ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ; ಬೆಂಗಳೂರು ನಿವಾಸ ಸೇರಿದಂತೆ 15 ಕಡೆ ಶೋಧ

Satish Jarkiholi: ಕರ್ನಾಟಕದ ಲೋಕೋಪಯೋಗಿ ಸತೀಶ್‌ ಜಾರಕಿಹೊಳಿ ಅವರ ಬೆಂಗಳೂರು ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ. ಅಬಕಾರಿ ಇಲಾಖೆಯ ಅಧಿಕಾರಿ ಮಂಜುನಾಥ್ ಅವರಿಗೆ ಸಂಬಂಧಿಸಿದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು, ಬೆಳಗಾವಿ ಸೇರಿ ಹಲವು ಕಡೆ ದಾಳಿ ನಡೆದಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕದ ಲೋಕೋಪಯೋಗಿ ಸತೀಶ್‌ ಜಾರಕಿಹೊಳಿ (Satish Jarkiholi) ಅವರ ಬೆಂಗಳೂರು ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ. ಅಬಕಾರಿ ಇಲಾಖೆಯ ಅಧಿಕಾರಿ ಮಂಜುನಾಥ್ ಅವರಿಗೆ ಸಂಬಂಧಿಸಿದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು, ಬೆಳಗಾವಿ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳು ಈ ಬೃಹತ್ ಶೋಧ ಕಾರ್ಯ ಕೈಗೊಂಡಿದ್ದಾರೆ.

ಈ ಹಿಂದೆ ಸಚಿವರ ಸಂಬಂಧಿ ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಡಾ. ವೈ. ಮಂಜುನಾಥ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಈ ಹಿಂದೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಮಂಜುನಾಥ್ ಅವರ ಅಬಕಾರಿ ಅಕ್ರಮಗಳಿಗೆ ಸಂಬಂಧಿಸಿದಂತೆ, ಒಟ್ಟು 18 ಅನಧಿಕೃತ ಲಿಕ್ಕರ್ ಲೈಸೆನ್ಸ್‌ಗಳನ್ನು ಕೊಡಿಸಲು ಸಚಿವ ಸತೀಶ್ ಜಾರಕಿಹೊಳಿ ಅವರು ನೇರವಾಗಿ ಸಹಾಯ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದೀಗ ಇ.ಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಜೂನ್ ತಿಂಗಳಲ್ಲಿ ಮಂಜುನಾಥ್ ಅವರಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಇಡಿ, ಅಕ್ರಮ ಬೇನಾಮಿ ಆಸ್ತಿ ಮತ್ತು ಅನುಮಾನಾಸ್ಪದ ವಿದೇಶಿ ವಹಿವಾಟಿನ ಆರೋಪದಡಿಯಲ್ಲಿ ಒಟ್ಟು ₹13.3 ಕೋಟಿ ಮೌಲ್ಯದ ಆಸ್ತಿ ಮತ್ತು ನಗದನ್ನು ಜಪ್ತಿ ಮಾಡಿತ್ತು. ಕಾರ್ಯಾಚರಣೆಯ ವೇಳೆ ಮಂಜುನಾಥ್ ಮನೆಯಲ್ಲಿ ನೂರಾರು ಬೇನಾಮಿ ಬಾರ್ ಲೈಸೆನ್ಸ್, 5.5 ಲಕ್ಷ ರೂ. ನಗದು ಹಾಗೂ ಬರೋಬ್ಬರಿ 13.3 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿತ್ತು.

ಆ ತನಿಖೆಯ ಮುಂದುವರಿದ ಭಾಗವಾಗಿ ಹಾಗೂ ಲಭ್ಯವಾದ ಮಹತ್ವದ ಡೈರಿ ಮತ್ತು ದಾಖಲೆಗಳ ಆಧಾರದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಈ ಕ್ರಮ ಜರುಗಿಸಲಾಗಿದೆ.

Vishakha Bhat Heggar

View all posts by this author