Eid Milad: ಇಂದು ಈದ್ ಮಿಲಾದ್, ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
Bengaluru: ಈದ್-ಎ-ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸ್ತಬ್ದ ಚಿತ್ರಗಳು, ವಾದ್ಯಗಳ ಮುಖಾಂತರ ಶಿವಾಜಿನಗರ ಕಂಬಲ್ ಪೋಷ್ ದರ್ಗಾಕ್ಕೆ ಮೆರವಣಿಗೆ ಮೂಲಕ ಸಾಗುವುದರಿಂದ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ವ್ಯವಸ್ಥೆಯನ್ನು ಬದಲಿಸಲಾಗಿದೆ.

-

ಬೆಂಗಳೂರು: ಇಂದು ಬೆಂಗಳೂರು (Bengaluru) ಹಾಗೂ ನಾಡಿನ ಎಲ್ಲೆಡೆ ಈದ್ ಮಿಲಾದ್ (Eid Milad) ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರವಾದಿ ಮೊಹಮ್ಮದರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಈ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಜ್ಜಾಗಿದ್ದಾರೆ. ಮುಸ್ಲಿಮರ ಸಾಮೂಹಿಕ ಪ್ರಾರ್ಥನೆ ಮತ್ತು ಮೆರವಣಿಗೆಗಳು ನಡೆಯಲಿವೆ. ಹೀಗಾಗಿ ವಾಹನ ಸವಾರರ ಹಿತದೃಷ್ಟಿಯಿಂದ ಬೆಂಗಳೂರು ಸಂಚಾರ ಪೊಲೀಸರು ಕೆಲ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ರಾತ್ರಿ 10 ಗಂಟೆವರೆಗೆ ವಾಹನ ಸಂಚಾರ (Traffic Advisory) ನಿರ್ಬಂಧಿಸಿದ್ದಾರೆ. ಜೊತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.
ಕೆ.ಜಿ.ಹಳ್ಳಿ, ಪುಲಿಕೇಶಿನಗರ ಮತ್ತು ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಗವಾರ ಮುಖ್ಯರಸ್ತೆ, ಟ್ಯಾನರಿ ಮುಖ್ಯರಸ್ತೆ. ಮತ್ತು ಹೇನ್ಸ್ ರಸ್ತೆ ಮಿಲ್ಲರ್ಸ್ ಮುಖ್ಯರಸ್ತೆಯಲ್ಲಿ ಈದ್-ಎ-ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸ್ತಬ್ದ ಚಿತ್ರಗಳು, ವಾದ್ಯಗಳ ಮುಖಾಂತರ ಶಿವಾಜಿನಗರ ಕಂಬಲ್ ಪೋಷ್ ದರ್ಗಾಕ್ಕೆ ಮೆರವಣಿಗೆ ಮೂಲಕ ಸಾಗುವುದರಿಂದ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ.
ಸಂಚಾರ ನಿರ್ಬಂಧ
ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿದೆ.
ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೆ ಸಂಚಾರ ನಿರ್ಬಂಧ.
ಮಾಸ್ಕ್ ಜಂಕ್ಷನ್‌ನಿಂದ ಎಂಎಂ ರಸ್ತೆ ಮೂಲಕ ನೇತಾಜಿ ಜಂಕ್ಷನ್‌ವರೆಗೆ ಎಂ.ಎಂ. ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಬದಲಾಗಿ ಏಕ ಮುಖ ಸಂಚಾರವನ್ನಾಗಿ ತಾತ್ಕಾಲಿಕವಾಗಿ ಮಾರ್ಪಾಡು ಮಾಡಲಾಗಿದ್ದು, ನೇತಾಜಿ ಜಂಕ್ಷನ್‌ನಿಂದ ಮಾಸ್ಕ್ ಜಂಕ್ಷನ್ ಕಡೆಗೆ ವಾಹನಗಳ ಸಂಚಾರಕ್ಕೆ ಅವಕಾಶವಿರುತ್ತದೆ.
ಹೇನ್ಸ್ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.
"ಸಂಚಾರ ಸಲಹೆ/Traffic advisory"@CPBlr @Jointcptraffic
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) September 4, 2025
@BlrCityPolice
@DCPTrEastBCP
@acpwfieldtrf
@acpeasttraffic pic.twitter.com/6iLpu1LgRM
ಪರ್ಯಾಯ ಮಾರ್ಗಗಳು
ನಾಗವಾರ ಜಂಕ್ಷನ್‌ನಿಂದ ಶಿವಾಜಿನಗರ ಕಡೆಗೆ ಸಂಚರಿಸುವ ವಾಹನಗಳು ನಾಗವಾರ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಹೆಣ್ಣೂರು ಜಂಕ್ಷನ್ ರಸ್ತೆಯಲ್ಲಿ ಬಲ ತಿರುವು ಪಡೆದು ಕಾಚರಕನಹಳ್ಳಿ ರಸ್ತೆ, ಚಂದ್ರಿಕ ಜಂಕ್ಷನ್ ಬಳಿ ಎಡ ತಿರುವು ಪಡೆದು ಲಿಂಗರಾಜಪುರಂ ಪ್ರೈ ಓವರ್ ಮೂಲಕ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ರಾಬರ್ಟ್‌ನ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಹೇನ್ಸ್ ರಸ್ತೆ ಮೂಲಕ ಶಿವಾಜಿ ನಗರ ಕಡೆಗೆ ಸಂಚರಸಬಹುದು. ನಾಗವಾರ ಜಂಕ್ಷನ್‌ನಿಂದ ಬಲತಿರುವು ಪಡೆದು ಹೆಬ್ಬಾಳ ಮುಖಾಂತರ ನಗರಕ್ಕೆ ಸಂಚರಿಸಲು ಅವಕಾಶವಿದೆ.
ಶಿವಾಜಿ ನಗರದ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳನ್ನು ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆಯವರು ಮಾರ್ಗ ಬದಲಾವಣೆ ಮಾಡಿ, ಸ್ಪೆನ್ಸರ್ ರಸ್ತೆಯಲ್ಲಿ ಕಡ್ಡಾಯವಾಗಿ ಬಲ ತಿರುವು ಪಡೆದುಕೊಂಡು ಸ್ಪೆನ್ಸರ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ವೀಲರ್ಸ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ಹಲಸೂರು ಕಡೆಗೆ ಸಂಚರಿಸಬಹುದು.
ಆರ್.ಟಿ.ನಗರದಿಂದ ಕಾವಲ್ ಬೈರಸಂದ್ರ ಮೂಲಕ ಬರುವ ವಾಹನಗಳನ್ನು ಪುಷ್ಪಾಂಜಲಿ ಟಾಕೀಸ್ ಬಳಿ ಎಡ ತಿರುವು ಪಡೆದು ವೀರಣ್ಣ ಪಾಳ್ಯ ಜಂಕ್ಷನ್ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ರಸ್ತೆ ಕಡೆಗೆ ಸಂಚಾರ ಮಾಡಬಹುದು.
ನೇತಾಜಿ ರಸ್ತೆ ಕಡೆಯಿಂದ ಟ್ಯಾನರಿ ರಸ್ತೆ ಮೂಲಕ ನಾಗಾವರ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿದ್ದು, ನೇತಾಜಿ ಜಂಕ್ಷನ್ ಇಂದ ಬಲತಿರುವು ಮಾಸ್ಕ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಕ್ಲಾರೆನ್ಸ್ ರೈಲ್ವೆ ಮೇಲ್ಲೇತುವೆಯಲ್ಲಿ ಪಾಟರಿ ರಸ್ತೆಗೆ ಬಲ ತಿರುವು ಪಡೆದು ಪಾಟರಿ ರಸ್ತೆ ಮತ್ತು ಹೆಣ್ಣೂರು ರಸ್ತೆ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಹೆಣ್ಣೂರು ಮುಖ್ಯರಸ್ತೆ ಲಿಂಗರಾಜಪುರಂ ಪ್ರೈಓವರ್ ಮುಖಾಂತರ ಹೆಣ್ಣೂರು, ಬಾಣಸವಾಡಿ ಹಾಗೂ ಹೊರ ವರ್ತುಲ ರಸ್ತೆ ಕಡೆಗೆ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.
ಮಾಸ್ಕ್ ಜಂಕ್ಷನ್‌ನಿಂದ ಎಂ.ಎಂ ರಸ್ತೆಯಲ್ಲಿ ನೇತಾಜಿ ಜಂಕ್ಷನ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿದ್ದು, ಮಾಸ್ಕ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಮಾಸ್ಕ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ಬಲ ತಿರುವು ಪಡೆದು ಕೋಲ್ಸ್ ರಸ್ತೆಯ ಹೆಚ್.ಪಿ ಪೆಟ್ರೋಲ್ ಬಂಕ್ ಹತ್ತಿರ ಸೌಂಡರ್ಸ್ ರಸ್ತೆಗೆ ಎಡ ತಿರುವು ಪಡೆದು ನೇರವಾಗಿ ಸೆಂಟ್ ಜಾನ್ಸ್ ಚರ್ಚ್ ರಸ್ತೆ ತಲುಪಿ ಕೋಲ್ಸ್ ಪಾರ್ಕ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ಹೇನ್ಸ್ ಜಂಕ್ಷನ್ ತಲುಪಬಹುದು.
ನೇತಾಜಿ ಜಂಕ್ಷನ್‌ನಿಂದ ಹೇನ್ಸ್ ರಸ್ತೆಯಲ್ಲಿ ಹೇನ್ಸ್ ಜಂಕ್ಷನ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿದ್ದು, ನೇತಾಜಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಎಂ.ಎಂ ರಸ್ತೆ ಮೂಲಕ ಮಾಸ್ಕ್ ಜಂಕ್ಷನ್ ತಲುಪಿ ಬಲ ತಿರುವು ಪಡೆದು ಮಾಸ್ಕ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ಬಲ ತಿರುವು ಪಡೆದು ಕೋಲ್ಸ್ ರಸ್ತೆಯ ಹೆಚ್.ಪಿ ಪೆಟ್ರೋಲ್ ಬಂಕ್ ಹತ್ತಿರ ಸೌಂಡರ್ಸ್ ರಸ್ತೆಗೆ ಎಡ ತಿರುವು ಪಡೆದು ನೇರವಾಗಿ ಸೆಂಟ್ ಜಾನ್ಸ್ ಚರ್ಚ್ ರಸ್ತೆ ತಲುಪಿ ಕೋಲ್ಸ್ ಪಾರ್ಕ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ಹೇನ್ಸ್ ಜಂಕ್ಷನ್ ತಲುಪಲು ಅವಕಾಶವಿದೆ.
ಪಾರ್ಕಿಂಗ್ ನಿರ್ಬಂಧಿಸಿರುವ ಸ್ಥಳಗಳು
ಪಾಟರಿ ಸರ್ಕಲ್ನಿಂದ ನಾಗವಾರ ಸಿಗ್ನಲ್, ಗೋವಿಂದಪುರ ಜಂಕ್ಷನ್‌ನಿಂದ ಗೋವಿಂದಪುರ ಕಾ ಮತ್ತು ಸು ಪೊಲೀಸ್ ಠಾಣೆಯವರೆಗೆ ಮತ್ತು ಹೆಚ್.ಬಿ.ಆರ್ ಬಡಾವಣೆಯ ಸಿದ್ದಪ್ಪ ರೆಡ್ಡಿ ಜಂಕ್ಷನ್‌ನಿಂದ ನರೇಂದ್ರ ಟೆಂಟ್ ಜಂಕ್ಷನ್‌ವರೆಗೆ, ನೇತಾಜಿ ರಸ್ತೆ, ಹೇನ್ಸ್ ರಸ್ತೆ, ಎಂ.ಎಂ ರಸ್ತೆ, ಮಾಸ್ಕ್ ರಸ್ತೆ, ಕೋಲ್ಸ್ ರಸ್ತೆ, ಸೌಂಡರ್ಸ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ ಹಾಗೂ ಮಿಲ್ಲರ್ಸ್ ರಸ್ತೆಗಳ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್ ಅನ್ನು ನಿರ್ಬಂಧಿಸಲಾಗಿದೆ.
ಇದನ್ನೂ ಓದಿ: Eid Jewel Trend 2025: ಈದ್ ಸೀಸನ್‌ನಲ್ಲಿ ಬಂತು ಜಗಮಗಿಸುವ ಇಯರಿಂಗ್ಸ್