ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ED Raid: ಕಾಂಗ್ರೆಸ್‌ ನಾಯಕಿ ಕುಸುಮಾಗೆ ಇಡಿ ಶಾಕ್‌; ಬೆಂಗಳೂರಿನ ಮನೆಯಲ್ಲಿ ಶೋಧ

ED Raid: ಕುಸುಮಾ ಅವರ ಸಹೋದರನ ಜತೆ ಕಾಂಗ್ರೆಸ್‌ ಶಾಸಕ ವಿರೇಂದ್ರ ಪಪ್ಪಿ ವ್ಯವಹಾರ ಹೊಂದಿರುವ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಕುಸುಮಾ ಹನುಮಂತರಾಯಪ್ಪ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿಯಾಗಿದ್ದಾರೆ.

ಬೆಂಗಳೂರು: ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ನಿವಾಸದ ಮೇಲೆ ರೇಡ್‌ ಬೆನ್ನಲ್ಲೇ ಬೆಂಗಳೂರಿನ ಆರ್‌ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ (Congress leader Kusuma) ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮುದ್ದಿನಪಾಳ್ಯ ರಸ್ತೆಯಲ್ಲಿರುವ ಕುಸುಮಾ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಕುಸುಮಾ ಸಹೋದರನ ಜತೆ ಶಾಸಕ ವಿರೇಂದ್ರ ಪಪ್ಪಿ ವ್ಯವಹಾರ ಹೊಂದಿರುವ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಕುಸುಮಾ ಹನುಮಂತರಾಯಪ್ಪ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿಯಾಗಿದ್ದಾರೆ.

ಕಾಂಗ್ರೆಸ್​ ಶಾಸಕ ವೀರೇಂದ್ರ ಪಪ್ಪಿ ನಿವಾಸಗಳ ಮೇಲೆ ದಾಳಿ

ಚಿತ್ರದುರ್ಗ: ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಖಾಸಗಿ ವಾಹನಗಳಲ್ಲಿ ಆಗಮಿಸಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ, ಬೆಂಗಳೂರು, ಗೋವಾ ಸೇರಿ 17 ಕಡೆ ದಾಳಿ ನಡೆದಿದೆ. ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದಲ್ಲಿ ಇಡಿಯಿಂದ ಪರಿಶೀಲನೆ ನಡೆಯುತ್ತಿದೆ.

ಈ ಹಿಂದೆ ಅಂದರೆ 2016ರ ಡಿಸೆಂಬರ್ 11 ರಂದು ಕೆಸಿ ವೀರೇಂದ್ರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ವಿರೇಂದ್ರ ಮನೆಯ ಬಾತ್ ರೂಂನಲ್ಲಿ 5 ಕೋಟಿ ರೂಪಾಯಿಗೂ ಹೆಚ್ಚು ಹಣ, 30 ಕೆಜಿಗೂ ಹೆಚ್ಚು ಚಿನ್ನ ಪತ್ತೆ ಆಗಿತ್ತು.

ಈ ಸುದ್ದಿಯನ್ನೂ ಓದಿ | ED Raid: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ರೇಡ್

ಕೆಸಿ ವಿರೇಂದ್ರ ಒಡೆತನದ ಕಂಪನಿಗಳಿಂದ ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿತ್ತು. ವಿರೇಂದ್ರಗೆ ಸೇರಿದ ರತ್ನ ಗೋಲ್ಡ್, ರತ್ನ ಮಲ್ಟಿ ಸೋರ್ಸ್, ಪಪ್ಪಿ ಟೆಕ್ನಾಲಜಿ, ರತ್ನ ಗೇಮಿಂಗ್ ಸೊಲ್ಯೂಷನ್ಸ್ ಸೇರಿ ಇತರೆ ಕಂಪನಿಗಳಿಂದ ಅಕ್ರಮ ಆರೋಪ ಹಿನ್ನೆಲೆ ದಾಳಿ ನಡೆದಿದೆ.