಂಗ ಮಾಡಿದ ಬಳಿಕ ಮೈಸೂರು ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿಭಾಗದ ಉಪನ್ಯಾಸಕರಾಗಿ, ಸಹಾಯಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | PM Awas Yojana: ಪಿಎಂ ಆವಾಸ್ ಯೋಜನೆಯಡಿ ಒಟ್ಟು 47,848 ಮನೆಗಳ ಮಂಜೂರು: ಸಿಎಂ

ಕಳೆದ ವಾರವಷ್ಟೆ ನೂತನ ನಿರ್ದೇಶಕರ ಆಯ್ಕೆ ಸಂಬಂಧ ಸಂದರ್ಶನ ನಡೆಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಖುದ್ದು ಈ ಸಂದರ್ಶನ ನಡೆಸಿದ್ದರು. ಆದರೆ ನಿವೃತ್ತ ಪ್ರಾಧ್ಯಾಪಕರೊಬ್ಬರು ಕೋರ್ಟ್‌ ಮೊರೆ ಹೋಗಿದ್ದ ಕಾರಣ ಫಲಿತಾಂಶ ಪ್ರಕಟಿಸಿರಲಿಲ್ಲ. ಇದೀಗ ಕೋರ್ಟ್‌ ಕೇಳಿದ್ದ ಮಾಹಿತಿಗಳನ್ನು ಒದಗಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಆಯ್ಕೆಗೊಂಡ ಅಭ್ಯರ್ಥಿ ಹೆಸರು ಪ್ರಕಟಿಸಲು ಅನುಮತಿ ನೀಡಿದೆ.