ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಈದ್‌ ಸಂಘರ್ಷ:‌ 8 ಮಂದಿ ಸೆರೆ

ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮೆರವಣಿಗೆಯ ವೇಳೆ ಎರಡು ಕೋಮಿನ ಗುಂಪುಗಳ ನಡುವೆ ಗಲಾಟೆ ಸಂಬಂಧ ಪ್ರತ್ಯೇಕ ಮೂರು ಪ್ರಕರಣ ದಾಖಲಿಸಿಕೊಂಡಿರುವ ಬಸವನ ಗುಡಿ ಪೊಲೀಸರು ಇಬ್ಬರು ಅಪ್ರಾಪ್ತ ವಯಸ್ಕರು ಸೇರಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಬಸವನಗುಡಿ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಬಸವನಗುಡಿಯಲಿ ಕೋಮುಸಂಘರ್ಷ ಕೆರೆಹಳ್ಳಿ, ಗೋಪಿಗೌಡ, ವಿನೋದ್ ನಾಯಕ್ ಬಂಧನ

ಬೆಂಗಳೂರು: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮೆರವಣಿಗೆಯ ವೇಳೆ ಎರಡು ಕೋಮಿನ ಗುಂಪುಗಳ ನಡುವೆ ಗಲಾಟೆ ಸಂಬಂಧ ಪ್ರತ್ಯೇಕ ಮೂರು ಪ್ರಕರಣ ದಾಖಲಿಸಿಕೊಂಡಿರುವ ಬಸವನ ಗುಡಿ ಪೊಲೀಸರು ಇಬ್ಬರು ಅಪ್ರಾಪ್ತ ವಯಸ್ಕರು ಸೇರಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಬಸವನಗುಡಿ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಮೊದಲನೇ ಪ್ರಕರಣದಲ್ಲಿ ಅಬ್ದುಲ್ ರಜಾಕ್ ಎಂಬವರು ನೀಡಿದ ದೂರಿನ ಮೇರೆಗೆ ಕೋಮು ಸೌಹಾರ್ದತೆಗೆ ಧಕ್ಕೆ ಪ್ರಕರಣ ದಾಖಲಿಸಿ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ, ಗೋಪಿ ಗೌಡ ಹಾಗೂ ವಿನೋದ್ ನಾಯಕ್ ಎಂಬ ವರನ್ನು ಬಂಽಸಲಾಗಿದೆ. ಎರಡನೇ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ದೂರುದಾರರಾಗಿದ್ದು, ಇವರು ನೀಡಿದ ದೂರಿನ ಮೇರೆಗೆ ಕೊಲೆಯತ್ನ ಹಾಗೂ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಕ್ಮಲ್ ಪಾಷಾ, ಅಬೂಬಕರ್, ಸೈಯದ್ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಲಾಗಿದೆ.

ಇದನ್ನೂ ಓದಿ: Eid-Milad: ಚಿಕ್ಕಬಳ್ಳಾಪುರದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ ;ಸಾಮೂಹಿಕ ಪ್ರಾರ್ಥನೆ ಸಲ್ಲಿಕೆ

ಪ್ರಕರಣದಲ್ಲಿ ಇನ್ನಿಬ್ಬರು ಅಪ್ರಾ ಪ್ತ ವಯಸ್ಕರನ್ನು ವಶಕ್ಕೆ ಪಡೆದು ಬಾಲ ನ್ಯಾಯ ಮಂಡಳಿಗೆ ಒಪ್ಪಿಸಲಾಗಿದೆ. ಸಾರ್ವಜನಿಕ ರಸ್ತೆ ತಡೆ ಹಾಗೂ ಸಂಚಾರಕ್ಕೆ ಅಡ್ಡಿ ಆರೋಪದಡಿ ಬಸವನ ಗುಡಿ ಸಂಚಾರ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಮಂಜುನಾಥ್ ನೀಡಿದ ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇನ್ನಿತರ ವಿರುದ್ಧ ಮೂರನೇ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳ ಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ.

ನಡೆದಿದ್ದೇನು?

ಈದ್ ಮಿಲಾದ್ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ಬಸವನಗುಡಿಯ ಕೆ.ಆರ್.ರಸ್ತೆ ಕಡೆಗೆ ಬನಶಂಕರಿಯಿಂದ ಒಂದು ಕೋಮಿನ ಗುಂಪು ಮೆರವಣಿಗೆ ಮಾಡಿಕೊಂಡು ತಮ್ಮ ಧಾರ್ಮಿಕ ಬಾವುಟ ಹಿಡಿದು ಘೋಷಣೆ ಕೂಗುತ್ತಾ ಬರುತ್ತಿತ್ತು. ಈ ವೇಳೆ ರಾಷ್ಟ್ರರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಗುಂಪು ಹಾಗೂ ಇನ್ನೊಂದು ಗುಂಪಿನ ನಡುವೆ ಚಕಮಕಿ ನಡೆದಿದೆ. ಪೊಲೀಸರು ವಶಕ್ಕೆ ಪಡೆದಿದ್ದಾರೆ.