ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಮೇಲೆ ಇ.ಡಿ ಅಧಿಕಾರಿಗಳ ದಾಳಿ; ಬಂಧನ

Shivashankarappa Sahukar: ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿ ಶಿವಶಂಕರಪ್ಪ ಅವರನ್ನು ವಿಚಾರಣೆ ನಡೆಸಿ ವಶಕ್ಕೆ ಪಡೆದರು.

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಬಂಧನ

ಶಿವಶಂಕರಪ್ಪ ಸಾಹುಕಾರ್ ಮತ್ತಿ ಇ.ಡಿ ಲೋಗೋ -

Ramesh Ballamoole
Ramesh Ballamoole Oct 6, 2026 6:15 PM

ಬೆಂಗಳೂರು, ಅ. 6: ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ (Shivashankarappa Sahukar) ಅವರನ್ನು ಜಾರಿ ನಿರ್ದೇಶನಾಲಯ (ED) ವಶಕ್ಕೆ ಪಡೆದುಕೊಂಡಿದೆ. ಮಂಗಳವಾರ (ಅಕ್ಟೋಬರ್ 6) ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದರು. ಈ ವೇಳೆ ಮನೆಯಲ್ಲೇ ಇದ್ದ ಶಿವಶಂಕರಪ್ಪ ಅವರನ್ನು ವಿಚಾರಣೆ ನಡೆಸಿ ಬಳಿಕ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇನ್ನೊಂದೆಡೆ ಇದೇ ಪ್ರಕರಣದಲ್ಲಿ ಕೆಪಿಎಸ್​ಸಿ ಸದಸ್ಯೆ ಬಿ.ವಿ. ಗೀತಾ ಅವರನ್ನು ಬೆಂಗಳೂರಿನ ಅವರ ಮನೆಯಲ್ಲೇ ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಕೆಪಿಎಸ್‌ಸಿ ಹಗರಣ ಪ್ರಕರಣ ಸಂಬಂಧ 2ನೇ ಬಾರಿಗೆ ಶಿವಶಂಕರಪ್ಪ ಅವರ ಮನೆ ಮೇಲೆ ಇ.ಡಿ ದಾಳಿ ಮಾಡಿದೆ. ಅದರ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ.

ಹಿಂದೆಯೂ ದಾಳಿ ನಡೆದಿತ್ತು

ಈ ಹಿಂದೆ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಆಗಸ್ಟ್‌ 18ರಂದು ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದರು. ಶಿವಶಂಕರಪ್ಪ ಎಸ್‌. ಸಾಹುಕಾರ ಅವರ ನಿವಾಸ ಸೇರಿ ಒಟ್ಟು 21 ಕಡೆಗಳಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸ, ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ, ಮಧ್ಯವರ್ತಿಗಳು, ಪತ್ರಿಕೆ ಡಿಜಿಟಲ್ ಮೌಲ್ಯಮಾಪನ ಸಂಸ್ಥೆ ಸೇರಿ ಆಯ್ಕೆಯಾದ ಕೆಲವು ಅಭ್ಯರ್ಥಿಗಳ ಮನೆ ಮೇಲೂ ಇ.ಡಿ ದಾಳಿ ನಡೆಸಿತ್ತು.

ಯಾರೊಂದಿಗೂ ಕೆಪಿಎಸ್‌ಸಿ ಡೀಲ್ ಮಾಡಿಲ್ಲ: ಶಿವಶಂಕರಪ್ಪ ಸಾಹುಕಾರ್ ಹೇಳಿಕೆ

ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಕೋಟ್ಯಂತರ ರೂಪಾಯಿ ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಸಿಆರ್‌ಪಿಎಫ್ ಯೋಧರ ಭದ್ರತೆಯೊಂದಿಗೆ ಅಧಿಕಾರಿಗಳು ಶೋಧ ನಡೆಸಿದ್ದರು.

ಏನಿದು ಪ್ರಕರಣ?

ಇತ್ತೀಚೆಗೆ ಕೆಪಿಎಸ್‌ಸಿ ನಡೆಸಿದ 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಭಾರಿ ವಿವಾದಕ್ಕೆ ಕಾರಣವಾಗಿದೆ. 342 ಸಾಮಾನ್ಯ ಹಾಗೂ 58 ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಗಾಗಿ ಜನವರಿಯಲ್ಲಿ ಪರೀಕ್ಷೆ ನಡೆದಿದ್ದು, ಜುಲೈ 17ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಿತ್ತು. ಬಳಿಕ ಅಭ್ಯರ್ಥಿಗಳು ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಕೆಲವು ಅಭ್ಯರ್ಥಿಗಳು ಹುದ್ದೆ ಕೊಡಿಸುವುದಾಗಿ ಮಧ್ಯವರ್ತಿಗಳು 70ರಿಂದ 80 ಲಕ್ಷ ರೂಪಾಯಿವರೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದರು.

ಜು.13ರ ಅಮಾನತು ಆದೇಶ ರದ್ದು ಮಾಡಿದ ʼಹೈʼ: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ 2ನೇ ಬಾರಿ ಅಮಾನತು!

ರೆಸಾರ್ಟ್‌ನಲ್ಲಿ ತರಬೇತಿ

ಪಶು ವೈದ್ಯಾಧಿಕಾರಿ ಹುದ್ದೆ ಪಡೆಯಲು ಹಣ ಕೊಟ್ಟಿದ್ದ ಅಭ್ಯರ್ಥಿಗಳಿಗೆ ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಯಲು ತರಬೇತಿ ನೀಡಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಿತ್ತು. ನಗರ ಹೊರವಲಯದ ದೇವನ ಹಳ್ಳಿಯಲ್ಲಿರುವ ವಿ ಕಂ ರೆಸಾರ್ಟ್‌ನಲ್ಲಿ ಹಣಕೊಟ್ಟ ಅಭ್ಯರ್ಥಿಗಳಿಗೆ ಪ್ರಶ್ನೆಗಳಿಗೆ ಹೇಗೆ ಉತ್ತರ ಬರೆಯ ಬೇಕೆಂಬುವುದು ತರಬೇತಿ ನೀಡಲಾಗಿತ್ತು ಎನ್ನಲಾಗಿದೆ.

ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.