ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ 9 ಕೋಟಿ ಮೌಲ್ಯದ ಡ್ರಗ್ಸ್‌ ವಶ; ನಾಯಿಗೆ ನೀಡುವ ಫುಡ್‌ ಪ್ಯಾಕೆಟ್‌ನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳು!

Drugs seized in Bengaluru: ಬೆಂಗಳೂರಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಆರೋಪಿ ಹಾಗೂ ಆತನ ಸಂಪರ್ಕದಲ್ಲಿದ್ದ ಇಬ್ಬರನ್ನು ಅಧಿಕಾರಿಗಳು ಅರೆಸ್ಟ್‌ ಮಾಡಿದ್ದಾರೆ. ನಾಯಿಗೆ ನೀಡುವ ಫುಡ್‌ ಪ್ಯಾಕೆಟ್‌ನಲ್ಲಿ ಮಾದಕ ವಸ್ತುಗಳನ್ನು ಇಟ್ಟು ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸಾಗಿಸುತ್ತಿದ್ದ ವೇಳೆ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಬೆಂಗಳೂರಿನಲ್ಲಿ 9 ಕೋಟಿ ಮೌಲ್ಯದ ಡ್ರಗ್ಸ್‌ ವಶ; ಮೂವರು ಅರೆಸ್ಟ್‌

ಬೆಂಗಳೂರಿನಲ್ಲಿ ಜಪ್ತಿ ಮಾಡಿರುವ ಡ್ರಗ್ಸ್‌. -

Prabhakara R
Prabhakara R Mar 22, 2026 1:55 PM

ಬೆಂಗಳೂರು: ನಗರದಲ್ಲಿ ಡಿಆರ್‌ಐ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 9 ಕೋಟಿ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದು (Drugs seized in Bengaluru), ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಯಿಗೆ ನೀಡುವ ಫುಡ್‌ ಪ್ಯಾಕೆಟ್‌ನಲ್ಲಿ ಡ್ರಗ್ಸ್‌ ಇಟ್ಟು ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ವೇಳೆ ವಶಪಡಿಸಿಕೊಳ್ಳಲಾಗಿದೆ.

ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಆರೋಪಿ ಹಾಗೂ ಆತನ ಸಂಪರ್ಕದಲ್ಲಿದ್ದ ಇಬ್ಬರನ್ನು ಅಧಿಕಾರಿಗಳು ಅರೆಸ್ಟ್‌ ಮಾಡಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಆರೋಪಿಯ ಬೆಂಗಳೂರಿನ ಮನೆಯಲ್ಲಿ 40 ಡೆಬಿಟ್ ಕಾರ್ಡ್, 70 ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಮೂವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ಅಂತಾರಾಜ್ಯ ಡ್ರಗ್ಸ್ ಜಾಲದ ಹಿಂದೆ ಇರುವ ಪ್ರಮುಖ ಸೂತ್ರಧಾರಿಗಳ ಪತ್ತೆಗಾಗಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಮಾದಕ ವಸ್ತುಗಳನ್ನು ಯಾರಿಗೆ ತಲುಪಿಸಲಾಗುತ್ತಿತ್ತು ಎಂಬ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಕೇಸ್‌; ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಕಾರ್ ಡ್ರಿಫ್ಟಿಂಗ್?

ಬೆಂಗಳೂರಿನಲ್ಲಿ ಯುವಕನ ಬರ್ಬರ ಕೊಲೆ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿನಗರದಲ್ಲಿ ಭಾನುವಾರ ಮುಂಜಾನೆ ನಡೆದಿದೆ.

ಕಿರಣ್ (25) ಎನ್ನುವ ಯುವಕನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ಕಿರಣ್ ಅಪರಾಧ ಪ್ರಕರಣಗಳ ಹಿನ್ನೆಲೆ ಹೊಂದಿದ್ದ ಎನ್ನಲಾಗಿದೆ. ರಾಮಮೂರ್ತಿ ನಗರದ ಟಿಸಿ ಪಾಳ್ಯ ಮುಖ್ಯ ರಸ್ತೆಯಲ್ಲಿ ಇಂದು ಮುಂಜಾನೆ ಯುವಕನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ರಾಮಮೂರ್ತಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.